ಬೆಳಗಾವಿ | ಮರ ಕಡಿತದ ಪ್ರಕರಣ ಒಬ್ಬನ ಬಂಧನ ಆದರೆ ಅವನ ಹೆಸರೇ ರಹಸ್ಯ ?: ರಾಜಕೀಯ ಕೈವಾಡ ಆರೋಪ

Date:

- Advertisement -

ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಹೊರವಲಯದಲ್ಲಿ ಪಿಎಂ-ಕುಸುಮ್ ಸೌರ ಯೋಜನೆ ಹೆಸರಿನಲ್ಲಿ ಅನುಮತಿ ಇಲ್ಲದೇ ಮರ ಕಡಿತಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಆದರೆ ಬಂಧಿತನ ಹೆಸರು ಬಹಿರಂಗಪಡಿಸದಿರುವುದು ಅನುಮಾನಕ್ಕೆ ಕಾರಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

ಕೌರಿಗುಡಾ ರೇಣುಕಾದೇವಿ ದೇವಸ್ಥಾನದ ಸುತ್ತಮುತ್ತಲಿನ 40 ಎಕರೆ ಗಾಯರಾಣ ಜಮೀನಿನಲ್ಲಿ ಸೌರ ಘಟಕಕ್ಕೆ ಜಿಲ್ಲಾಧಿಕಾರಿ ಹಾಗೂ ಹೆಸ್ಕಾಂ ಅನುಮತಿ ನೀಡಿದ್ದರೂ, ಮರ ಕಡಿತಕ್ಕೆ ಅರಣ್ಯ ಇಲಾಖೆಯ ಅನುಮತಿ ಪಡೆಯಲಾಗಿರಲಿಲ್ಲ. ಆರೋಪಿಗಳು ಸುಮಾರು ಎಂಟು ಎಕರೆ ಪ್ರದೇಶದಲ್ಲಿದ್ದ ಸಣ್ಣ ಗಂಧದ ಮರಗಳು ಸೇರಿದಂತೆ ಸಾವಿರಾರು ಮರಗಳನ್ನು ಕಡಿತಗೊಳಿಸಿದ್ದಾರೆ.

ಡಿಸಿಎಫ್ ಕ್ರಾಂತಿ ಅವರು ಈ ಕುರಿತು ಎಫ್‌ಐಆ‌ರ್ ದಾಖಲಾಗಿದ್ದು, ಒಬ್ಬರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಅರಣ್ಯ ಇಲಾಖೆ ನಿರ್ಲಕ್ಷ್ಯದಿಂದ 10 ಸಾವಿರಕ್ಕೂ ಹೆಚ್ಚು ಮರಗಳು ನಾಶವಾಗಿವೆ ಎಂದು ಬಿಜೆಪಿ ಮುಖಂಡರು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದಿರಾ ? ವಂಟಮೂರಿ ತೀರ್ಪೊಂದು ಸಾಕೇ? ತೆರೆಮರೆಗೆ ಸರಿದ ಪ್ರಕರಣಗಳಿಗೆ ನ್ಯಾಯ ಯಾವಾಗ?

ಈ ಜಾಗದ ಬಳಿ 55 ಎಕರೆ ಬಂಜರು ಭೂಮಿ ಇದ್ದರೂ ಅರಣ್ಯವನ್ನೇ ಬಳಸಿರುವುದೇಕೆ ಎಂಬ ಪ್ರಶ್ನೆ ಮೂಡಿದ್ದು ಇದರ ಹಿಂದೆ ರಾಜಕೀಯ ಕೈವಾಡವಿದೆ ಎಂದು ಆರೋಪಿಸಿ ಫೆ.6ರಂದು ರೈತ ಸಂಘಟನೆಗಳು ಹಾಗೂ ಗ್ರಾಮಸ್ಥರು ಡಿಸಿಎಫ್‌ ಕಚೇರಿ ಮುಂದೆ ಪ್ರತಿಭಟನೆ ನಡೆಸಲಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...

ಬೆಳಗಾವಿ | ಗಣೇಶ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕ ಸಾವು

ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದ ಕೆರೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ತೆರಳಿದ್ದ...

ಬೆಳಗಾವಿ | ಅಕ್ಟೋಬರ್ 4ರಂದು ಶಿವಾಜಿ ಕಾಗಣಿಕರ್ ಕುರಿತು ಮೂರು ಕೃತಿಗಳ ಲೋಕಾರ್ಪಣೆ

ಬೆಳಗಾವಿ ನಗರದ ಕ್ಯಾಂಪ್ ಪ್ರದೇಶದಲ್ಲಿರುವ ಸ್ಕೂಲ್ ಆಫ್‌ ಕಲ್ಟರ್‌ನ ಗೋಗಟೆ ಸಭಾಂಗಣದಲ್ಲಿ...