ಬೆಳಗಾವಿ | ಭೀಕರ ಅಗ್ನಿ ಅವಘಡ – 15ಕ್ಕೂ ಹೆಚ್ಚು ಅಂಗಡಿಗಳು ಭಸ್ಮ

Date:

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಜುಗೂಳ ಗ್ರಾಮದ ಬಜಾರ ಪೇಟೆಯಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಅಗ್ನಿ ಅವಘಡದಿಂದ ಸುಮಾರು 12 ರಿಂದ 15 ಅಂಗಡಿಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿಪಾಸ್ತಿಗಳು ನಷ್ಟವಾಗಿವೆ.

- Advertisement -

ವಿದ್ಯುತ್ ಶಾರ್ಟ್ ಸರ್ಕಿಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಕವಾಗಿ ಹರಡಿಕೊಂಡಿದೆ. ಸಿದ್ದೇಶ್ವರ ನೀರಾವರಿ ಸಂಘ, ಗೋಮ್ಮಟೇಶ್ವರ ನೀರಾವರಿ ಸಂಘ, ಸಾಗರ ನೀರಾವರಿ ಸಂಘ, ಅಡಿವೆಪ್ಪಾ ಭನಾಜ ಅವರ ಜೈ ಜೀನೇಂದ್ರ ಹೋಟೆಲ್, ಪ್ರಕಾಶ ಮಡಿವಾಳ ಲಾಂಡ್ರಿ ಅಂಗಡಿ, ಸಿದ್ಧಾಂತ ಶಿರಗುಪ್ಪೆ ಕೀಟನಾಶಕ ಹಾಗೂ ಕೃಷಿ ಔಷಧ ಅಂಗಡಿ, ಅಮೀತ ಶಿಂಧೆ ಸಲೂನ್, ಶೋಭಾ ಘಟಗೆ ಪೈಪ್ ಅಂಗಡಿ, ಭೋಲೆನಾಥ ಐಸ್ ಕ್ರೀಮ್ ಅಂಗಡಿ, ಕುಂಥಿನಾಥ ಭನಾಜ ಅಂಗಡಿ, ಮಾರುತಿ ಮಿಣಚೆ ಫೋಟೋ ಸ್ಟುಡಿಯೋ ಮತ್ತು ಕಂಪ್ಯೂಟರ್ ಸೆಂಟರ್ ಸೇರಿದಂತೆ ಹಲವಾರು ಅಂಗಡಿಗಳು ಬೆಂಕಿಗೆ ಆಹುತಿಯಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಸುದ್ದಿ ತಿಳಿದ ತಕ್ಷಣ ರಾಯಬಾಗ, ಅಥಣಿ ಹಾಗೂ ಉಗಾರ ಸಕ್ಕರೆ ಕಾರ್ಖಾನೆಗಳ ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದು, ಹೆಚ್ಚಿನ ಅನಾಹುತ ತಪ್ಪಿಸಲಾಗಿದೆ.

ಘಟನೆ ಕಾಗವಾಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ತಹಶೀಲ್ದಾರ್ ರವೀಂದ್ರ ಹಾದಿಮನಿ, ಪಿಎಸ್‌ಐ ರಾಘವೇಂದ್ರ ಖೋತ ಹಾಗೂ ಹೆಸ್ಕಾಂ ಎಸ್‌ಒ ಡಿ.ಎಸ್‌. ಅರಳಿಕಟ್ಟಿ ಭಾನುವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸುದ್ದಿ ಓದಿದ್ದಿರಾ ? ಬೆಳಗಾವಿ | ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 15 ಕೋಟಿ ದೋಚಿದ ಸೈಬರ್ ವಂಚಕರು: ಬೆಳಗಾವಿಯಲ್ಲಿ ವೃದ್ಧ ಉದ್ಯಮಿ ಕಂಗಾಲು

ಘಟನೆಯಿಂದ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ನಷ್ಟದ ನಿಖರ ಅಂದಾಜು ಇನ್ನಷ್ಟೇ ತಿಳಿದುಬರಬೇಕಿದೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...

ಬೆಳಗಾವಿ | ಗಣೇಶ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕ ಸಾವು

ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದ ಕೆರೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ತೆರಳಿದ್ದ...

ಬೆಳಗಾವಿ | ಅಕ್ಟೋಬರ್ 4ರಂದು ಶಿವಾಜಿ ಕಾಗಣಿಕರ್ ಕುರಿತು ಮೂರು ಕೃತಿಗಳ ಲೋಕಾರ್ಪಣೆ

ಬೆಳಗಾವಿ ನಗರದ ಕ್ಯಾಂಪ್ ಪ್ರದೇಶದಲ್ಲಿರುವ ಸ್ಕೂಲ್ ಆಫ್‌ ಕಲ್ಟರ್‌ನ ಗೋಗಟೆ ಸಭಾಂಗಣದಲ್ಲಿ...

ಬೆಳಗಾವಿ | ವಿದ್ಯುತ್‌ ಸಂಪರ್ಕ ಕಡಿತ: ಹೆಸ್ಕಾಂ ಅಧಿಕಾರಿಗಳ ಮೇಲೆ ಚನ್ನರಾಜ ಹಟ್ಟಿಹೊಳಿ ಹಲ್ಲೆ ಆರೋಪ

ವಿದ್ಯುತ್‌ ಬಿಲ್ ಬಾಕಿ ಕಾರಣ ಸಂಪರ್ಕ ಕಡಿತಗೊಳಿಸಿದ್ದನ್ನು ಪ್ರಶ್ನಿಸಿ ಹೆಸ್ಕಾಂ ಅಧಿಕಾರಿಗಳ...