ಧಾರವಾಡ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ನೀಡುತ್ತಿದ್ದ ಐಪಿಎಸ್ ಅಧಿಕಾರಿ ನಾರಾಯಣ ಭರಮನಿ ಅವರನ್ನು ಬೆಳಗಾವಿ ನಗರಕ್ಕೆ ಡಿಸಿಪಿಯಾಗಿ ವರ್ಗಾಯಿಸಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.
ಇತ್ತೀಚೆಗೆ ನಡೆದ ಘಟನೆಯೊಂದರಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ‘ಕೈ ಎತ್ತಿದ್ದಾರೆ’ ಎಂಬ ಕಾರಣದಿಂದ ಬೇಸರಗೊಂಡಿದ್ದ ಭರಮನಿ ರಾಜೀನಾಮೆಗೆ ಮುಂದಾಗಿದ್ದರು. ಈ ವಿಷಯ ಮಾಧ್ಯಮಗಳಲ್ಲಿ ಚರ್ಚೆಗೆ ಗ್ರಾಸವಾಗುತ್ತಿದ್ದಂತೆಯೇ ಸಿಎಂ ಸಿದ್ದರಾಮಯ್ಯ ಹಾಗೂ ಗೃಹಸಚಿವ ಡಾ. ಜಿ. ಪರಮೇಶ್ವರ ಭರಮನಿಯವರನ್ನು ಸಮಾಧಾನಪಡಿಸಿ, ಸರ್ವಿಸ್ ಮುಂದುವರೆಸುವಂತೆ ಮನವೊಲಿಸಿದರು.
ಈ ರಾಜಕೀಯ ಮತ್ತು ಸೇವಾ ಬೆಳವಣಿಗೆಯ ಹಿನ್ನಲೆಯಲ್ಲಿ, ಭರಮನಿಯವರನ್ನು ಈಗ ಬೆಳಗಾವಿಗೆ ಡಿಸಿಪಿಯಾಗಿ ನಿಯೋಜಿಸಲಾಗಿದೆ.