ಬೆಳಗಾವಿ | ಯಾವುದೇ ಸರ್ಕಾರಿ ಕೆಲಸಕ್ಕೂ ಲಂಚವಿಲ್ಲದೆ ನಡೆಯುತ್ತಿಲ್ಲ : ಸಿ.ಟಿ.ರವಿ

Date:

ರಾಜ್ಯ ಸರ್ಕಾರದ ಮೇಲೆಯು ಬಿಜೆಪಿ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಕಿಡಿಕಾರಿದ್ದಾರೆ. ಕಾಂಗ್ರೆಸ್ ಶಾಸಕರಾದ ಬಿ.ಆರ್. ಪಾಟೀಲ ಅವರು ಭ್ರಷ್ಟಾಚಾರ ಕುರಿತು ನೀಡಿರುವ ಹೇಳಿಕೆಯನ್ನು ಸತ್ಯವೆಂದು ಬೆಂಬಲಿಸಿದ ಅವರು, “ಸರ್ಕಾರದಲ್ಲಿ ಯಾವುದೇ ಇಲಾಖೆ ಶುದ್ಧವಿಲ್ಲ, ಎಲ್ಲೆಡೆ ಲಂಚದ ತಂತ್ರವಿದೆ” ಯಾವುದೇ ಸರ್ಕಾರಿ ಕೆಲಸಕ್ಕೂ ಲಂಚವಿಲ್ಲದೆ ನಡೆಯುತ್ತಿಲ್ಲ. ಎಂದು ಸಿಟಿ ರವಿ ಬೆಳಗಾವಿ ನಗರದಲ್ಲಿ ಆರೋಪ ಮಾಡಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ. ರವಿ, “ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ‘ಗ್ಯಾರಂಟಿ’ಗಳನ್ನು ನೀಡಿದರು. ಆದರೆ ಅದರ್ಥ, ಅವರು ಭ್ರಷ್ಟಾಚಾರಕ್ಕೆ ಪರವಾನಗಿ ಪಡೆದಿದ್ದಾರೆ ಎಂಬಂತಾಗಿದೆ. ಯಾವುದೇ ಸರ್ಕಾರಿ ಕೆಲಸಕ್ಕೂ ಲಂಚವಿಲ್ಲದೆ ನಡೆಯುತ್ತಿಲ್ಲ. ಸಚಿವರು, ಶಾಸಕರು ಮತ್ತು ಅಧಿಕಾರಿಗಳಿಗೂ ನಿಗದಿತ ಲಂಚದ ಮೊತ್ತವಿದೆ. ಹಾಗಾದರೆ ಲಂಚದ ‘ರೇಟ್‌ಕಾರ್ಡ್’ ಕಚೇರಿಗಳಲ್ಲೇ ಹಾಕಿಬಿಡಿ” ಎಂದು ವ್ಯಂಗ್ಯವಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಲಂಚ ಕೊಡಲೇಬೇಕೆಂದು ಮನಸ್ಸು ಮಾಡುತ್ತಿರುವ ಸ್ಥಿತಿಗೆ ಜನರು ತಲುಪಿದ್ದಾರೆ” ಎಂದು ಟೀಕಿಸಿದ ಅವರು,
“ಲಂಚ ಕೊಟ್ಟವರಿಗಷ್ಟೇ ಮನೆ ಕೊಡಲಾಗುತ್ತಿದೆ ಎಂಬುದು ಪಾಪದ ಕೃತ್ಯವಾಗಿದೆ. ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ. ನಾವು ಈ ಬಗ್ಗೆ ಸದನದಲ್ಲಿ ಹಲವು ಬಾರಿ ಎತ್ತಿಹಿಡಿದಿದ್ದೇವೆ. ಈಗ ಖುದ್ದು ಕಾಂಗ್ರೆಸ್‌ನ ಶಾಸಕ ರಾಜು ಕಾಗೆಯೇ ಈ ಸತ್ಯವನ್ನು ಒಪ್ಪಿಕೊಂಡಿದ್ದಾರೆ. ಅವರ ಮಾತಿನಲ್ಲಿ ಹೊಸದೇನೂ ಇಲ್ಲ, ಅದು ಸತ್ಯದ ಪ್ರತಿಬಿಂಬ ಮಾತ್ರ” ಎಂದು ಹೇಳಿದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...