ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಮಕೇರಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರೇ ಅಧಿಕಾರಿಗಳ ವಿರುದ್ಧ ಸಿಡಿದೆದ್ದ ಘಟನೆ ನಡೆದಿದೆ.
ಮನೆಗಳ ಹಂಚಿಕೆ, ದನಗಳ ಶೆಡ್ಡು ನಿರ್ಮಾಣ, ಹಾಗೂ ಒಳಚರಂಡಿ ಕಾಮಗಾರಿಗಳಲ್ಲಿ ಮಂದಗತಿಯು ಮತ್ತು ಹಿಂದೇಟು ಹಾಕುತ್ತಿದ್ದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸದಸ್ಯರು ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದ್ದಾರೆ.
ಬೆಳಿಗ್ಗೆಯಿಂದಲೇ ಬೀಗ ಹಾಕಿ ಕುಳಿತ ಸದಸ್ಯರು ಹಾಗೂ ಗ್ರಾಮಸ್ಥರು “ಮೇಲಾಧಿಕಾರಿಗಳು ಬಂದು ಸ್ಪಷ್ಟನೆ ನೀಡುವ ತನಕ ಬೀಗ ತೆಗೆಯುವುದಿಲ್ಲ” ಎಂದು ಪಟ್ಟು ಹಿಡಿದಿದ್ದಾರೆ. ಪ್ರತಿಭಟನಾಕಾರರು ಗ್ರಾಮ ಪಂಚಾಯಿತಿ ಪಿಡಿಓ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಘಟನಾ ಸ್ಥಳಕ್ಕೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಶಿವಾನಂದ ಕಲ್ಲಾಪುರ ಆಗಮಿಸಿ ಗ್ರಾಮ ಸಭೆಯನ್ನು ಮಾಡಬೇಕಿತ್ತು ಆದರೆ ಇದುವರೆಗೂ ಗ್ರಾಮ ಸಭೆ ಮಾಡಿಲ್ಲ ಗ್ರಾಮ ಸಭೆ ಮಾಡಿ ಜನರ ಸಮಸ್ಯೆಗಳನ್ನು ಕೇಳಲಾಗುವುದು ಎಂದು ತಿಳಿಸಿದ್ದಾರೆ.