ಬೆಳಗಾವಿ ಜಿಲ್ಲೆಯ ಏಕೈಕ ಮುಸ್ಲಿಂ ಶಾಸಕ ಆಸಿಫ್ ಸೇಠ್ ಅವರಿಗೆ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಕಿತ್ತೂರು ಕರ್ನಾಟಕದ ವಿವಿಧ ಮುಸ್ಲಿಂ ಜಮಾತ್ಗಳ ಮುಖಂಡರು ಆಗ್ರಹಿಸಿದ್ದಾರೆ.
ನಗರದ ಅಂಜುಮನ್-ಎ-ಇಸ್ಲಾಂ ಸಂಸ್ಥೆಯಲ್ಲಿ ಮಂಗಳವಾರ ನಡೆದ ಸಭೆಯ ಬಳಿಕ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಲಾಲಸಾಬ್ ಸಿದ್ದಾಪುರ, ಮೌಲಾಸಾಬ್ ಎಂ., ಇರ್ಫಾನ್ ತರಾಡೆ ಹಾಗೂ ಸಲೀಮ್ ಪಟೇಲ್, “ಕಳೆದ 20 ವರ್ಷಗಳಿಂದ ಉತ್ತರ ಕರ್ನಾಟಕದ ಮುಸ್ಲಿಂ ನಾಯಕರಿಗೆ ಸಚಿವ ಸ್ಥಾನ ದೊರೆತಿಲ್ಲ. ಈ ಬಾರಿಯಾದರೂ ಹೊಸ ಸಚಿವ ಸಂಪುಟದಲ್ಲಿ ಉತ್ತರ ಕರ್ನಾಟಕದ ಮುಸ್ಲಿಂ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು” ಎಂದು ಒತ್ತಾಯಿಸಿದರು.
ಅವರು ಮಾತನಾಡಿ, ಬೆಳಗಾವಿ ಜಿಲ್ಲೆಯ ಏಕೈಕ ಮುಸ್ಲಿಂ ಶಾಸಕರಾಗಿರುವ ಆಸಿಫ್ ಸೇರ್ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಉತ್ತರ ಕರ್ನಾಟಕದ ಅಲ್ಪಸಂಖ್ಯಾತ ಸಮುದಾಯದ ಆಶೋತ್ತರಗಳಿಗೆ ನ್ಯಾಯ ಒದಗಿಸಬೇಕು ಎಂದು ಹೇಳಿದರು.




