ಬೆಳಗಾವಿ | ಪ್ರೇಮ ನಿರಾಕರಿಸಿದಕ್ಕೆ ಅಪ್ರಾಪ್ತ ಬಾಲಕಿಯ ಹತ್ಯೆ: ಆರೋಪಿಗೆ ಜೀವಾವಧಿ ಕಠಿಣ ಜೈಲು

Date:

ಪ್ರೇಮ ನಿರಾಕರಿಸಿದ್ದಕ್ಕೆ 16 ವರ್ಷದ ಅಪ್ರಾಪ್ತ ಬಾಲಕಿಯನ್ನು ಇರಿದು ಭೀಕರವಾಗಿ ಹತ್ಯೆ ಮಾಡಿದ್ದ ಆರೋಪಿಗೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಕಠಿಣ ಜೈಲು ಶಿಕ್ಷೆ ಹಾಗೂ ₹30 ಸಾವಿರ ದಂಡ ವಿಧಿಸಿದೆ.

- Advertisement -

ರಾಯಬಾಗ ತಾಲೂಕಿನ ಹಾರೂಗೇರಿಯಲ್ಲಿ 2021ರ ಆಗಸ್ಟ್ 1ರಂದು ಘಟನೆ ನಡೆದಿತ್ತು. 9ನೇ ತರಗತಿ ಓದುತ್ತಿದ್ದ ಲಕ್ಷ್ಮಿ ಜಾತ್ರೆಗೆ ತೆರಳಿದ್ದಾಗ ಆರೋಪಿ ಅಮೀರ್ ಲಾಲ್ಸಾಬ್ ಜಮಾದಾರ್ (26) ಆಕೆಯನ್ನು ಪ್ರೀತಿಸುವಂತೆ ಪೀಡಿಸಿದ್ದ. ಬಾಲಕಿ ನಿರಾಕರಿಸಿದ್ದರಿಂದ ಕೋಪಗೊಂಡ ಆರೋಪಿ, ಮನೆಗೆ ಮರಳುತ್ತಿದ್ದ ಆಕೆಯ ದಾರಿ ತಡೆದು ಮಾಂಸ ಕತ್ತರಿಸುವ ಕತ್ತಿಯಿಂದ ಎದೆ ಹಾಗೂ ಬೆನ್ನಿಗೆ ಇರಿದು ಹತ್ಯೆ ಮಾಡಿದ್ದ. ಬಳಿಕ ಆತ್ಮಹತ್ಯೆಗೂ ಯತ್ನಿಸಿದ್ದ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಪ್ರಕರಣ ದಾಖಲಿಸಿಕೊಂಡ ಹಾರೂಗೇರಿ ಪೊಲೀಸರು 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿ, ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶ ವಿಜಯಕುಮಾ‌ರ್ ಅವರು ಮೃತ ಬಾಲಕಿಯ ತಂಗಿಯರು ಹಾಗೂ ಗೆಳತಿಯರು ನೀಡಿದ ಸಾಕ್ಷ್ಯಗಳನ್ನು ಪರಿಗಣಿಸಿ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದರು.

ಸರ್ಕಾರಿ ಅಭಿಯೋಜಕ ವೈ.ಜಿ. ತುಂಗಳ್ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು. ಘಟನೆ ಬಳಿಕ ಕೋಮು ಸಂಘರ್ಷದ ಆತಂಕವೂ ಎದುರಾಗಿತ್ತು. ಇಂತಹ ಅಪರಾಧಗಳಿಗೆ ಕಠಿಣ ಶಿಕ್ಷೆ ವಿಧಿಸಿರುವುದು ಸಮಾಜದಲ್ಲಿ ಅಪರಾಧಗಳಿಗೆ ಕಡಿವಾಣ ಹಾಕಲು ಸಹಕಾರಿಯಾಗಲಿದೆ ಎಂದು ತುಂಗಳ್ ಹೇಳಿದರು.

ತೀರ್ಪಿನ ಕುರಿತು ಮೃತ ಬಾಲಕಿಯ ತಂದೆ ಶೇಖ‌ರ್ ರುದ್ರನವರ, “ನ್ಯಾಯ ಸಿಕ್ಕಿದೆ. ಆದರೆ ಕಳೆದುಕೊಂಡ ಮಗಳು ಮತ್ತೆ ಬರುವುದಿಲ್ಲ” ಎಂದು ಕಣ್ಣೀರಿಟ್ಟರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಪ್ರಿಡ್ಜನಲ್ಲಿ ಶಾರ್ಟ್ ಸರ್ಕ್ಯೂಟ್: ಮನೆ ಸುಟ್ಟು ಕರಕಲು, ಮಕ್ಕಳ ಚೀರಾಟ ಕೇಳಿ ಬಂದ ಮನೆ ಮಾಲಕಿ

ಬೆಳಗಾವಿ ನಗರದ ಸಹ್ಯಾದ್ರಿ ನಗರದಲ್ಲಿ ಫ್ರಿಡ್ಜ್‌ನಲ್ಲಿ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್‌ ಉಂಟಾಗಿ...

ಬೆಳಗಾವಿ | ವಿದ್ಯಾರ್ಥಿಗಳು ಬೇಂದ್ರೆ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ವಿರುಪಾಕ್ಷಪ್ಪ ಮಾಮನಿ

ವಿದ್ಯಾರ್ಥಿಗಳು ಮೊಬೈಲ್‌ನಲ್ಲಿ ಕಾಲಹರಣ ಮಾಡದೆ ಕಾವ್ಯ, ಕಾದಂಬರಿ ಹಾಗೂ ಕಥೆಗಳನ್ನು ಓದುವ...

ಬೆಳಗಾವಿ | ಪ್ರಜ್ವಲ್ ರೇವಣ್ಣ ಹಿಂಡಲಗಾ ಜೈಲು ಸ್ಥಳಾಂತರಕ್ಕೆ ತಾತ್ಕಾಲಿಕ ತಡೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರಿನ...