ಬೆಳಗಾವಿ | ದಲಿತ ಶಾಲಾ ಮಕ್ಕಳ ಮೇಲಿನ ಅಸ್ಪೃಶ್ಯತೆ ಖಂಡಿಸಿ ಬೃಹತ್‌ ಪ್ರತಿಭಟನೆ

Date:

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಚಿಕ್ಕ ಅಂಗ್ರೋಲಿ ಗ್ರಾಮದಲ್ಲಿ ದಲಿತ ಶಾಲಾ ಮಕ್ಕಳಿಗೆ ಮಹಾಪ್ರಸಾದ ವಿತರಣೆಯ ವೇಳೆ ಅಸ್ಪೃಶ್ಯತೆ ಆಚರಿಸಿ ದೂರದಿಂದ ಊಟ ನೀಡಿದ ಪ್ರಕರಣ ಖಂಡಿಸಿ ವಿವಿಧ ದಲಿತ ಸಂಘಟನೆಗಳು ಬೆಳಗಾವಿ ಜಿಲ್ಲೆಯ ಬಿಡಿ ಗ್ರಾಮದಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿದವು.

- Advertisement -

ಬಿಡಿ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ವಿವಿಧ ದಲಿತ ಸಂಘಟನೆಗಳ ನೇತೃತ್ವದಲ್ಲಿ ಸಾವಿರಾರು ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿ ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾಕಾರರು ಘಟನೆಗೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಿ, ದಲಿತ ಮಕ್ಕಳಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಚಿಕ್ಕ ಅಂಗ್ರೋಲಿ ಗ್ರಾಮದಲ್ಲಿ ಬಸವೇಶ್ವರ ದೇವಸ್ಥಾನದ ಪ್ರಸಾದ ವಿತರಣೆಯ ವೇಳೆ ದಲಿತ ಶಾಲಾ ಮಕ್ಕಳಿಗೆ ಪ್ರತ್ಯೇಕವಾಗಿ ದೂರದಿಂದ ಊಟ ನೀಡುವ ಮೂಲಕ ಅಮಾನವೀಯವಾಗಿ ವರ್ತಿಸಲಾಗಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಜೂನ್ 23ರಂದು ನಂದಗಡ ಪೊಲೀಸ್‌ ಠಾಣೆಯಲ್ಲಿ ಜಾತಿ ನಿಂದನೆ ಹಾಗೂ ಅಸ್ಪೃಶ್ಯತೆ ಸಂಬಂಧಿತ ಪ್ರಕರಣ ದಾಖಲಾಗಿದ್ದು, ಇದುವರೆಗೂ ಆರೋಪಿಗಳ ಬಂಧನವಾಗದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಲಾಗಿದೆ ಎಂದು ಸಂಘಟನೆಗಳ ಮುಖಂಡರು ಹೇಳಿದರು.

ಬಳಿಕ ಪ್ರತಿಭಟನಾಕಾರರು ಬೈಲಹೊಂಗಲ ಡಿವೈಎಸ್‌ಪಿ ಹಾಗೂ ಉಪ ತಹಶೀಲ್ದಾ‌ರ್ ಅವರ ಮೂಲಕ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಮನವಿ ಸಲ್ಲಿಸಿ, ಪ್ರಕರಣದ ಎಲ್ಲ ಆರೋಪಿಗಳನ್ನು ಕೂಡಲೇ ಬಂಧಿಸಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ರಾಜಶೇಖರ ಹಿಂಡಲಗಿ, ಉಮೇಶ್ ಕೋಲಕಾರ, ಶರದ್ ಹೊನ್ನನಾಯಕ, ರಾಯಪ್ಪ ಚಲವಾದಿ, ರಾಘವೇಂದ್ರ ಚಲವಾದಿ, ರಾಜು ಕಾಂಬಳೆ, ಈರಪ್ಪ ಮಾದರ, ಮಹಾಂತೇಶ, ದುರ್ಗಪ್ಪ ಚಲವಾದಿ, ಬಸವರಾಜ ಮಾದರ, ಪುಟ್ಟು ಹವನವರ, ರವಿ ಮಾದರ, ಶಶಿಧರ ನಾಯಕ್‌, ಕಲ್ಲಪ್ಪ ತಳವಾರ, ಪರಶುರಾಮ ಮಾದರ, ಉದಯ ತಳವಾರ, ಚಂದ್ರು ಮಾದರ, ಕಾರ್ತಿಕ್ ತಳವಾರ, ದಯಾನಂದ, ಮಾರುತಿ ಕಾಂಬಳೆ ಸೇರಿದಂತೆ ವಿವಿಧ ದಲಿತ ಸಂಘಟನೆಗಳ ಮುಖಂಡರು ಹಾಗೂ ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಜನವರಿಯಲ್ಲಿ ಅಗ್ನಿವೀರ ಸೇನಾ ಭರ್ತಿ ರ‍್ಯಾಲಿ

ಬೀದರ್‌ ನಗರದಲ್ಲಿ 2027ರ ಜನವರಿ ತಿಂಗಳಲ್ಲಿ 15 ದಿನಗಳ ಕಾಲ ಅಗ್ನಿವೀರ...

ದೇವಿಯಿಂದ ಕತ್ತಿ ಪಡೆದ ರಾಜರ ಕಥೆಗಳು ಶಾಲಾ ಪಠ್ಯದಲ್ಲಿ; NCERTಯಿಂದ ಮತ್ತೊಂದು ವಿವಾದ?

"ಭಾರತದಲ್ಲಿ ದೇವಿಯರ ಆರಾಧನೆಗೂ, ಯುದ್ಧಕ್ಕೂ ಅನಾದಿ ಕಾಲದಿಂದಲೂ ಅವಿನಾಭಾವ ಸಂಬಂಧವಿದೆ. ಪ್ರಾಚೀನ...

‘INDIA’ ಮೈತ್ರಿಕೂಟದ ಸಭೆಗಾಗಿ ದೆಹಲಿಗೆ ಮಮತಾ ಪ್ರಯಾಣ: ‘ದಿಮಾಗಿ ನಕ್ಸಲರ’ ಜತೆ ಸಮಾಲೋಚನೆ ಎಂದ ಸುವೇಂದು ಅಧಿಕಾರಿ

ಬುಧವಾರ ನಡೆಯಲಿರುವ 'INDIA' ಮೈತ್ರಿಕೂಟದ ಪ್ರಮುಖ ಸಭೆಯಲ್ಲಿ ಪಾಲ್ಗೊಳ್ಳಲು ಪಶ್ಚಿಮ ಬಂಗಾಳದ...

ಮೋದಿ ಪ್ರಮಾಣಪತ್ರ ವಿವಾದ: ಕೇಜ್ರಿವಾಲ್ ಮೇಲ್ಮನವಿ ವಜಾಗೊಳಿಸಿದ ಗುಜರಾತ್ ಹೈಕೋರ್ಟ್

ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿ ಪ್ರಮಾಣಪತ್ರವನ್ನು ಬಹಿರಂಗಪಡಿಸುವಂತೆ ಗುಜರಾತ್...