ಬೆಳಗಾವಿ | ಪ್ರೀತಿಗೆ ವಿರೋಧ; ನದಿಗೆ ಹಾರಿ ವಿವಾಹಿತ, ಪ್ರೇಯಸಿ ಆತ್ಮಹತ್ಯೆ

Date:

ವಿವಾಹಿತನೊಬ್ಬ ತನ್ನ ಪ್ರಿಯತಮೆಯೊಂದಿಗೆ ಮಲಪ್ರಭಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ರಾಮದುರ್ಗ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ. ಮಲ್ಲಾಪುರ ಗ್ರಾಮದ ಜಗದೀಶ ಯಲ್ಲಪ್ಪ ಕವಳೇಕರ(27) ಮತ್ತು ಗಂಗಮ್ಮ ತ್ಯಾಪಿ(25) ಮೃತರು.

- Advertisement -

ನದಿ ದಂಡೆಯ ಮೇಲೆ ಶವಗಳನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ರಾಮದುರ್ಗ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ತೆರಳಿ ಶವಗಳನ್ನು ಹೊರ ತೆಗೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

ಕಳೆದ ಜ.26ರಂದು ರಾತ್ರಿ ಮಲ್ಲಾಪುರ ಗ್ರಾಮದ ಹೊರ ವಲಯದಲ್ಲಿರುವ ಬ್ರಿಡ್ಜ್ ಮೇಲೆ ಇಬ್ಬರೂ ವೇಲ್ ಕಟ್ಟಿಕೊಂಡು ನದಿಗೆ ಜಿಗಿದಿದ್ದಾರೆ ಎನ್ನಲಾಗಿದೆ. ಇಂದು ಬೆಳಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿ ಇಬ್ಬರ ಮೃತದೇಹಗಳನ್ನು ನದಿಯಿಂದ ಹೊರ ತೆಗೆಯಲಾಗಿದೆ. ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ, ಮದುವೆಗೆ ಕುಟುಂಬಸ್ಥರು ಒಪ್ಪಿರಲಿಲ್ಲ. ಹಾಗಾಗಿ, ಒಂದು ವರ್ಷದ ಹಿಂದಷ್ಟೇ ಬೇರೆ ಯುವತಿ ಜತೆಗೆ ಜಗದೀಶನ ಮದುವೆ ನಿಗದಿಯಾಗಿತ್ತು. ಈಗ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನಿಖೆ ಕೈಗೊಂಡಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಳಗಾವಿ | ಹೃದಯಾಘಾತದ ನಾಟಕ ಬಯಲು: ಭೀಕರವಾಗಿ ಪತ್ನಿಯ ಹತ್ಯೆ

Advertisements
ಆತ್ಮಹತ್ಯೆ ಪರಿಹಾರವಲ್ಲ 5 3
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...

ಬೆಳಗಾವಿ | ಗಣೇಶ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕ ಸಾವು

ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದ ಕೆರೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ತೆರಳಿದ್ದ...