ಬೆಳಗಾವಿ | ಲಾಡ್ಜ್‌ನಲ್ಲಿ ರೂಮ್‌ ಕೊಡಲು ನಿರಾಕರಣೆ; ಬೈಕ್, ಕಾರಿನ ಗಾಜು ಒಡೆದು ಪುಂಡಾಟ

Date:

ಲಾಡ್ಜ್‌ನಲ್ಲಿ ರೂಮ್ ಕೊಡಲು ನಿರಾಕರಿಸಿದ್ದಕ್ಕೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಕಿಡಿಗೇಡಿಗಳು ಅಟ್ಟಹಾಸ ಮೆರೆದಿದ್ದಾರೆ. ಕಲ್ಲು ತೂರಿ ಬೈಕ್ ಹಾಗೂ ಕಾರಿನ ಗಾಜುಗಳನ್ನು ಪುಡಿ ಪುಡಿ ಮಾಡಿದ್ದಾರೆ.

- Advertisement -

ಕೈಯಲ್ಲಿ ಲಾಂಗ್, ಮಚ್ಚು ಹಿಡಿದು ವಾಹನಗಳ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಚಿಕ್ಕೋಡಿ ಪಟ್ಟಣದ ಬೃಂದಾವನ ಲಾಡ್ಜ್ ಮುಂದೆ ಪಾರ್ಕ್ ಮಾಡಲಾಗಿದ್ದ ಕಾರ್ ಹಾಗೂ 5 ಕ್ಕೂ ಹೆಚ್ಚು ಬೈಕ್ ಮೇಲೆ ಕಲ್ಲು ತೂರಾಟ ನಡೆಸಿದ್ದು ಕಿಡಿಗೇಡಿಗಳ ಅಟ್ಟಹಾಸಕ್ಕೆ ಬೈಕ್ ಹಾಗೂ ಕಾರ್ ನುಜ್ಜ ಗುಜ್ಜಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ...

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ ಕಾಮಗಾರಿ ಬರೋಬ್ಬರಿ 12 ವರ್ಷದಿಂದ ತೆವಳುತ್ತಿದೆ. 65 ಮೀಟರ್ ಅಗಲದ ಹೈವೇ 45 ಮೀ.ಗೆ ಕುಗ್ಗಿದೆ. ಸಂಚಾರ ಇಕ್ಕಟ್ಟಾಗಿ 27...

ಚಿಕ್ಕೋಡಿಯ ಬೃಂದಾವನ ಲಾಡ್ಜ್‌ನಲ್ಲಿ ಮೂವರು ಯುವಕರು ರೂಮ್ ಕೇಳಲು ಬಂದಿದ್ದರು. ಪಾನಮತ್ತರಾಗಿದ್ದ ಹಿನ್ನೆಲೆ ರೂಮ್ ನೀಡಲು ಲಾಡ್ಜ್ ಮಾಲೀಕ ನಿರಾಕರಿಸಿದ್ದ. ಇದೇ ಸಿಟ್ಟಿನಲ್ಲಿ ಒಂದು ಗಂಟೆ ಬಳಿಕ ಬಂದು ಲಾಡ್ಜ್ ಮೇಲೆ ಹಾಗೂ ಅಲ್ಲೆ ಪಕ್ಕದಲ್ಲಿ ಇದ್ದ ಕಾರ್ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಅಲ್ಲಿಂದ ಓತಾರಿ ಗಲ್ಲಿ ಹೊಸಪೇಟ್ ಗಲ್ಲಿಯಲ್ಲಿನ ಬೈಕ್‌ಗಳ ಮೇಲೆ ಕಲ್ಲು ತೂರಿ ಬೈಕ್‌ಗಳನ್ನ ಕಿಡಿಗೇಡಿಗಳು ಜಖಂ ಮಾಡಿದ್ದಾರೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮಹಾರಾಷ್ಟ್ರದ ಇಚಲಕರಂಜಿ ಮೂಲದ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಶಿವಾಜಿ ಕಾಗಣಿಕರ ಅವರ ಎರಡು ಕೃತಿಗಳು ಲೋಕಾರ್ಪಣೆ

ಖ್ಯಾತ ಪರಿಸರವಾದಿ ಹಾಗೂ ಸಾಮಾಜಿಕ ಕಾರ್ಯಕರ್ತ ಡಾ. ಶಿವಾಜಿ ಕಾಗಣಿಕರ ಅವರ...

ಬೆಳಗಾವಿ | ಅಲ್ಯೂಮಿನಿಯಂ ತಂತಿ ಕಳ್ಳರ ಬಂಧನ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಘಟಗಿ ಬಸವೇಶ್ವರ ನಗರದಲ್ಲಿ...

ಬೆಳಗಾವಿ | ಟ್ರ್ಯಾಕ್ಟರ್‌ ಕಳ್ಳತನ ಪ್ರಕರಣದಲ್ಲಿ ಮೂವರು ಬಂಧನ

ಮನೆಯ ಮುಂದೆ ನಿಲ್ಲಿಸಿದ್ದ ಮಹೀಂದ್ರಾ ಅರ್ಜುನ್ ಟ್ರ್ಯಾಕ್ಟ‌ರ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ...

ಬೆಳಗಾವಿ | ಬೈಲಹೊಂಗಲದಲ್ಲಿ ಪತ್ನಿ ಕೊಲೆ: ಪತಿ ಬಂಧನ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಪತಿಯನ್ನು...