ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ನಂದಿಗುಡಿ ಗ್ರಾಮದಲ್ಲಿ ಕೆಂಪಣ್ಣ ಹೆಳವರ ಎಂಬ ವ್ಯಕ್ತಿ ತಮ್ಮ ಮರ್ಮಾಂಗವನ್ನು ಕಲ್ಲಿನಿಂದ ಜಜ್ಜಿಕೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ.
ಘಟನೆಯ ಸಮಯದಲ್ಲಿ ಅವರ ಹೆಂಡತಿ ಮತ್ತು ಮಕ್ಕಳು ಮನೆಯಲ್ಲಿ ಮಲಗಿದ್ದರು. ತೀವ್ರ ಗಾಯಗೊಂಡ ಅವರನ್ನು ತಕ್ಷಣವೇ ಬೆಳಗಾವಿಯ ಬೀಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಘಟನೆಯ ಕುರಿತು ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.