ಬೆಳಗಾವಿ | ಮನರೇಗಾ ಅವ್ಯವಹಾರ: ವಸೂಲಾತಿಗೆ ಕಟ್ಟುನಿಟ್ಟಿನ ಸೂಚನೆ, ಆಗಸ್ಟ್ 7ರೊಳಗೆ ವರದಿ ಸಲ್ಲಿಸಿ

Date:

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಓಬಳಾಪುರ ಹಾಗೂ ಮುದೇನೂರ ಗ್ರಾಮ ಪಂಚಾಯತಿಗಳಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಎಂಜಿಎನ್‌ಆರ್‌ಇಜಿಎ) ಅಡಿಯಲ್ಲಿ ನಡೆದಿರುವ ಅವ್ಯವಹಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಧಿಕಾರಿ, ಸಿಬ್ಬಂದಿ ಹಾಗೂ ಮಾಜಿ ಜನಪ್ರತಿನಿಧಿಗಳಿಂದ ಬಾಕಿ ಇರುವ ವಸೂಲಾತಿಯನ್ನು ತಕ್ಷಣ ಪೂರ್ಣಗೊಳಿಸುವಂತೆ ಜಿಲ್ಲಾ ಪಂಚಾಯತ್ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.

- Advertisement -

ಓಂಬುಡ್ಸ್‌ಮನ್ ಹಾಗೂ ಓಂಬುಡ್ಸ್‌ಮನ್ ಮೇಲ್ಮನವಿ ಪ್ರಾಧಿಕಾರ ಹೊರಡಿಸಿರುವ ಆದೇಶಗಳನ್ನು ಹಲವು ಬಾರಿ ನೆನಪಿಸಿದರೂ ಸಂಬಂಧಪಟ್ಟ ಅಧಿಕಾರಿಗಳು ಸಮರ್ಪಕ ಕ್ರಮ ಕೈಗೊಂಡಿಲ್ಲ ಎಂದು ಜಿಲ್ಲಾ ಪಂಚಾಯತ್ ಗಂಭೀರ ಅಸಮಾಧಾನ ವ್ಯಕ್ತಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಲಭ್ಯ ಮಾಹಿತಿಯಂತೆ, ಓಂಬುಡ್ಸ್‌ಮನ್ ಆದೇಶದಡಿ ಒಟ್ಟು ₹11.78 ಲಕ್ಷ ವಸೂಲಾತಿಗೆ ಆದೇಶವಾಗಿದ್ದು, ಇದರಲ್ಲಿ ₹3.05 ಲಕ್ಷ ಮಾತ್ರ ವಸೂಲಿಯಾಗಿದೆ. ₹1.57 ಲಕ್ಷ ಮೌಲ್ಯದ ಆಸ್ತಿಗಳ ಮೇಲೆ ಭೋಜಾ (ಚಾರ್ಜ್) ದಾಖಲಿಸಲಾಗಿದ್ದು, ಇನ್ನೂ ₹7.15 ಲಕ್ಷ ವಸೂಲಾತಿಗೆ ಬಾಕಿಯಿದೆ.

ಇನ್ನೊಂದೆಡೆ, ಓಂಬುಡ್ಸ್‌ಮನ್‌ ಮೇಲ್ಮನವಿ ಪ್ರಾಧಿಕಾರದಲ್ಲಿ ದಾಖಲಾಗಿದ್ದ 9 ಪ್ರಕರಣಗಳ ಪೈಕಿ 8 ಪ್ರಕರಣಗಳ ವಿಚಾರಣೆ ಪೂರ್ಣಗೊಂಡಿದ್ದು, ₹14.08 ಲಕ್ಷ ವಸೂಲಿಗೆ ಶಿಫಾರಸು ಮಾಡಲಾಗಿದೆ. ಇದರಲ್ಲಿ ₹5.92 ಲಕ್ಷ ವಸೂಲಿಯಾಗಿದ್ದು, ₹2.20 ಲಕ್ಷ ಮೌಲ್ಯದ ಆಸ್ತಿಗಳ ಮೇಲೆ ಭೋಜಾ ದಾಖಲಿಸಲಾಗಿದೆ. ಉಳಿದ ₹5.96 ಲಕ್ಷ ವಸೂಲಿಗೆ ಕ್ರಮ ಕೈಗೊಳ್ಳುವಂತೆ ತಾಲೂಕು ಪಂಚಾಯತ್ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಸಾಮಾಜಿಕ ಹೋರಾಟಗಾರ ಶ್ರೀನಿವಾಸ ಗೌಡ ಪಾಟೀಲ ಸಲ್ಲಿಸಿರುವ ಮನವಿಯ ಹಿನ್ನೆಲೆಯಲ್ಲಿ, ಅವ್ಯವಹಾರದಲ್ಲಿ ಭಾಗಿಯಾಗಿರುವ ಅಧಿಕಾರಿ ಹಾಗೂ ಸಿಬ್ಬಂದಿಯ ವಿರುದ್ಧ ಕೈಗೊಂಡಿರುವ ಕ್ರಮದ ಮಾಹಿತಿ ನೀಡುವಂತೆ ಜಿಲ್ಲಾ ಪಂಚಾಯತ್ ಮತ್ತೊಮ್ಮೆ ಸೂಚಿಸಿದೆ.

ಜಿಲ್ಲಾ ಪಂಚಾಯತ್ ಆದೇಶದಂತೆ, ಸಂಬಂಧಪಟ್ಟ ಅಧಿಕಾರಿಗಳು, ಸಿಬ್ಬಂದಿ, ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಸೇವೆಯಿಂದ ವಿಮುಕ್ತಿಗೊಂಡಿರುವ ಹೊರಗುತ್ತಿಗೆ ಸಿಬ್ಬಂದಿ ಹಾಗೂ ಮಾಜಿ ಚುನಾಯಿತ ಜನಪ್ರತಿನಿಧಿಗಳಿಗೆ ತಕ್ಷಣ ನೋಟಿಸ್‌ ನೀಡಿ ಬಾಕಿ ಮೊತ್ತವನ್ನು ವಸೂಲಿ ಮಾಡಬೇಕು. ವಸೂಲಾದ ಹಣದ ಚಲನ್ ಪ್ರತಿಯೊಂದಿಗೆ ಅನುಪಾಲನಾ ವರದಿಯನ್ನು ಆಗಸ್ಟ್ 7, 2026ರೊಳಗೆ ಜಿಲ್ಲಾ ಪಂಚಾಯತ್‌ಗೆ ಸಲ್ಲಿಸುವಂತೆ ಸೂಚಿಸಲಾಗಿದೆ.

ನಿರ್ದೇಶನ ಪಾಲಿಸಲು ವಿಫಲವಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಪರಿಗಣಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಜಿಲ್ಲಾ ಪಂಚಾಯತ್‌ ಎಚ್ಚರಿಕೆ ನೀಡಿದೆ.

ಈ ಕುರಿತು ಈ ದಿನ.ಕಾಮ್ ಜತೆ ಶ್ರೀನಿವಾಸಗೌಡ ಪಾಟೀಲ ಮಾತನಾಡಿ 2017ರಿಂದ ಓಬಳಾಪುರ ಹಾಗೂ ಮುದೇನೂರ ಗ್ರಾಮ ಪಂಚಾಯತಿಗಳಲ್ಲಿ ನಡೆದಿರುವ ಮನರೇಗಾ ಯೋಜನೆಯ ಅವ್ಯವಹಾರದ ವಿರುದ್ಧ ನಿರಂತರ ಹೋರಾಟ ನಡೆಸುತ್ತಿದ್ದೇನೆ. ಹಲವಾರು ಬಾರಿ ದಾಖಲೆಗಳೊಂದಿಗೆ ದೂರು ಸಲ್ಲಿಸಿದ ಪರಿಣಾಮ ಇದೀಗ ಜಿಲ್ಲಾ ಪಂಚಾಯತ್ ವಸೂಲಾತಿಗೆ ಕಟ್ಟುನಿಟ್ಟಿನ ಸೂಚನೆ ನೀಡಿರುವುದು ಸಂತಸದ ಸಂಗತಿ. ಸರ್ಕಾರಕ್ಕೆ ಆಗಿರುವ ನಷ್ಟವನ್ನು ಅವ್ಯವಹಾರದಲ್ಲಿ ಭಾಗಿಯಾಗಿರುವ ಅಧಿಕಾರಿಗಳು, ಸಿಬ್ಬಂದಿ ಹಾಗೂ ಇತರರಿಂದ ಕೂಡಲೇ ವಸೂಲಿ ಮಾಡಬೇಕು. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮವೂ ಜರುಗಬೇಕು, ಎಂದು ಸಾಮಾಜಿಕ ಹೋರಾಟಗಾರ ಶ್ರೀನಿವಾಸಗೌಡ ಪಾಟೀಲ ಈ ದಿನ.ಕಾಮ್‌ಗೆ ತಿಳಿಸಿದರು.

ಯಾರದೇ ಹೆದರಿಕೆಗೆ ನಾನು ಹೆದರುವುದಿಲ್ಲ. ಸಾರ್ವಜನಿಕರ ಹಣವನ್ನು ದುರುಪಯೋಗಪಡಿಸಿಕೊಂಡವರ ವಿರುದ್ಧ ನನ್ನ ಹೋರಾಟ ಮುಂದುವರಿಯುತ್ತದೆ. ಭ್ರಷ್ಟಾಚಾರದ ವಿರುದ್ಧದ ಹೋರಾಟವನ್ನು ಯಾವುದೇ ಕಾರಣಕ್ಕೂ ಕೈಬಿಡುವುದಿಲ್ಲ, ಎಂದು ಅವರು ಎಚ್ಚರಿಕೆ ನೀಡಿದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮಲಪ್ರಭಾ ಜಲಾಶಯದಿಂದ ಸವದತ್ತಿ ಕೆರೆಗಳಿಗೆ ನೀರು ಬಿಡಿ: ಶಾಸಕ ವಿಶ್ವಾಸ ವೈದ್ಯ

ಮಲಪ್ರಭಾ ಅಣೆಕಟ್ಟಿನಿಂದ ಬೆಳಗಾವಿ ಜಿಲ್ಲೆಯ ಸವದತ್ತಿ ಭಾಗದ ಕೆರೆಗಳನ್ನು ತುಂಬಿಸಲು ಅಗತ್ಯ...

ಬೆಳಗಾವಿ | ಸೋಯಾಬಿನ್ ಬೆಳೆ ಸಮೀಕ್ಷೆ ನಡೆಸಿ: ಶಾಸಕ ಮಹಾಂತೇಶ ಕೌಜಲಗಿ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸೋಯಾಬಿನ್ ಬೆಳೆಯಲಾಗಿದ್ದು, ಮಳೆ...

ಬೆಳಗಾವಿ | ಜೂನ್‌ವರೆಗೆ ಕುಡಿಯುವ ನೀರಿಗೆ ಕೊರತೆಯಾಗದಂತೆ ಕ್ರಮ: ಸಚಿವ ಸತೀಶ ಜಾರಕಿಹೊಳಿ

ಮುಂದಿನ ಜೂನ್‌ವರೆಗೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ...