ಬೆಳಗಾವಿ | ಸ್ಮಾರ್ಟ್ ಸಿಟಿ ಅವ್ಯವಹಾರದಲ್ಲಿ ಶಾಸಕ ಅಭಯ್ ಪಾಟೀಲ್ ಕೈವಾಡ; ಆರೋಪ

Date:

ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆಗೆ 1,000 ಕೋಟಿ ರೂ. ವೆಚ್ಚ ಮಾಡಲಾಗಿದೆ. ಯೋಜನೆಯ ಕಾಮಗಾರಿ ಅವ್ಯವಹಾರದಿಂದ ಕೂಡಿದ್ದು, ಶಾಸಕ ಅಭಯ್ ಪಾಟೀಲ್ ಅವರ ಕೈವಾಡವಿದೆ. ಅವ್ಯವಹಾರದ ಬಗ್ಗೆ ತನಿಕೆ ನಡೆಸಬೇಕು ಎಂದು ಬೆಳಗಾವಿ ನಾಗರಿಕ ಹಿತರಕ್ಷಣಾ ಒಕ್ಕೂಟವು ಒತ್ತಾಯಿಸಿದೆ.

ಬೆಳಗಾವಿಯ ಶಿವಾಜಿ ಉದ್ಯಾನದ ಬಳಿ ಪ್ರತಿಭಟನೆ ನಡೆಸಿದ ಒಕ್ಕೂಟದ ಕಾರ್ಯಕರ್ತರು, “ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಯಿಂದ ಮನೆ ಕಳೆದುಕೊಂಡ ಜನ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಸಂತ್ರಸ್ತರಿಗೆ ಪರಿಹಾರ ನೀಡುವಂತೆ ನ್ಯಾಯಾಲಯ ಸೂಚನೆ ನೀಡಿದೆ. ತೀರ್ಪು ಬಂದ ಮೇಲೂ ಪಾರಿಹಾರ ನೀಡಲಾಗಿಲ್ಲ. ಆದರೂ, ‘ಬುಡಾ’ ಆಯುಕ್ತರು ರಸ್ತೆ ಕಾಮಗಾರಿಗೆ ಅನೂಕೂಲ ಮಾಡಿಕೊಟ್ಟಿದ್ದಾರೆ. ಇದರಿಂದ ನಿವಾಸಿಗಳಿಗೆ ಅನ್ಯಾಯವಾಗಿದೆ. ಜನರ ತೇರಿಗೆ ಹಣವು ವ್ಯರ್ಥವಾಗಿದೆ” ಎಂದು ಆರೋಪಿಸಿದ್ದಾರೆ.

“ಸ್ಮಾರ್ಟ್ ಸಿಟಿ ಯೋಜನೆಯ ಹಣವನ್ನು ರಾಷ್ಟ್ರಿಕೃತ ಬ್ಯಾಂಕಿನಲ್ಲಿಡಬೇಕು. ಆದರೆ, ರತ್ನಾಕರ ಬ್ಯಾಂಕ್ ಲಿಮಿಟೆಡ್‌ನಲ್ಲಿ ಇಡಲಾಗಿದೆ. ಇದಕ್ಕೆ ಕಾರಣವೇನೆಂದು ಬಹಿರಂಗ ಪಡಿಸಿಬೇಕು. ಅಲ್ಲದೆ, ಅದರ ಬಡ್ಡಿ ಹಣ ಎಲ್ಲಿ ಹೋಯಿತು ಎಂಬುದರ ಕುರಿತು ಸಮಗ್ರ ತನಿಕೆ ನಡೆಸಬೇಕು. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯನ್ನು ಹಾಳು ಮಾಡಿದ ಅಧಿಕಾರಿಗಳ ಮೇಲೆ ಕ್ರಮವಹಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಆಮ್ ಆದ್ಮಿ ಪಕ್ಷದ ಮುಖಂಡ ರಾಜೀವ ಟೋಪ್ಪಣ್ಣವರ ಮಾತನಾಡಿ, “ಸ್ಮಾರ್ಟ್ ಸಿಟಿ ಕ್ರಿಯಾ ಯೋಜನೆ ಸಿದ್ಧಪಡಿಸುವ ಮೊದಲು ರಾಜಕಾಲುವೆ ಮತ್ತು ಪ್ರಾಥಮಿಕ ಕಾಲುವೆಗಳ ಅಭಿವೃದ್ಧಿಗಾಗಿ ಯೋಜನೆ ರೂಪಿಸಲಾಗಿತ್ತು. ಆದರೆ, ಕಾಲುವೆಗಳ ಅಭಿವೃದ್ಧಿ ಮಾಡಿಲ್ಲ. ಹೀಗಾಗಿ, ಮಳೆಯಾಗಿ ರಸ್ತೆ ಮೇಲೆ ನೀರು ಹರಿಯುತ್ತಿದೆ” ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಸುಜೀತ ಮುಳಗುಂದ, “ಶಹಾಪೂರ ಪ್ರದೇಶದಲ್ಲಿರುವ ಬ್ಯಾಂಕ್ ಆಫ್‌ ಇಂಡಿಯಾದಿಂದ ಹಳೆ ಪಿ.ಬಿ ರಸ್ತೆಯವರೆಗೆ ರಸ್ತೆ ವಿಸ್ತರಣೆ ಮಾಡಿ ಅಮಾಯಕರ ಮನೆಗಳನ್ನು ನೆಲಸಮ ಮಾಡಲಾಗಿದೆ. ಈ ರಸ್ತೆ ಅವೈಜ್ಞಾನಿಕವಾಗಿದ್ದು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಉನ್ನತ ಮಟ್ಟದ ತನಿಕೆ ನಡೆಸಬೇಕು. ಶಾಸಕ ಅಭಯ ಪಾಟೀಲ್ ಅವರು ತಮಗೆ ಅನುಕೂಲವಾಗವು ರೀತಿಯಲ್ಲಿ ರಸ್ತೆ ಮಾಡಿಸಿದ್ಧಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾಕಾರರ ಮನವಿ ಸ್ವೀಕರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಮಾತನಾಡಿ, “ಮನೆಗಳನ್ನು ಕಳೆದುಕೊಂಡವರಿಗೆ ಪರಿಹಾರ ಕೊಡಿಸಲು ಪ್ರಯತ್ನ ಮಾಡಲಾಗುವುದು” ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ಕೆಪಿಸಿಸಿ ಕಾರ್ಯದರ್ಶಿ ಸುನೀಲ ಹಣಮಣ್ಣವರ, ಜಿಲ್ಲಾ ಗ್ರಾಮಿಣ ಕಾಂಗ್ರೆಸ್‌ ಘಟಕದ ಅಧ್ಯಕ್ಷ ವಿನಯ ನಾವಲಟಗಿ ,ಎಮ್.ಜೆ.ಪ್ರದೀಪ, ಅಜೀಮ್ ಪಟೇಗಾರ, ಪ್ರತಿಭಾ ಪಾಟಿಲ್, ಆಯಿಶಾ ಸನದಿ ಇತರರು ಇದ್ದರು

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ನೆಮ್ಮದಿಯ ಬದುಕು ಬೇಕೋ ಬಿಜೆಪಿಯ ಸುಳ್ಳು ಬೇಕೊ ನೀವೇ ನಿರ್ಧರಿಸಿ: ಅಪ್ಪಾಜಿ ನಾಡಗೌಡ

ಮೋದಿ ಸರ್ಕಾರದ ಸುಳ್ಳು ಭರವಸೆ, ಭಾವನೆ ಕೆರಳಿಸುವ ವಿಚಾರ ಬೇಕೋ ಕಾಂಗ್ರೆಸ್...

ಬೀದರ್ | ಕಾಂಗ್ರೆಸ್‌ ಅಭ್ಯರ್ಥಿ ಸಾಗರ್‌ ಖಂಡ್ರೆ ನಾಮಪತ್ರ ಸಲ್ಲಿಕೆ

ಅರಣ್ಯ, ಪರಿಸರ ಹಾಗೂ ಜೈವಿಕ ಖಾತೆ ಸಚಿವ, ಬೀದರ್‌ ಜಿಲ್ಲಾ ಉಸ್ತುವಾರಿ...

ಶಿವಮೊಗ್ಗ | ನಟ ದ್ವಾರಕೀಶ್ ನಿಧನಕ್ಕೆ ಶಿವರಾಜ್‌ಕುಮಾರ್ ಸಂತಾಪ

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಅವರು ಮಂಗಳವಾರ ನಿಧನರಾದರು....

ದಾವಣಗೆರೆ | ಲೋಕಸಭಾ ಚುನಾವಣೆ; ಕಾಂಗ್ರೆಸ್ ಅಭ್ಯರ್ಥಿಗಳಿಗೆ ಸಿಪಿಐ ಬೆಂಬಲ ಘೋಷಣೆ

ದೇಶಾದ್ಯಂತ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಕಮ್ಯೂನಿಸ್ಟ್ ಪಕ್ಷವು ಇಂಡಿಯಾ ಒಕ್ಕೂಟದ...