ಬೆಳಗಾವಿ | ಸಿಎಂ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ: ಡಿಎಚ್‌ಒಗೆ ಶೋಕಾಸ್ ನೋಟಿಸ್‌

Date:

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಬೆಳಗಾವಿ ಪ್ರವಾಸದ ವೇಳೆ ವಿಐಪಿ ಶಿಷ್ಟಾಚಾರ ಉಲ್ಲಂಘನೆ ಹಾಗೂ ವೈದ್ಯಕೀಯ ಭದ್ರತಾ ಲೋಪ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (ಡಿಎಚ್‌ಒ) ಡಾ. ಈಶ್ವರ ಗಡಾದ ಅವರಿಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಶೋಕಾಸ್ ನೋಟಿಸ್‌ ಜಾರಿ ಮಾಡಿದ್ದಾರೆ.

- Advertisement -

ಜುಲೈ 9ರಂದು ಬೆಳಗಾವಿಯಲ್ಲಿ ನಡೆದ ವಿಭಾಗೀಯ ಮಟ್ಟದ ಪ್ರಗತಿ ಪರಿಶೀಲನಾ ಸಭೆಗೆ ಮುಖ್ಯಮಂತ್ರಿ ಆಗಮಿಸಿದ್ದ ವೇಳೆ ಸರ್ಕಾರದ ಸ್ಪಷ್ಟ ಮಾರ್ಗಸೂಚಿಗಳನ್ನು ಪಾಲಿಸದೆ ಕರ್ತವ್ಯ ಲೋಪ ಎಸಗಿರುವುದು ಪರಿಶೀಲನೆಯಲ್ಲಿ ಬೆಳಕಿಗೆ ಬಂದಿದೆ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಇಂಟರ್ನೆಟ್‌ನಿಂದ AIವರೆಗೆ.. ದಶಕಗಳ ಹಿಂದೆಯೇ ಜಗತ್ತಿನ ಭವಿಷ್ಯ ಕಂಡಿದ್ದ...

ತಂತ್ರಜ್ಞಾನ ನಮ್ಮ ಕೈಸೇರುವ, ದೈನಂದಿನ ಬದುಕಿನ ಅವಿಭಾಜ್ಯ ಅಂಗವಾಗುವ ದಶಕಗಳ ಹಿಂದೆಯೇ, ಅಂದಿನ ಕಾಲದ ಕಲಾವಿದರು ತಮ್ಮ ಗೀತೆಗಳ ಸಾಲುಗಳ ಮೂಲಕ ಮುಂದಿನ ಜಗತ್ತು ಹೀಗೇ ಇದ್ದೀತೆಂದು ಖಚಿತವಾಗಿ ಹೇಳಿದ್ದರು. ಮಾನವಕುಲವು ಮುಂದೆ...

ಕೊಪ್ಪಳ | ದಸರಾ ಪುರಾಣ ಪ್ರವಚನಕ್ಕೆ ಮುಸ್ಲಿಂ ಕಲಾವಿದನ...

ಧರ್ಮಗಳು ಬೇರೆ ಬೇರೆಯಾದರೂ ಕಲೆ, ಸಂಸ್ಕೃತಿ ಮತ್ತು ಮಾನವೀಯತೆಯ ಮುಂದೆ ಧರ್ಮದ ಗಡಿಗಳು ಅಡ್ಡಿಯಾಗುವುದಿಲ್ಲ ಎಂಬುದಕ್ಕೆ ಕೊಪ್ಪಳ ತಾಲೂಕಿನ ಅಳವಂಡಿ ಗ್ರಾಮ ಸಾಕ್ಷಿ. ಇಲ್ಲಿನ ಕಂಪ್ಲಿಯಲ್ಲಿರುವ ಬನಶಂಕರಿ ದೇವಸ್ಥಾನದಲ್ಲಿ ನಡೆಯುವ ದಸರಾ ಪುರಾಣ...

ಸರ್ಕಾರದ ನಿಯಮಾವಳಿ ಪ್ರಕಾರ ಮುಖ್ಯಮಂತ್ರಿ ಪ್ರವಾಸದ ವೇಳೆ ಅತ್ಯಾಧುನಿಕ ಜೀವ ರಕ್ಷಕ ಉಪಕರಣಗಳನ್ನು ಹೊಂದಿರುವ ಅಡ್ವಾನ್ಸ್ ಲೈಫ್ ಸಪೋರ್ಟ್ (ಎಎಲ್‌ಎಸ್) ಅಂಬುಲೆನ್ಸ್‌ ಹಾಗೂ ತಜ್ಞ ವೈದ್ಯರ ತಂಡವನ್ನು ಕಡ್ಡಾಯವಾಗಿ ನಿಯೋಜಿಸಬೇಕು. ಆದರೆ, ಸಾಮಾನ್ಯ ಅಂಬುಲೆನ್ಸ್‌ನ್ನು ಮಾತ್ರ ನಿಯೋಜಿಸಿ ಮುಖ್ಯಮಂತ್ರಿಗಳ ಆರೋಗ್ಯ ಭದ್ರತೆ ವಿಷಯದಲ್ಲಿ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಲಾಗಿದೆ.

ಮುಖ್ಯಮಂತ್ರಿ ವಾಸ್ತವ್ಯ ಹೂಡಿದ್ದ ಸ್ಥಳದಲ್ಲಿ ಹಿರಿಯ ತಜ್ಞ ವೈದ್ಯರನ್ನು ನಿಯೋಜಿಸುವ ಬದಲು ಪಿಜಿ ವೈದ್ಯಕೀಯ ವಿದ್ಯಾರ್ಥಿಗಳನ್ನು ಕರ್ತವ್ಯಕ್ಕೆ ನಿಯೋಜಿಸಿದ್ದು, ಪ್ರವಾಸದ ಅವಧಿಯಲ್ಲಿ ವೈದ್ಯಕೀಯ ತಂಡದೊಂದಿಗೆ ನಿರಂತರ ಸಂಪರ್ಕದಲ್ಲಿರದೇ ಜಿಲ್ಲಾಡಳಿತದೊಂದಿಗೆ ಸಮರ್ಪಕ ಸಮನ್ವಯ ಸಾಧಿಸದಿರುವುದೂ ಕರ್ತವ್ಯ ಲೋಪ ಎಂದು ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ.

ಈ ಕುರಿತು ಏಳು ದಿನಗಳೊಳಗೆ ಸಮರ್ಪಕ ವಿವರಣೆ ಸಲ್ಲಿಸುವಂತೆ ಸೂಚಿಸಲಾಗಿದ್ದು, ತೃಪ್ತಿಕರ ಉತ್ತರ ನೀಡದಿದ್ದರೆ ಸೇವೆಯಿಂದ ಅಮಾನತು ಸೇರಿದಂತೆ ಕಠಿಣ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...