ಬೆಳಗಾವಿ | ಪ್ರೇಮಿಯ ಜೊತೆ ಪರಾರಿಗೆ ಪ್ಲಾನ್: ಪತಿಯ ಮನೆಯಿಂದ ₹21 ಲಕ್ಷ ಚಿನ್ನ ದೋಚಿದ ಪತ್ನಿ

Date:

ಮದುವೆಯಾದ ಎರಡೇ ತಿಂಗಳಲ್ಲಿ ಪತಿಯ ಮನೆಯಲ್ಲೇ ₹21 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿ ಪ್ರಿಯಕರನ ಜೊತೆ ಪರಾರಿಯಾಗಿದ್ದ ನವವಧು ಹಾಗೂ ಆಕೆಯ ಪ್ರಿಯಕರನನ್ನು ಕಟಕೋಳ ಪೊಲೀಸರು ಬಂಧಿಸಿದ್ದಾರೆ.

- Advertisement -

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹೊಸಕೋಟೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮೂಲತಃ ಮೂಡಲಗಿ ತಾಲೂಕಿನ ಹಸೀನಾ ನದಾಫ್‌ ಎಂಬಾಕೆಗೆ ಎರಡು ತಿಂಗಳ ಹಿಂದಷ್ಟೇ ಹೊಸಕೋಟೆ ಗ್ರಾಮದ ಶರೀಫ್ ಎಂಬುವವರ ಜೊತೆ ವಿವಾಹವಾಗಿತ್ತು. ಆದರೆ ಮದುವೆಗೂ ಮುನ್ನವೇ ಹಣಮಂತ ಮಾರಾಪೂರ ಎಂಬಾತನ ಜೊತೆ ಪ್ರೀತಿಸುತ್ತಿದ್ದ ಹಸೀನಾ, ಮದುವೆಯಾದ ಬಳಿಕವೂ ಆತನ ಸಂಪರ್ಕದಲ್ಲಿದ್ದಳು ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಪ್ರಿಯಕರನ ಜೊತೆ ಶಾಶ್ವತವಾಗಿ ನೆಲೆಸುವ ಉದ್ದೇಶದಿಂದ ಹಸೀನಾ ಪತಿಯ ಮನೆಯಲ್ಲಿದ್ದ ಚಿನ್ನಾಭರಣಗಳ ಮೇಲೆ ಕಣ್ಣು ಹಾಕಿದ್ದಳು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಸುಮಾರು ₹21 ಲಕ್ಷ ಮೌಲ್ಯದ 154.6 ಗ್ರಾಂ ಚಿನ್ನಾಭರಣ ಹಾಗೂ 45 ಗ್ರಾಂ ಬೆಳ್ಳಿಯ ಆಭರಣಗಳನ್ನು ಕದ್ದು ಪ್ರಿಯಕರನ ಜೊತೆ ಪರಾರಿಯಾಗಿದ್ದಳು.

ಈ ಕುರಿತು ಕಟಕೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ದೂರು ದಾಖಲಾದ 48 ಗಂಟೆಗಳಲ್ಲೇ ಆರೋಪಿಗಳನ್ನು ಪತ್ತೆಹಚ್ಚಿದ ಪೊಲೀಸರು ಇಬ್ಬರನ್ನೂ ಬಂಧಿಸಿ, ಕಳುವಾದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...

ಬೆಳಗಾವಿ | ಗಣೇಶ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕ ಸಾವು

ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದ ಕೆರೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ತೆರಳಿದ್ದ...

ಬೆಳಗಾವಿ | ಅಕ್ಟೋಬರ್ 4ರಂದು ಶಿವಾಜಿ ಕಾಗಣಿಕರ್ ಕುರಿತು ಮೂರು ಕೃತಿಗಳ ಲೋಕಾರ್ಪಣೆ

ಬೆಳಗಾವಿ ನಗರದ ಕ್ಯಾಂಪ್ ಪ್ರದೇಶದಲ್ಲಿರುವ ಸ್ಕೂಲ್ ಆಫ್‌ ಕಲ್ಟರ್‌ನ ಗೋಗಟೆ ಸಭಾಂಗಣದಲ್ಲಿ...

ಬೆಳಗಾವಿ | ವಿದ್ಯುತ್‌ ಸಂಪರ್ಕ ಕಡಿತ: ಹೆಸ್ಕಾಂ ಅಧಿಕಾರಿಗಳ ಮೇಲೆ ಚನ್ನರಾಜ ಹಟ್ಟಿಹೊಳಿ ಹಲ್ಲೆ ಆರೋಪ

ವಿದ್ಯುತ್‌ ಬಿಲ್ ಬಾಕಿ ಕಾರಣ ಸಂಪರ್ಕ ಕಡಿತಗೊಳಿಸಿದ್ದನ್ನು ಪ್ರಶ್ನಿಸಿ ಹೆಸ್ಕಾಂ ಅಧಿಕಾರಿಗಳ...