ಬೆಳಗಾವಿ | ಹೋರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕಿಡಿಗೇಡಿಗಳು

Date:

ಯಾರ ತಂಟೆಗೂ ಹೋಗದೆ ತಿರುಗಾಡುತ್ತಿದ್ದ ಮೂಕ ಪ್ರಾಣಿಯೊಂದರ ಮೇಲೆ ಅಮಾನವೀಯ ಕೃತ್ಯ ಎಸಗಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಖಿಳೇಗಾಂವ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾಗಿದೆ.

- Advertisement -

ಗೂಳಿ ಹೋರಿಗೆ ಕಿಡಿಗೇಡಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದ್ದು, ಬೆಂಕಿಯ ಜ್ವಾಲೆಗೆ ಸಿಲುಕಿದ ಹೋರಿಯ ದೇಹದ ಹಲವು ಭಾಗಗಳು ಸುಟ್ಟು ಗಾಯಗೊಂಡಿವೆ. ತೀವ್ರ ನೋವಿನಿಂದ ಹೋರಿ ನರಳಾಡುತ್ತಿರುವುದನ್ನು ಕಂಡ ಸ್ಥಳೀಯರು ಮರುಗಿ, ತಕ್ಷಣ ಅದರ ನೆರವಿಗೆ ಧಾವಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಪಶುವೈದ್ಯರು ಹಾಗೂ ಸ್ಥಳೀಯರು ಸೇರಿ ಗಾಯಗೊಂಡ ಹೋರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಹೋರಿ ಪ್ರಿಯ ಮುರುಗೇಶ್‌ ಪಾಟೀಲ್‌ ಕೂಡ ಸ್ಥಳಕ್ಕೆ ಧಾವಿಸಿ, ಗಾಯಗೊಂಡ ಹೋರಿಯ ಆರೈಕೆಗೆ ನೆರವಾಗಿದ್ದಾರೆ.

ಮೂಕ ಪ್ರಾಣಿಯ ಮೇಲೆ ಇಂತಹ ಕೃತ್ಯ ನಡೆದಿರುವುದು ಸ್ಥಳೀಯರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಕೃತ್ಯ ಎಸಗಿದವರು ಯಾರೇ ಆಗಿರಲಿ, ಅವರನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಘಟನೆ ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಸಕ್ಕರೆ ಕಾರ್ಖಾನೆ ಕಾರ್ಮಿಕರ ರಾಜ್ಯಮಟ್ಟದ ಸಮಾವೇಶ: ಪ್ರಮುಖ ನಿರ್ಣಯಗಳ ಅಂಗೀಕಾರ

ಸಕ್ಕರೆ ಕಾರ್ಖಾನೆ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಯುನೈಟೆಡ್...

ಬೆಳಗಾವಿ | ಇಂದು ಬಸವ ಜಯಂತಿ ಉತ್ಸವ ಸಮಿತಿ ಅಭಿನಂದನಾ ಸಮಾರಂಭ

ಬಸವ ಜಯಂತಿ ಉತ್ಸವ ಸಮಿತಿ-2026 ವತಿಯಿಂದ ಅಭಿನಂದನಾ ಸಮಾರಂಭವು ಸೆ.27ರಂದು ಸಂಜೆ...

ಬೆಳಗಾವಿ | ಸಾವಿನ ಕದ ತಟ್ಟಿ ಬಂದ ರೈತನ ಮಗನಿಗೆ 12 ಚಿನ್ನದ ಪದಕ

ಬದುಕು ಮುಗಿಯಿತು ಎಂದುಕೊಂಡಿದ್ದ ಕ್ಷಣದಿಂದಲೇ ಹೊಸ ಬದುಕಿನತ್ತ ಹೆಜ್ಜೆ ಇಟ್ಟರು. ಸಾವಿನ...

ಬೆಳಗಾವಿ | ವಿಫಲತೆಯಿಂದ ಕುಗ್ಗದೆ ಯಶಸ್ಸಿನತ್ತ ಸಾಗಿರಿ: ರಾಜ್ಯಪಾಲ ಗೆಹ್ಲೋಟ್

ವಿದ್ಯಾರ್ಥಿಗಳು ಯಶಸ್ಸು ಸಾಧಿಸಿದಾಗ ವಿನಯದಿಂದ ಇರಬೇಕು. ಕಷ್ಟಗಳು ಎದುರಾದಾಗ ತಾಳ್ಮೆ ಕಳೆದುಕೊಳ್ಳದೆ,...