ಬೆಳಗಾವಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಮೇಯರ್ ಹಾಗೂ ಉಪಮೇಯರ್ ಅವರನ್ನು ಬೆಳಗಾವಿ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನಿಸುವ ವಿಚಾರವಾಗಿ ಆಕ್ಷೇಪ ವ್ಯಕ್ತವಾಗಿ ಕೆಲಕಾಲ ಗದ್ದಲದ ವಾತಾವರಣ ನಿರ್ಮಾಣವಾಯಿತು.
ಗಡಿ ಕನ್ನಡ ಸೇನೆಯ ರಾಜ್ಯಾಧ್ಯಕ್ಷ ಬಲರಾಮ ಮಾಸೇನಟ್ಟಿ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಅಧ್ಯಕ್ಷ ವಾಜೀದ್ ಹಿರೇಕುಂಡಿ ಅವರು ಮೇಯರ್ ಹಾಗೂ ಉಪಮೇಯರ್ ಅವರನ್ನು ರಾಜ್ಯೋತ್ಸವಕ್ಕೆ ಆಹ್ವಾನಿಸಬಾರದು ಎಂದು ಆಕ್ಷೇಪಿಸಿದರು. ಈ ವೇಳೆ ಇಬ್ಬರೂ ಧಿಕ್ಕಾರ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಸಭೆಯಿಂದ ಹೊರಗೆ ತೆರಳಿದರು.
ಘಟನೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಮಧ್ಯಪ್ರವೇಶಿಸಿ, ಹೊರಗೆ ತೆರಳಿದ್ದ ಮುಖಂಡರನ್ನು ಮರಳಿ ಸಭೆಗೆ ಬಂದು ಕುಳಿತುಕೊಳ್ಳುವಂತೆ ಮನವಿ ಮಾಡಿದರು.



