ಬೆಳಗಾವಿ | ಶಾಲೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

Date:

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದಲ್ಲಿ ಇರುವ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಅಮಾನವೀಯ ಘಟನೆ ನಡೆದಿದೆ.

- Advertisement -

ತಡರಾತ್ರಿ ಶಾಲೆಯ ಎರಡು ಕೊಠಡಿಗಳ ಬೀಗಗಳನ್ನು ಮುರಿದು ಒಳನುಗ್ಗಿದ ದುಷ್ಕರ್ಮಿಗಳು, ಮಕ್ಕಳ ಹಾಗೂ ಶಿಕ್ಷಕರ ಪ್ರಮುಖ ದಾಖಲೆಗಳಿಗೆ ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾರೆ. ಹಾಜರಾತಿ ಪುಸ್ತಕಗಳು, ಕುರ್ಚಿಗಳು ಹಾಗೂ 2024 ಮತ್ತು 2025ನೇ ಸಾಲಿನ ಶಿಕ್ಷಕರ ವೈಯಕ್ತಿಕ ದಾಖಲೆಗಳು ಸಂಪೂರ್ಣವಾಗಿ ಭಸ್ಮವಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಕಣ ಭೌತವಿಜ್ಞಾನ-ಖಗೋಳವಿಜ್ಞಾನಗಳೆರಡರ ಸಮ್ಮಿಳನದ...

ಫ್ರಾನ್ಸಿಸ್ ಹಾಲ್ಜೆನ್ ಅವರ ಮೂಲ ಆಲೋಚನೆ ಕೇವಲ ಹಿಮದೊಳಗೆ ಸಂವೇದಕಗಳನ್ನು ಇಡುವ ಯೋಜನೆಯಾಗಿರಲಿಲ್ಲ. ಅದು ವಿಶ್ವವನ್ನು ನೋಡುವ ಹೊಸ ವಿಧಾನಕ್ಕೆ ಬಾಗಿಲು ತೆರೆಯುವ ಆಲೋಚನೆಯಾಗಿತ್ತು. ಅಗೋಚರವಾಗಿರುವ ಕಣಗಳನ್ನು ಹಿಡಿಯುವ ಮೂಲಕ, ವಿಶ್ವದ ಅತ್ಯಂತ...

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಬೆಳಗ್ಗೆ ಶಾಲೆಗೆ ಬಂದ ಶಿಕ್ಷಕರು ಮತ್ತು ವಿದ್ಯಾರ್ಥಿನಿಯರು ಈ ಘಟನೆ ಗಮನಿಸಿ ಬೆಚ್ಚಿಬಿದ್ದಿದ್ದಾರೆ. ಘಟನೆಯಿಂದ ಶಾಲಾ ವಾತಾವರಣದಲ್ಲಿ ಆತಂಕ ನಿರ್ಮಾಣವಾಗಿದೆ.

ದಾಖಲೆಗಳು ನಾಶವಾದ ಹಿನ್ನೆಲೆಯಲ್ಲಿ ಶಾಲೆಯ ಆಡಳಿತಾತ್ಮಕ ಕಾರ್ಯಗಳಿಗೆ ಗಂಭೀರ ತೊಂದರೆ ಉಂಟಾಗಿದೆ. ವಿದ್ಯಾರ್ಥಿನಿಯರ ಶೈಕ್ಷಣಿಕ ಮಾಹಿತಿಯೂ ಹಾನಿಗೊಳಗಾದ ಸಾಧ್ಯತೆ ಇದೆ. ಕೆಲವು ಪೀಠೋಪಕರಣಗಳು ಸಂಪೂರ್ಣ ಸುಟ್ಟು ಹೋಗಿರುವುದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಸವದತ್ತಿ ಪೊಲೀಸ್‌ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ದುಷ್ಕರ್ಮಿಗಳ ಪತ್ತೆಗಾಗಿ ತನಿಖೆ ಮುಂದುವರೆಸಲಾಗಿದೆ.

ಈ ಸುದ್ದಿ ಓದಿದ್ದಿರಾ ? ಬೆಳಗಾವಿ | ಜಮೀನಿನಲ್ಲಿ ಅಪರಚಿತ ವ್ಯಕ್ತಿಯ ಶವ ಪತ್ತೆ

ಸ್ಥಳೀಯರು ಈ ಕೃತ್ಯವನ್ನು ತೀವ್ರವಾಗಿ ಖಂಡಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಂಶೋಧನೆ ದಿಕ್ಕೂಚಿಯಾಗಲಿ: ಉಮೇಶ ಬಾಳಿ

ಬಡತನ, ನಿರುದ್ಯೋಗ, ಲಿಂಗ ತಾರತಮ್ಯ, ಸಾಮಾಜಿಕ ಆರ್ಥಿಕ ಅಸಮಾನತೆ ಸೇರಿದಂತೆ ಭಾರತದಲ್ಲಿನ...

ಬೆಳಗಾವಿ | ಚರಕ ಕೇವಲ ನೂಲು ತೆಗೆಯುವ ಸಾಧನವಾಗಿರಲಿಲ್ಲ ಸ್ವಾವಲಂಬನೆಯ ಸಂಕೇತವಾಗಿತ್ತು

ಜಗತ್ತು ಗುರಿಯಿಲ್ಲದ ನಾಗಾಲೋಟದಲ್ಲಿ ಓಡುತ್ತಿದೆ. ನಿನ್ನೆ ಹೊಸತಾಗಿದ್ದ ತಂತ್ರಜ್ಞಾನ ಇಂದು ಹಳೆಯದಾಗಿ...

ಬೆಳಗಾವಿ | 198 ಮತದಾರರ ಹೆಸರು ಅಳಿಸಲು ಅರ್ಜಿ: ಬಿಜೆಪಿ ಮುಖಂಡ ಸೇರಿ 25 ಮಂದಿ ವಿರುದ್ಧ ಎಫ್‌ಐಆರ್‌

ಬೆಳಗಾವಿ ವೀರಭದ್ರನಗರದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ 198 ಮತದಾರರ ಹೆಸರುಗಳನ್ನು ಮತದಾರರ...