ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಎರಡು ಬೈಕುಗಳ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಅಥಣಿ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ ಶಿಕ್ಷಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತಪಟ್ಟ ಶಿಕ್ಷಕನನ್ನು ಸಾತಪ್ಪ ಪಿ. ಪಿರಗೊಂಡ(55) ಎಂದು ಗುರುತಿಸಲಾಗಿದ್ದು, ಮೃತರಿಗೆ ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಇದ್ದಾಳೆ. ಮೃತ ಶಿಕ್ಷಕನಿಗೆ ಅಥಣಿ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಸರ್ವ ಸದಸ್ಯರು ಹಾಗೂ ಶಿಕ್ಷಕರು, ವಿದ್ಯಾರ್ಥಿಗಳು ಸಂತಾಪ ಸೂಚಿಸಿದ್ದಾರೆ.