ಬೆಳಗಾವಿ ಪೊಲೀಸ್ ಆಯುಕ್ತ ಭೂಷಣ್ ಗುಲಾಬರಾವ್ ಅವರ ಹೆಸರಿನಲ್ಲಿ ಕಿಡಿಗೇಡಿಗಳು ನಕಲಿ ಫೇಸ್‌ಬುಕ್ ಖಾತೆ ತೆರೆದು ಸಾರ್ವಜನಿಕರನ್ನು ಮರುಳುಗೊಳಿಸುವ ಯತ್ನ ಮಾಡಿದ್ದಾರೆ. ಈ ಸಂಬಂಧ ಆಯುಕ್ತರು ಸ್ವತಃ ದೂರು ನೀಡಿದ್ದು, ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ಈ ನಕಲಿ ಖಾತೆ ಮುಚ್ಚುವ ಪ್ರಕ್ರಿಯೆಗಾಗಿ ಕೆಲ ಸಮಯ ಬೇಕಾಗುವ ಸಾಧ್ಯತೆ ಇರುವುದರಿಂದ, ಸಾರ್ವಜನಿಕರು ಎಚ್ಚರಿಕೆಯಿಂದಿರಬೇಕು ಎಂಬ ಸಂದೇಶವನ್ನು ಆಯುಕ್ತರು ನೀಡಿದ್ದಾರೆ. ನಕಲಿ ಖಾತೆಯಿಂದ ಯಾವುದೇ ಸಂದೇಶ ಬಂದಲ್ಲಿ ಅದನ್ನು ತಕ್ಷಣವೇ ನಿರ್ಲಕ್ಷಿಸಲು ಅವರು ವಿನಂತಿಸಿದ್ದಾರೆ.
ಆಯುಕ್ತರು ಈ ಕುರಿತು ಸ್ಪಷ್ಟನೆ ನೀಡುತ್ತಾ, “ನಾನು ಬೆಳಗಾವಿ ನಗರ ಪೊಲೀಸ್ ಆಯುಕ್ತರ ಅಧಿಕೃತ ಸಾಮಾಜಿಕ ಜಾಲತಾಣಗಳನ್ನಷ್ಟೇ ಬಳಸುತ್ತಿದ್ದು, ನನ್ನ ವೈಯಕ್ತಿಕ ಹೆಸರಿನಲ್ಲಿ ಯಾವುದೇ ಖಾತೆಗಳಿಲ್ಲ,” ಎಂದು ತಿಳಿಸಿದ್ದಾರೆ.
ಪೊಲೀಸರು ಈಗಾಗಲೇ ತನಿಖೆ ಆರಂಭಿಸಿದ್ದು, ಈ ರೀತಿಯ ನಕಲಿ ಖಾತೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ