ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಪಟ್ಟಣದ ಸುನೀಲ ನರುಟೆ ಅವರ ಮನೆಯ ಮುಂದೆ ನಿಲ್ಲಿಸಲಾಗಿದ್ದ ಮಹಿಂದ್ರಾ ಪಿಕಪ್ ವಾಹನವನ್ನು ಗುರುವಾರ ರಾತ್ರಿ ಕಳ್ಳರು ಎಗರಿಸಿದ್ದಾರೆ. ಇತ್ತೀಚೆಗೆ ಬೋರಗಾಂವದಲ್ಲಿ ಕಳ್ಳತನದ ಘಟನೆಗಳು ಹೆಚ್ಚುತ್ತಿದ್ದು, ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ.
ಈ ಸುದ್ದಿ ಓದಿದ್ದಿರಾ ? ಬೆಳಗಾವಿ : ತಂದೆಗೆ ಮಗನಿಂದ ಲಿವರ್ ದಾನ – ಕೆಎಲ್‌ಇ ಆಸ್ಪತ್ರೆಯಲ್ಲಿ ಯಶಸ್ವಿ ಲಿವರ್ ಕಸಿ ಶಸ್ತ್ರಚಿಕಿತ್ಸೆ
ಮೂರು ದಿನಗಳ ಹಿಂದಷ್ಟೇ ಎರಡು ದ್ವಿಚಕ್ರ ವಾಹನಗಳು ಕಳ್ಳತನವಾಗಿದ್ದರೆ, ವಾರದ ಸಂತೆಯಲ್ಲಿ ಮೊಬೈಲ್ ಫೋನ್ ಕಳ್ಳತನಗೊಂಡಿದೆ. ಈ ಎಲ್ಲಾ ಪ್ರಕರಣಗಳು ಸದಲಗಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.