ಬೆಳಗಾವಿ | ದೇವಾಲಯದ ನಂದಿ, ಶಿವಲಿಂಗ ವಿಗ್ರಹ ಧ್ವಂಸಗೊಳಿಸಿದ ಕಿಡಿಗೇಡಿಗಳು

Date:

ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ನಿಡಗಲ್ ಗ್ರಾಮದ ಹೊರವಲಯದ ಸಿದ್ದನಗುಡ್ಡದ ಮೇಲಿರುವ ಐತಿಹಾಸಿಕ ಶ್ರೀ ಸಿದ್ದೇಶ್ವರ (ಸಿದ್ದಗುಂಡ) ದೇವಾಲಯದಲ್ಲಿ ಕಿಡಿಗೇಡಿಗಳು ಶಿವಲಿಂಗ, ನಂದಿ ವಿಗ್ರಹ ಸೇರಿದಂತೆ ಪವಿತ್ರ ವಿಗ್ರಹಗಳನ್ನು ಧ್ವಂಸಗೊಳಿಸಿರುವ ಘಟನೆ ಬೆಳಕಿಗೆ ಬಂದಿದೆ.

- Advertisement -

ನಿಡಗಲ್ ಗ್ರಾಮದಿಂದ ಸುಮಾರು 2 ಕಿ.ಮೀ.ದೂರದಲ್ಲಿರುವ ಬೆಟ್ಟದ ಮೇಲಿರುವ ಈ ದೇವಾಲಯ ಗ್ರಾಮಸ್ಥರ ಆರಾಧನಾ ಕೇಂದ್ರವಾಗಿದೆ. ದುಷ್ಕರ್ಮಿಗಳು ದೇವಾಲಯದಲ್ಲಿ ಹಣ ಹಾಗೂ ಬೆಲೆಬಾಳುವ ವಸ್ತುಗಳಿಗಾಗಿ ಹುಡುಕಾಟ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, ಏನೂ ಸಿಗದ ಹಿನ್ನೆಲೆಯಲ್ಲಿ ದೇವಾಲಯದ ಪವಿತ್ರ ವಿಗ್ರಹಗಳು ಹಾಗೂ ಅವಶೇಷಗಳಿಗೆ ಹಾನಿ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ...

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ ಮುಕ್ತವಾಗಿರಬೇಕು. ಆದರೆ ಚುನಾವಣೆ ಸ್ಪರ್ಧಿಸುವ ಆಡಳಿತ ಪಕ್ಷವೇ ತನಗೆ ಇಷ್ಟವಾದ ವ್ಯಕ್ತಿಯನ್ನು ಚುನಾವಣಾ ಅಧಿಕಾರಿಯಾಗಿ ನೇಮಕ ಮಾಡಿಕೊಂಡರೆ, ವಿರೋಧ ಪಕ್ಷಗಳಿಗೆ...

ರಾಹುಲ್‌ ಗಾಂಧಿ ಲಿಸ್ಟ್‌ನಲ್ಲಿರುವ ʼಸಂವಿಧಾನದ ವಿಧ್ವಂಸಕರುʼ ಇವರೇನಾ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಚುನಾವಣಾ ಆಯೋಗದ ವಿರುದ್ಧ ಎದ್ದಿರುವ ಅನುಮಾನಗಳಿಂದ ರಾಜಕೀಯ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಈ ಬೆನ್ನಲ್ಲೇ, ಕಾಂಗ್ರೆಸ್‌ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ...

ತೆಲಂಗಾಣ ಬೆಳೆ ರಕ್ಷಣೆಗೆ 3 ಟಿಎಂಸಿ ನೀರು: ಅಚ್ಚುಕಟ್ಟು...

ಕೃಷ್ಣಾ ನದಿಯ ನೀರು ಮತ್ತೊಮ್ಮೆ ಕರ್ನಾಟಕ–ತೆಲಂಗಾಣದ ನಡುವಿನ ಪ್ರಮುಖ ವಿಚಾರವಾಗಿ ಮುನ್ನೆಲೆಗೆ ಬಂದಿದೆ. ತೆಲಂಗಾಣದ ಕೃಷಿ ಪ್ರದೇಶದಲ್ಲಿನ ನಿಂತಿರುವ ಬೆಳೆಗಳನ್ನು ರಕ್ಷಿಸಲು ಕರ್ನಾಟಕದಿಂದ ಕೃಷ್ಣಾ ನೀರು ಬಿಡುಗಡೆ ಮಾಡುವಂತೆ ಆ ರಾಜ್ಯದ ಸಚಿವರು...

ದೇವಾಲಯದ ಆವರಣದಲ್ಲಿದ್ದ ಶಿವಲಿಂಗ, ನಂದಿ ವಿಗ್ರಹ, ಆಮೆ ಹಾಗೂ ಬೃಂದಾವನಕ್ಕೆ ಹಾನಿಯಾಗಿದೆ.

ಶ್ರಾವಣ ಮಾಸದ ಹಿನ್ನೆಲೆಯಲ್ಲಿ ಭಾನುವಾರ ದೇವಾಲಯವನ್ನು ಸ್ವಚ್ಛಗೊಳಿಸಲು ತೆರಳಿದ್ದ ಭಕ್ತರಿಗೆ ವಿಗ್ರಹಗಳು ಧ್ವಂಸಗೊಂಡಿರುವುದು ಕಂಡುಬಂದಿದೆ.

ದೇವಾಲಯದ ಆವರಣದಲ್ಲಿದ್ದ ಶಿವಲಿಂಗ, ನಂದಿ ವಿಗ್ರಹ, ಆಮೆ ಹಾಗೂ ಬೃಂದಾವನಕ್ಕೆ ಹಾನಿಯಾಗಿದೆ. ಶ್ರಾವಣ ಮಾಸದ ಹಿನ್ನೆಲೆಯಲ್ಲಿ ಭಾನುವಾರ ದೇವಾಲಯವನ್ನು ಸ್ವಚ್ಛಗೊಳಿಸಲು ತೆರಳಿದ್ದ ಭಕ್ತರಿಗೆ ವಿಗ್ರಹಗಳು ಧ್ವಂಸಗೊಂಡಿರುವುದು ಕಂಡುಬಂದಿದೆ.

ಘಟನೆ ತಿಳಿದು ಖಾನಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪವಿತ್ರ ವಿಗ್ರಹಗಳನ್ನು ಧ್ವಂಸಗೊಳಿಸಿರುವ ಕೃತ್ಯಕ್ಕೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ದುಷ್ಕರ್ಮಿಗಳನ್ನು ಶೀಘ್ರ ಪತ್ತೆಹಚ್ಚಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಆಗ್ರಹಿಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹಳೆಯ ವೈಷಮ್ಯಕ್ಕೆ ಯುವಕನ ಕೊಲೆ: ಇಬ್ಬರ ಬಂಧನ

ಹಳೆಯ ವೈಷಮ್ಯ ಹಾಗೂ ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಭೀಕರವಾಗಿ...

ಬೆಳಗಾವಿ | ಸಿಡಿಲು ಬಡಿದು ರೈತ ಸಾವು: ಮತ್ತೋರ್ವ ಗಂಭೀರ

ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಮದ್ಲೂರು ಗ್ರಾಮದ ರೈತರಿಬ್ಬರು ಜಮೀನಿನಲ್ಲಿ ಮೆಕ್ಕೆಜೋಳದ...

ಬೆಳಗಾವಿ | ಯರಗಟ್ಟಿ ಬಸ್‌ ನಿಲ್ದಾಣದ ಅವ್ಯವಸ್ಥೆ ಸರಿಪಡಿಸಲು ಸಚಿವ ಸತೀಶ ಜಾರಕಿಹೊಳಿಯವರಿಗೆ ಕರವೇ ಮನವಿ

ಬೆಳಗಾವಿ ಜಿಲ್ಲೆಯ ಯರಗಟ್ಪಿ ಪಟ್ಟಣದ ಬಸ್‌ ನಿಲ್ದಾಣದಲ್ಲಿ ಮೂಲಸೌಕರ್ಯ ಕಲ್ಪಿಸಿ, ಸಾರ್ವಜನಿಕರು...