ಬೆಳಗಾವಿ | ಮಹಾರಾಷ್ಟ್ರ ಮಳೆ ಎಫೆಕ್ಟ್: ಚಿಕ್ಕೋಡಿಯಲ್ಲಿ ನದಿಗಳ ನೀರಿನ ಮಟ್ಟ 5 ಅಡಿ ಏರಿಕೆ

Date:

ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮುಂಗಾರು ಮಳೆ ಆರ್ಭಟಿಸುತ್ತಿದ್ದು, ಅದರ ನೇರ ಪರಿಣಾಮ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಪ್ರಮುಖ ನದಿಗಳ ಮೇಲೆ ಗೋಚರಿಸಿದೆ. ಮಹಾರಾಷ್ಟ್ರದ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕೃಷ್ಣಾ, ದೂದ್‌ಗಂಗಾ ಹಾಗೂ ವೇದಗಂಗಾ ನದಿಗಳ ನೀರಿನ ಮಟ್ಟ ಒಂದೇ ದಿನದಲ್ಲಿ ಸುಮಾರು ಐದು ಅಡಿ ಏರಿಕೆಯಾಗಿದೆ.

- Advertisement -

ಕಳೆದ ಕೆಲವು ದಿನಗಳಿಂದ ಬಹುತೇಕ ಬತ್ತಿಹೋಗಿದ್ದ ಕೃಷ್ಣಾ ನದಿ ಈಗ ಮತ್ತೆ ಜೀವಕಳೆ ಪಡೆದಿದ್ದು, ಒಣಗಿದ್ದ ನದಿಯ ಒಡಲು ನೀರಿನಿಂದ ತುಂಬಿ ಹರಿಯುತ್ತಿದೆ. ನೀರಿನ ಹರಿವು ಮತ್ತು ಮಟ್ಟ ದಿಢೀ‌ರ್ ಹೆಚ್ಚಾಗಿರುವುದರಿಂದ ನದಿ ತೀರದ ನಿವಾಸಿಗಳಲ್ಲಿ ಮತ್ತೆ ಪ್ರವಾಹದ ಆತಂಕ ಮನೆಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಮುಂಗಾರು ಆರಂಭದಲ್ಲಿ ಮಳೆಯ ಕೊರತೆಯಿಂದ ಸಂಕಷ್ಟದಲ್ಲಿದ್ದ ರೈತರು ಹಾಗೂ ಸಾರ್ವಜನಿಕರಿಗೆ ನದಿಯಲ್ಲಿ ನೀರು ಹರಿಯುತ್ತಿರುವುದು ಒಂದೆಡೆ ಸಮಾಧಾನ ತಂದಿದ್ದರೂ, ಮತ್ತೊಂದೆಡೆ ನೀರಿನ ಮಟ್ಟ ತ್ವರಿತವಾಗಿ ಏರುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆ ಇದೇ ರೀತಿ ಮುಂದುವರಿದರೆ, ಕೃಷ್ಣಾ, ದೂದ್‌ಗಂಗಾ ಮತ್ತು ವೇದಗಂಗಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುವ ಸಾಧ್ಯತೆ ಇದೆ. ಇದರಿಂದ ಚಿಕ್ಕೋಡಿ ತಾಲೂಕಿನ ತಗ್ಗು ಪ್ರದೇಶಗಳು ಹಾಗೂ ನದಿ ತೀರದ ಗ್ರಾಮಗಳಿಗೆ ನೀರು ನುಗ್ಗುವ ಅಪಾಯ ಎದುರಾಗಬಹುದು ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

Advertisements

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...

ಬೀದರ್‌ | ಯುವ ಸಂಸತ್‍ನಲ್ಲಿ ಮಹತ್ವದ ಚರ್ಚೆ

ಬೀದರ್ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಶನಿವಾರ...

‘ದಾಖಲೆ ತೋರಿಸಿ, ಜಮೀನನ್ನು ನಿಮ್ಮ ಕುಟುಂಬಕ್ಕೇ ಬರೆದುಕೊಡ್ತೀನಿ!’: ಹೆಚ್‌ಡಿಕೆಗೆ ಬಾಲಕೃಷ್ಣ ಸವಾಲು

"ನನ್ನ ಹೆಸರಿನಲ್ಲಿ ನೈಸ್ ರಸ್ತೆ ಯೋಜನಾ ವ್ಯಾಪ್ತಿಯಲ್ಲಿ ಜಮೀನಿದ್ದರೆ ದಾಖಲೆ ಬಿಡುಗಡೆ...

ಬೀದರ್‌ | ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮನ್ನಣೆ

ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮಟ್ಟದಲ್ಲಿ ಮನ್ನಣೆ ಸಿಗುತ್ತಿದೆ ಎಂದು ಕೇಂದ್ರ ಸರ್ಕಾರದ...