ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ಅಥಣಿ ತಾಲೂಕಿನ ಅನಂತಪುರ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ನಾಗನೂರ ಪಿ.ಎ ಗ್ರಾಮದ ಅಶೋಕ ಸನದಿ (48) ಮೃತಪಟ್ಟ ವ್ಯಕ್ತಿಯಾಗಿದ್ದು, ಅನಂತಪುರ ಗ್ರಾಮದಿಂದ ತಾಂವಶಿ ಮಾರ್ಗವಾಗಿ ಸಾಗುವ ವೇಳೆ ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಬೈಕ್ ಹಿಂಭಾಗ ಸಂಪೂರ್ಣ ನುಜ್ಜು ಗುಜ್ಜಾಗಿದೆ ಈ ಕುರಿತು ಅಥಣಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.