ಬೆಳಗಾವಿ | ಮೂರು ವರ್ಷಗಳ ಹಿಂದೆಯೇ ಮದುವೆ, ಈಗ ಮತ್ತೊಬ್ಬನ ಜೊತೆ ವಿವಾಹಕ್ಕೆ ಸಿದ್ಧತೆ ಆರೋಪ

Date:

ಪರಿಚಯವಿದ್ದ ಯುವತಿಯೊಂದಿಗೆ 2022ರಲ್ಲೇ ಮದುವೆಯಾಗಿದ್ದರೂ, ಇದೀಗ ಆಕೆಯ ತವರು ಮನೆಯವರು ಬಲವಂತವಾಗಿ ಬೇರೆ ವ್ಯಕ್ತಿಗೆ ಮದುವೆ ಮಾಡಿಕೊಡಲು ಮುಂದಾಗಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ಮದುವೆ ನಿಲ್ಲಿಸುವಂತೆ ಮನವಿ ಮಾಡಿದ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ.

- Advertisement -

ಬೆಳಗಾವಿ ಮೂಲದ ವೆಂಕಟೇಶ ರಾಥೋಡ್ ಎಂಬಾತ, ಬೆಳಗಾವಿ ತಾಲೂಕಿನ ಯುವತಿಯನ್ನು ಮೂರು ವರ್ಷಗಳ ಹಿಂದೆ ಪರಸ್ಪರ ಒಪ್ಪಿಗೆಯಿಂದ ಮದುವೆಯಾಗಿದ್ದಾಗಿ ಹೇಳಿಕೊಂಡಿದ್ದಾನೆ. ಮದುವೆಯ ನಂತರ ಪತ್ನಿಗೆ ಹಣ ಸಹಾಯ ಮಾಡಿದ್ದು ಮಾತ್ರವಲ್ಲದೆ, ವಾಸಿಸಲು ಮನೆಯನ್ನು ಖರೀದಿ ಮಾಡಿ ಕೊಟ್ಟಿದ್ದೇನೆ ಎಂದು ಆತ ಆರೋಪಿಸಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಆದರೆ ಇದೀಗ ತನ್ನ ಪತ್ನಿಯನ್ನು ಕುಟುಂಬಸ್ಥರು ಮತ್ತೊಬ್ಬ ವ್ಯಕ್ತಿಗೆ ಮದುವೆ ಮಾಡಲು ಯತ್ನಿಸುತ್ತಿದ್ದಾರೆ ಎಂದು ವೆಂಕಟೇಶ ದೂರಿದ್ದಾನೆ. ಈ ಬೆಳವಣಿಗೆಯಿಂದ ಆತ ಮಾನಸಿಕವಾಗಿ ಕುಗ್ಗಿದ್ದು, ನ್ಯಾಯಕ್ಕಾಗಿ ಅಧಿಕಾರಿಗಳ ಮೊರೆ ಹೋಗಿದ್ದಾನೆ.

ಈ ಕುರಿತು ಮಾತನಾಡಿದ ವೆಂಕಟೇಶ ರಾಥೋಡ್, “ನಾವು ಪರಸ್ಪರ ಒಪ್ಪಿಗೆಯಿಂದ ಮದುವೆಯಾಗಿದ್ದೇವೆ. ಆದರೆ ಈಗ ನನ್ನ ಪತ್ನಿಯನ್ನು ಮತ್ತೊಬ್ಬರಿಗೆ ಮದುವೆ ಮಾಡಲು ಯತ್ನಿಸುತ್ತಿದ್ದಾರೆ. ಈ ಮದುವೆಯನ್ನು ತಕ್ಷಣ ನಿಲ್ಲಿಸಬೇಕು” ಎಂದು ಆಗ್ರಹಿಸಿದ್ದಾನೆ.

ಘಟನೆ ಸಂಬಂಧ ಕಾನೂನು ಹೋರಾಟಕ್ಕೂ ಸಿದ್ಧನಿರುವುದಾಗಿ ಆತ ತಿಳಿಸಿದ್ದಾನೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...