ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಬಣಜಿಗ ಸಮಾಜದ ಬಹುದಿನಗಳ ಬೇಡಿಕೆಯಾದ ಬಣಜಿಗ ಭವನ ನಿರ್ಮಾಣಕ್ಕೆ ಅಗತ್ಯ ಸಹಕಾರ ನೀಡುವುದಾಗಿ ಶಾಸಕ ವಿಶ್ವಾಸ್ ವೈದ್ಯ ಭರವಸೆ ನೀಡಿದರು.
ಸವದತ್ತಿ ಪಟ್ಟಣದ ನಿಕ್ಕಮ್ ಕಲ್ಯಾಣ ಮಂಟಪದಲ್ಲಿ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಭಾನುವಾರ ಆಯೋಜಿಸಿದ್ದ ಬಣಜಿಗ ಸಮಾವೇಶ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.
ಸಮುದಾಯದ ವಿವಿಧ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಬಣಜಿಗ ಭವನ ನಿರ್ಮಾಣ ಮಾಡಬೇಕೆಂಬುದು ಸಮಾಜದ ಬಹುದಿನಗಳ ಬೇಡಿಕೆಯಾಗಿದೆ. ಈ ಬೇಡಿಕೆಗೆ ಸ್ಪಂದಿಸಿ ಭವನ ನಿರ್ಮಾಣಕ್ಕೆ ಅಗತ್ಯ ಸಹಕಾರ ನೀಡುವುದಾಗಿ ಶಾಸಕ ವೈದ್ಯ ತಿಳಿಸಿದರು.
ಕಾರ್ಯಕ್ರಮದಲ್ಲಿ ರಾಜ್ಯ ಬಣಜಿಗ ಸಮಾಜದ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ರೂಡಗಿ ಹಾಗೂ ಬಸವ ತಿಳುವಳಿಕೆ ಕ್ಷೇತ್ರದ ಅಧ್ಯಕ್ಷ ಶಶಿಕಾಂತ ಪಟ್ಟಣ ಮಾತನಾಡಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಇದೇ ವೇಳೆ ಬಣಜಿಗ ಸಮಾಜದ ವತಿಯಿಂದ ಶಾಸಕ ವಿಶ್ವಾಸ್ ವೈದ್ಯ ಅವರನ್ನು ಸನ್ಮಾನಿಸಲಾಯಿತು.
ಮೂಲಿಮಠದ ಮಲ್ಲಿಕಾರ್ಜುನ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ತಾಲ್ಲೂಕು ಅಧ್ಯಕ್ಷ ಪ್ರವೀಣ್ ಪಟ್ಟಣಶೆಟ್ಟಿ, ಬಸವರಾಜ ಅತ್ತಿಗೇರಿ, ಬಸವರಾಜ ಹಂಪಣ್ಣವರ, ಜಿಲ್ಲಾಧ್ಯಕ್ಷ ಗಿರೀಶ್ ಉದೋಸಿ, ಮಹಿಳಾ ಘಟಕದ ಅಧ್ಯಕ್ಷೆ ಕಸ್ತೂರಿ ಹೂಲಿ, ಉಮೇಶ ಗೋತ್ಕಾರ, ದುಂಡಪ್ಪ ಕಲ್ಕೂರ, ಶಿವಶಂಕರಪ್ಪ ಹತ್ತಿ, ಶಿವಯೋಗಿ ಫಕೀರಶೆಟ್ಟಿ, ಮಹಾಂತೇಶ ಸೇರಿದಂತೆ ಸಮಾಜದ ಮುಖಂಡರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.



