ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮಾವಾ ತಂಬಾಕು ಉತ್ಪನ್ನಗಳು, ಸಾರಾಯಿ ಮಾರಾಟ ಹಾಗೂ ಟ್ರ್ಯಾಕ್ಟರ್‌ನ ಡಿಜೆ ಸೌಂಡ್ ಹಾವಳಿಗೆ ಕಡಿವಾಣ ಹಾಕಿ, ಸಾರ್ವಜನಿಕರ ಆರೋಗ್ಯ ಮತ್ತು ಸಾಮಾಜಿಕ ಸ್ವಾಸ್ಥ್ಯ ಕಾಪಾಡಲು ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ನೋಡಿಕೊಳ್ಳಲಾಗಿದೆ ಇಲಾಖೆಗಳ ಅಧಿಕಾರಿಗಳಿಗೆ ಸಾಮಾಜಿಕ ಹೋರಾಟಗಾರ ಶ್ರೀನಿವಾಸಗೌಡ ಪಾಟೀಲ ಮನವಿ ಸಲ್ಲಿಸಿದರು.
ಕರ್ನಾಟಕ ಸರ್ಕಾರ ನಿಷೇಧಿಸಿರುವ ಮಾವಾ ತುಂಬಕು ಪ್ರದೇಶ ರಾಮದುರ್ಗ ತಾಲ್ಲೂಕಿನ ವಿವಿಧ ಪಾನ್ ಶಾಪ್ ಗಳು ಹಾಗೂ ಮನೆಮನೆಗೆ ತೆರಳಿ ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದೆ. ಇದರಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಯುವಜನತೆ ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ತುಂಬಾಕು ಸೇವನೆಯಿಂದ ಗಂಟಲು ಕ್ಯಾನ್ಸ ಸೇರಿದಂತೆ ಗಂಭೀರ ಕಾಯಿಲೆಗಳು ಉಂಟಾಗುವ ಅಪಾಯವಿದ್ದು, ಅಕ್ರಮ ಮಾರಾಟದಲ್ಲಿ ತೊಡಗಿದ್ದಾರೆ ಅಂಗಡಿಗಳನ್ನು, ಸಂಬಂಧಪಟ್ಟವರ ವಿರುದ್ಧ ದಂಡ ಹಾಗೂ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಇದಲ್ಲದೆ, ಸಂಚಾರ ಸೇರಿದಂತೆ ವಿವಿಧ ವಾಹನಗಳಲ್ಲಿ ಅನಧಿಕೃತವಾಗಿ ಡಿಜೆ ಸೌಂಡ್ ಅಳವಡಿಸಿಕೊಂಡು ಸಾರ್ವಜನಿಕ ರಸ್ತೆಗಳು ಹಾಗೂ ಗ್ರಾಮಗಳಲ್ಲಿ ಅತಿಯಾದ ಶಬ್ದ ಮಾಡುವುದರಿಂದ ಜನರಿಗೆ ತೀವ್ರ ತೊಂದರೆಯಾಗುತ್ತಿದೆ. ಇಂತಹ ವಾಹನಗಳ ವಿರುದ್ಧವೂ ದಂಡ ವಿಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.
28-11-2024 ಮದ್ಯ ಮಾರಾಟವನ್ನು ನಿಷೇಧಿಸುವಂತೆ ಮನವಿ ಸಲ್ಲಿಸಿದರೂ ಸಮಸ್ಯೆ ಮುಂದುವರಿದಿದೆ. ತಾಲೂಕು ಆಡಳಿತ ಈ ಗಂಭೀರ ಸಮಸ್ಯೆಗಳನ್ನು ನಿರ್ಲಕ್ಷಿಸದೆ, ಒಂದು ವಾರದೊಳಗೆ ಸಂಪೂರ್ಣ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಹೋರಾಟ ನಡೆಸಲಾಗಿದೆ ಎಂದು ಮನವಿ ಮಾಡಲಾಗಿದೆ.
ಈ ಕುರಿತು ರಾಮದುರ್ಗ ತಹಶೀಲ್ದಾರರು ಹಾಗೂ ದಂಡಾಧಿಕಾರಿಗಳು, ಪೊಲೀಸ್ ಉಪಾಧೀಕ್ಷಕರು (ಡಿಎಸ್‌ಪಿ), ಪೊಲೀಸ್ ವೃತ್ತ ನಿರೀಕ್ಷಕರು (ಸಿಪಿಐ) ಮತ್ತು ಅಬಕಾರಿ ಇಲಾಖೆ ಇನ್ಸ್‌ಪೆಕ್ಟರಿಗೆ ಮನವಿ ಸಲ್ಲಿಸಲಾಯಿತು. ಶಾಸಕ ಅಶೋಕ ಪಟ್ಟಣ ಅವರಿಗೆ ಮನವಿ ಸಲ್ಲಿಸಿ, ಅಕ್ರಮ ಚಟುವಟಿಕೆಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ರಾಮದುರ್ಗ ತಾಲೂಕಾ ಅಧ್ಯಕ್ಷರು ವಿನಯ ಚಂದರಗಿ ಅವರು ಉಪಸ್ಥಿತರದ್ದರು.


