ಹೊಲದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದ ಆರೋಪದ ಮೇರೆಗೆ ಅವನ್ನಾ ಸಿದ್ದಪ್ಪ ತಪಶಿ ಎಂಬಾತನನ್ನು ಪೊಲೀಸರು ಬಂಧಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬೆಣಚಿನಮರಡಿ ಗ್ರಾಮದಲ್ಲಿ ನಡೆದಿದೆ.
ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್‌ಐ ಕೆ. ವಾಲಿಕರ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದಾಗ ಹೊಲದಲ್ಲಿ ಬೆಳೆದಿದ್ದ ಸುಮಾರು 13 ಗಾಂಜಾ ಗಿಡಗಳು ಪತ್ತೆಯಾಗಿದ್ದು, ಅವುಗಳನ್ನು ವಶಕ್ಕೆ ಪಡೆಯಲಾಗಿದೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಈ ಕುರಿತು ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗಾಂಜಾ ಬೆಳೆಸಿದ ಹಿನ್ನೆಲೆ ಹಾಗೂ ಇದರ ಹಿಂದೆ ಇತರರು ಇದ್ದಾರೆಯೇ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



