ಬೆಳಗಾವಿ | ಗಣೇಶೋತ್ಸವದಲ್ಲಿ ಡಿಜೆ ಬಳಕೆಗೆ ಅವಕಾಶವಿಲ್ಲ : ಪೊಲೀಸ್‌ ಆಯುಕ್ತ ಭೂಷಣ್ ಬೊರಸೆ

Date:

ಗಣೇಶೋತ್ಸವ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಡಿಜೆ ಬಳಕೆಗೆ ಅನುಮತಿ ನೀಡುವುದಿಲ್ಲ. ಗಣೇಶೋತ್ಸವ ಮಂಡಳಿಗಳು ಪೊಲೀಸ್ ಇಲಾಖೆ ಸೂಚಿಸಿರುವ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಶಾಂತಿ, ಸೌಹಾರ್ದ ಹಾಗೂ ಭಕ್ತಿಭಾವದಿಂದ ಹಬ್ಬ ಆಚರಿಸಬೇಕು ಎಂದು ನಗರ ಪೊಲೀಸ್ ಆಯುಕ್ತ ಭೂಷಣ್‌ ಬೊರಸೆ ಸೂಚಿಸಿದರು.

- Advertisement -

ನಗರದ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ನಡೆದ ಗಣೇಶೋತ್ಸವದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ವರ್ಷವೂ ಗಣೇಶೋತ್ಸವ ಸಂದರ್ಭದಲ್ಲಿ ಡಿಜೆ ಬಳಕೆಗೆ ಪೊಲೀಸ್ ಇಲಾಖೆ ಅನುಮತಿ ನೀಡಿರಲಿಲ್ಲ. ಸಾರ್ವಜನಿಕ ಸುರಕ್ಷತೆ, ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಕೈಗೊಂಡಿದ್ದ ಈ ನಿರ್ಧಾರವನ್ನು ಹಿರಿಯ ನಾಗರಿಕರು ಸೇರಿದಂತೆ ಸಾರ್ವಜನಿಕರು ಶ್ಲಾಘಿಸಿದ್ದರು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಬಾರಿಯೂ ಸಾರ್ವಜನಿಕರ ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಥೆಯ ಹಿತದೃಷ್ಟಿಯಿಂದ ಡಿಜೆ ಬಳಕೆಗೆ ಯಾವುದೇ ಅವಕಾಶ ನೀಡುವುದಿಲ್ಲ. ಗಣೇಶೋತ್ಸವ ಮಂಡಳಿಗಳು ನಿಯಮಗಳನ್ನು ಉಲ್ಲಂಘಿಸದೆ, ಪೊಲೀಸ್‌ ಇಲಾಖೆಯೊಂದಿಗೆ ಸಹಕರಿಸಿ ಹಬ್ಬವನ್ನು ಶಾಂತಿಯುತವಾಗಿ ಆಚರಿಸಬೇಕು ಎಂದು ಹೇಳಿದರು.

ಗಣೇಶೋತ್ಸವ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಮಂಡಳಿಗಳು ಮುನ್ನೆಚ್ಚರಿಕೆ ವಹಿಸಬೇಕು. ಭಕ್ತಿಭಾವ ಮತ್ತು ಸೌಹಾರ್ದತೆಯಿಂದ ಹಬ್ಬ ಆಚರಿಸುವ ಮೂಲಕ ಬೆಳಗಾವಿಯ ಶಾಂತಿ ಪರಂಪರೆಯನ್ನು ಕಾಪಾಡಬೇಕು ಎಂದು ಪೊಲೀಸ್‌ ಆಯುಕ್ತರು ಮನವಿ ಮಾಡಿದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...