ಮಹಾರಾಷ್ಟ್ರದ ಸಿಂಧದುರ್ಗ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಕವಳೆಸಾತ್ ಫಾಲ್ಸ್ ನಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಕೊಲ್ಲಾಪುರದ ಚಿಲಿ ಕಾಲೋನಿ ನಿವಾಸಿ ರಾಜೇಂದ್ರ ಸಂಗರ್ (45) ಶವವಾಗಿ ಪತ್ತೆಯಾದ ಘಟನೆ ನಡೆದಿದೆ.
ತಾನು ಬಳಸುತ್ತಿದ್ದ ಕರವಸ್ತ್ರವನ್ನು ಹಿಡಿಯಲು ಯತ್ನಿಸಿದಾಗ ರಾಜೇಂದ್ರ ಅವರು ನಿರೀಕ್ಷೆಯಿಲ್ಲದ ರೀತಿಯಲ್ಲಿ ಆಳವಾದ ಕಂದಕಕ್ಕೆ ಬಿದ್ದು ನಾಪತ್ತೆಯಾಗಿದ್ದರು. ಘಟನೆಯ ನಂತರ ತಕ್ಷಣ ಆರಂಭವಾದ ರಕ್ಷಣಾ ಕಾರ್ಯಾಚರಣೆಯಲ್ಲಿ ಎನ್‌ಡಿಆರ್‌ಎಫ್ ಪಡೆ ಹಾಗೂ ಸ್ಥಳೀಯ ನಾಗರಿಕರು ಭಾಗವಹಿಸಿದ್ದರು.
ಈ ಸುದ್ದಿ ಓದಿದ್ದಿರಾ ? ಬೆಳಗಾವಿ : ತಂದೆಗೆ ಮಗನಿಂದ ಲಿವರ್ ದಾನ – ಕೆಎಲ್‌ಇ ಆಸ್ಪತ್ರೆಯಲ್ಲಿ ಯಶಸ್ವಿ ಲಿವರ್ ಕಸಿ ಶಸ್ತ್ರಚಿಕಿತ್ಸೆ
ಸತತ 20 ಗಂಟೆಗಳ ಪ್ರಯತ್ನದ ನಂತರ ರಾಜೇಂದ್ರ ಅವರ ಮೃತದೇಹವನ್ನು ಪತ್ತೆಹಚ್ಚಿ ಹೊರತೆಗೆಯಲಾಗಿದೆ. ಘಟನೆ ಪ್ರವಾಸಿಗರ ನಿರ್ಲಕ್ಷ್ಯದಿಂದಾಗಿ ಸಂಭವಿಸಿರುವ ಸಾಧ್ಯತೆಯ ಹಿನ್ನೆಲೆಯಲ್ಲಿ ಸ್ಥಳೀಯ ಆಡಳಿತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.