ಬೆಳಗಾವಿ | ಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ವ್ಯಕ್ತಿ ಹತ್ಯೆ – ನಾಲ್ವರು ಬಂಧನ

Date:

Advertisements

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ಕಟಕೋಳದಲ್ಲಿ ಭೂಮಿ ವಿವಾದದ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಹತ್ಯೆ ಮಾಡಿರುವ ಪ್ರಕರಣದಲ್ಲಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಫೆಬ್ರವರಿ 25ರಂದು ನಡೆದ ಈ ಘಟನೆ ಮೊದಲು ಅಪಘಾತ ಎಂದು ಶಂಕಿಸಲಾದರೂ, ಬಳಿಕ ನಡೆದ ಪೊಲೀಸ್ ತನಿಖೆಯಿಂದ ಇದು ಯೋಜಿತ ಕೊಲೆ ಎಂಬುದು ಬೆಳಕಿಗೆ ಬಂದಿದೆ.

ಬಂಧಿತರು:
ಈ ಪ್ರಕರಣದಲ್ಲಿ ಕಟಕೋಳದ ಶಂಕರ ಜಾಧವ, ಚಿಕ್ಕೋಡಿಯ ಸುಲ್ತಾನ್ ಕಿಲ್ಲೇದಾರ, ರಾಹುಲ ಬಾಗೇವಾಡಿ ಮತ್ತು ನಿಪ್ಪಾಣಿ ಟಿಪ್ಪು ಮುಜಾವರ ಬಂಧಿತರಾಗಿದ್ದಾರೆ.

ಪ್ರಕರಣದ ಹಿನ್ನಲೆ:
ಮಹಾರಾಷ್ಟ್ರದ ಘಾಟಗೆ ಅವರ 7 ಎಕರೆ 2 ಗುಂಟೆ ಕೃಷಿಭೂಮಿ ಕಟಕೋಳದಲ್ಲಿ ಇತ್ತು. ಈ ಭೂಮಿಯನ್ನು ಶಂಕರ ಜಾಧವ ಉಳುಮೆ ಮಾಡುತ್ತಿದ್ದ. ಆದರೆ, ನ್ಯಾಯಾಲಯದಲ್ಲಿ ಘಾಟಗೆ ಪರವಾಗಿ ತೀರ್ಪು ಬಂದು, ಸಣ್ಣರಾಮಪ್ಪ ಪತ್ತಾರ ಈ ಭೂಮಿಯ ಉಳುಮೆ ನಡೆಸುತ್ತಿದ್ದನು. ಇದರಿಂದ ಶಂಕರ ಜಾಧವ ಮತ್ತು ಸಣ್ಣರಾಮಪ್ಪ ನಡುವೆ ವಿವಾದ ಉಂಟಾಗಿ ಕೊಲೆಗೂ ಕಾರಣವಾಯಿತು.

Advertisements

₹2.5 ಲಕ್ಷ ಸುಪಾರಿ:
ಶಂಕರ ಜಾಧವ ಈ ಹತ್ಯೆಗೆ ₹2.5 ಲಕ್ಷ ಸುಪಾರಿ ನೀಡಿದ್ದು, ಅದರಲ್ಲಿ ₹1.5 ಲಕ್ಷ ಈಗಾಗಲೇ ನೀಡಲಾಗಿತ್ತು. ಈ ಹಿಂದೆ ಹಲವಾರು ಬಾರಿ ಕೊಲೆ ಮಾಡಲು ವಿಫಲ ಪ್ರಯತ್ನ ನಡೆಸಲಾಗಿತ್ತು.

ಪೊಲೀಸರ ಕಾರ್ಯಾಚರಣೆ:
ಈ ಪ್ರಕರಣದ ತನಿಖೆ ಕೈಗೊಂಡಿದ್ದ ಕಟಕೋಳ ಠಾಣೆ ಪೊಲೀಸರು, ಸಿಪಿಐ ಐ.ಆರ್. ಪಟ್ಟಣಶೆಟ್ಟಿ ಮತ್ತು ಪಿಎಸ್‌ಐ ಬಸವರಾಜ ಕೊಣ್ಣೂರೆ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೈಕ್ ಮತ್ತು ಬಸ್ ನಡುವೆ ಅಪಘಾತ ಗರ್ಭಿಣಿ ಸಾವು

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನವಿಪೇಠ ರಸ್ತೆಯಲ್ಲಿ ಬಸ್ ಮತ್ತು ಬೈಕ್...

ಬೆಳಗಾವಿ : ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ

ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಾಳೆ ಬುಧವಾರ...

ಬೆಳಗಾವಿ : ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳಗಾವಿಯ ಬಿಮ್ಸ್ ಆವರಣದಲ್ಲಿರುವ ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

ಸಂಪೂರ್ಣ ನೆಲಕಚ್ಚಿದ ಸೋಯಾಬೀನ್‌ ಬೆಳೆ: ಪರಿಹಾರದ ನಿರೀಕ್ಷೆಯಲ್ಲಿ ರೈತರು

ಬೈಲಹೊಂಗಲ, ಸವದತ್ತಿ, ಕಿತ್ತೂರು ಸೇರಿದಂತೆ ಬೆಳಗಾವಿ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಅತಿ...

Download Eedina App Android / iOS

X