ಬೆಳಗಾವಿ | ಪೋಕ್ಸೊ ಪ್ರಕರಣ: ಅಪರಾಧಿಗೆ 30 ವರ್ಷ ಜೈಲು, 1 ಲಕ್ಷ ರೂ. ದಂಡ

Date:

ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ ಬೆಳಗಾವಿ ಜಿಲ್ಲಾ ಪೋಕ್ಸೊ ನ್ಯಾಯಾಲಯ 30 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹1 ಲಕ್ಷ ದಂಡ ವಿಧಿಸಿ ತೀರ್ಪು ನೀಡಿದೆ.

- Advertisement -

ಸಂಕೇಶ್ವರದ ದರ್ಶನ್‌ ಭಗವಂತ ಹುಣಶ್ಯಾಳ ಶಿಕ್ಷೆಗೊಳಗಾದವ ಎನ್ನಲಾಗಿದೆ. ಬಾಲಕಿಯನ್ನು ಪ್ರೀತಿಸಿದ್ದ ಈತ, 2024ರ ಆಗಸ್ಟ್‌ 25ರಂದು ಅಪ್ರಾಪ್ತೆ ಕಾಲೇಜು ಮುಗಿಸಿ ಮನೆಗೆ ಮರಳುವ ವೇಳೆ ನಿಡಸೋಸಿ ರಸ್ತೆಯಲ್ಲಿ ಆಕೆಯನ್ನು ತಡೆದು ಓಡಿಹೋಗುವ ಸಂಚು ರೂಪಿಸಿದ್ದ. ಆ.27ರ ರಾತ್ರಿ ಬಾಲಕಿಯನ್ನು ತನ್ನ ಬೈಕಿನಲ್ಲಿ ಕರೆದೊಯ್ದಿದ್ದ ಈತ ಅಥಣಿಯಲ್ಲಿ ತಾವಿಬ್ಬರೂ ದಂಪತಿ ಎಂದು ಹೇಳಿಕೊಂಡು ಮನೆ ಬಾಡಿಗೆ ಪಡೆದಿದ್ದ. ಬಾಲಕಿಗೆ ಮನಸಿಲ್ಲದಿದ್ದರೂ ಅತ್ಯಾಚಾರ ಎಸಗಿದ್ದ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಮಗಳು ಕಾಣೆಯಾದ ಬಗ್ಗೆ ಪಾಲಕರು ದೂರು ದಾಖಲಿಸಿದ್ದರು. ತನಿಖಾಧಿಕಾರಿ ಕೆ ಬಿ ಕಂಠಿ ಪ್ರಕರಣ ದಾಖಲಿಸಿದ್ದರು. ಸಂಕೇಶ್ವರ ಇನ್‌ಸ್ಪೆಕ್ಟರ್‌ ಆರ್ ಎಸ್ ಖೋತ ಮತ್ತು ಎಸ್ ಎಂ ಆವೂಜಿ ಪೋಕ್ಸೊ ಪ್ರಕರಣದಡಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ನ್ಯಾಯಾಧೀಶರಾದ ಸಿ ಎಂ ಪುಷ್ಪಲತಾ ಅವರು 8 ಸಾಕ್ಷಿ‌ಗಳ ವಿಚಾರಣೆ, 50 ದಾಖಲೆಗಳು ಹಾಗೂ 6 ಮುದ್ದೆಮಾಲುಗಳ ಆಧಾರದ ಮೇಲೆ ತೀರ್ಪು ಪ್ರಕಟಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ವರ್ಷದ ಮೊದಲ ಮಳೆ ಕಂಡ ಕೊಡಗು; ಕಾಫಿ ಬೆಳೆಗಾರರಲ್ಲಿ ಆತಂಕ!

ನೊಂದ ಬಾಲಕಿಗೆ ಬೆಳಗಾವಿ ಜಿಲ್ಲಾ ಕಾನೂನು ಪ್ರಾಧಿಕಾರದಿಂದ ₹4 ಲಕ್ಷ ಪರಿಹಾರ ಪಡೆಯಲು ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಲ್ ವಿ ಪಾಟೀಲ ವಾದ ಮಂಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...