ಬೆಳಗಾವಿ : ಗಣೇಶೋತ್ಸವ ಮೆರವಣಿಗೆ ಮಾರ್ಗ ಬದಲಾವಣೆಗೆ ಶಾಸಕ ಅಭಯ ಪಾಟೀಲ್ ವಿರೋಧ

Date:

ನಗರದಲ್ಲಿ ನಡೆಯಲಿರುವ ಗಣೇಶೋತ್ಸವ ವಿಸರ್ಜನೆ ಮೆರವಣಿಗೆಯ ವೇಳೆ ಪೊಲೀಸ್ ಇಲಾಖೆ ಹೊರಡಿಸಿರುವ ಹೊಸ ಷರತ್ತುಗಳಿಗೆ ಶಾಸಕ ಅಭಯ ಪಾಟೀಲ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

- Advertisement -

ಬೆಳಗಾವಿ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ಚರ್ಚಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಬಾರಿ ಅನಗತ್ಯ ನಿಯಮಾವಳಿ ಹೇರಲಾಗುತ್ತಿದ್ದು, ಗಣೇಶೋತ್ಸವ ಮಂಡಳಿಗಳಿಗೆ ತೊಂದರೆ ಉಂಟುಮಾಡುವ ರೀತಿಯ ನಿಯಮಗಳನ್ನು ಅನುಸರಿಸಬಾರದು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಸಭೆಯಲ್ಲಿ ಪೊಲೀಸರು ಒಟ್ಟು 40 ಗಣೇಶ ಮಂಡಳಿಗಳ ಮೆರವಣಿಗೆಯ ಮಾರ್ಗ ಬದಲಾವಣೆ, ಪಟಾಕಿ ಹಾರಿಸಲು ನಿಷೇಧ, ವಾದ್ಯಮೇಳಗಳಿಗೆ ನಿರ್ದಿಷ್ಟ ಪ್ರದೇಶದವರೆಗೆ ಮಾತ್ರ ಅವಕಾಶ, ಹಾಗೆಯೇ ಯಾವುದೇ ಅಶಾಂತಿ ಉಂಟಾದರೆ ಆಯೋಜಕರು ಹೊಣೆ ಎಂಬಂತೆ ಖಾಲಿ ಬಾಂಡ್ ಪೇಪರ್‌ ಮೇಲೆ ಸಹಿ ಪಡೆಯುವುದು ಮುಂತಾದ ಷರತ್ತುಗಳನ್ನು ಪ್ರಕಟಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಅಭಯ ಪಾಟೀಲ, “ಬೆಳಗಾವಿಯಲ್ಲಿ ಈ ತರಹ ಹೊಸ ಷರತ್ತುಗಳು ಬೇಡ. ಯಾರಿಗೆ ನಿಯಮಗಳು ಒಪ್ಪಿಗೆ ಇದೆ ಅವರು ಪಾಲಿಸಬಹುದು. ಆದರೆ ಬಲವಂತವಾಗಿ ಮಾರ್ಗ ಬದಲಾವಣೆ ಮಾಡಿಸುವುದು, ಪಟಾಕಿ ನಿಷೇಧಿಸುವುದು ಸರಿಯಲ್ಲ. ಈ ಬಗ್ಗೆ ನಾವು ಕಮೀಷನರ್ ಅವರನ್ನು ಭೇಟಿಯಾಗಿ ಸ್ಪಷ್ಟ ಅಭಿಪ್ರಾಯ ವ್ಯಕ್ತಪಡಿಸಿದ್ದೇವೆ” ಎಂದು ತಿಳಿಸಿದರು.

ಗಣೇಶೋತ್ಸವ ಮಂಡಳಿಗಳು ಕೂಡ ಪೊಲೀಸರು ವಿಧಿಸಿರುವ ನಿಯಮಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಮುಂದಿನ ದಿನಗಳಲ್ಲಿ ಚರ್ಚೆ ನಂತರ ಸ್ಪಷ್ಟ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ರೈತರ ಬೇಡಿಕೆ ಈಡೇರದಿದ್ದರೆ ಹೋರಾಟದ ಸ್ವರೂಪ ಬದಲು: ಚೂನಪ್ಪ ಪೂಜಾರಿ

ಕಬ್ಬಿಗೆ ಸೂಕ್ತ ದರ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ...

ಬೆಳಗಾವಿ | ರೈತರ ಹೋರಾಟಕ್ಕೆ ಎರಡು ಮೂರು ದಿನಗಳಲ್ಲಿ ಶುಭಸುದ್ದಿ: ಜಿಲ್ಲಾಧಿಕಾರಿ ಭರವಸೆ

ಕಬ್ಬಿಗೆ ಸೂಕ್ತ ದರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಾದಯಾತ್ರೆ...

ಬೆಳಗಾವಿ | ಕೇಂದ್ರ ಸರ್ಕಾರ ಸ್ಪಂದಿಸದಿದ್ದರೆ ಅ.17ರಿಂದ ಗುರ್ಲಾಪುರ ಕ್ರಾಸ್ ಬಂದ್ ಎಚ್ಚರಿಕೆ: ಶಶಿಕಾಂತ ಗುರೂಜಿ

ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಗುರ್ಲಾಪುರ ಕ್ರಾಸ್‌ನಲ್ಲಿ ರೈತರು ನಡೆಸುತ್ತಿರುವ...