ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಗ್ರಾಮದ ಸಮೀಪ ಎರಡು ಬೈಕ್‌ಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಸಾಲಾಪೂರ ಗ್ರಾಮದ ಆಕಾಶ ಬಂಡಿವಡ್ಡರ ಹಾಗೂ ಅವರ ಸಂಬಂಧಿ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ, ಬೀಡಕಿ ಗ್ರಾಮದ ಅಶೋಕ ದಳವಾಯಿ ಅವರ ಎರಡು ಬೈಕ್‌ಗೆ ಡಿಕ್ಕಿ ಹೊಡೆದು ಡಿಕ್ಕಿಯ ರಭಸಕ್ಕೆ ಅಶೋಕ ದಳವಾಯಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಗಾಯಗೊಂಡಿರುವ ಆಕಾಶ ಬಂಡಿವಡ್ಡರ ಹಾಗೂ ಅವರ ಸಂಬಂಧಿಯನ್ನು ತಕ್ಷಣ ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
ಘಟನೆ ಕುರಿತು ಕಟಕೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



