ಬೆಳಗಾವಿ ಉತ್ತರ ಸಬ್ ರಿಜಿಸ್ಟರ್ ಸಚಿನ್ ಮಂಡೇದ ಹಾಗೂ ರಾಯಬಾಗ ಪಶು ವೈದ್ಯಾಧಿಕಾರಿ ಸಂಜಯ ದುರ್ಗನ್ನವರ ಮೇಲೆ ಮನೆಗಳ ಮೇಲೆ, ಲೋಕಾಯುಕ್ತರು ಶುಕ್ರವಾರ ದಾಳಿ ಮಾಡಿದ್ದಾರೆ.
ಇಬ್ಬರು ಅಧಿಕಾರಿಗಳು ಅಕ್ರಮ ಆಸ್ತಿ ಸಂಪಾದನೆ ಮಾಡಿದ ಆರೋಪದಡಿ ದಾಳಿ ಮಾಡಲಾಗಿದೆ. ಲೋಕಾಯುಕ್ತ ಎಸ್ಪಿ ಹನುಮಂತರಾಯ ನೇತೃತ್ವದಲ್ಲಿ ದಾಳಿ ನಡೆದಿದೆ.
ನಗರದ ಅನಗೋಳ, ಹಾರೋಗೇರಿ, ಬೆಲ್ಲದ ಬಾಗೇವಾಡಿ ಸೇರಿ ಮೂರು ಕಡೆಗಳಲ್ಲಿ ದಾಳಿ ನಡೆದಿದ್ದು, ಅನಗೋಳದಲ್ಲಿ ಲೋಕಾಯುಕ್ತ ಸಿಪಿಐ ನಿರಂಜನ ಪಾಟೀಲ ನೇತೃತ್ವದಲ್ಲಿ ದಾಳಿ ಮಾಡಲಾಗಿದ್ದು ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ