ಬೆಳಗಾವಿ : ಕನ್ಹೇರಿ ಮಠದ ಸ್ವಾಮೀಜಿಯ ಹೇಳಿಕೆಗೆ ಬಸವಪರ ಸಂಘಟನೆಗಳ ಆಕ್ರೋಶ

Date:

ಮಹಾರಾಷ್ಟ್ರದ ಕೊಲ್ಲಾಪುರದ ಕನ್ಹೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಬಸವ ಸಂಸ್ಕೃತಿ ಅಭಿಯಾನ ಹಾಗೂ ಲಿಂಗಾಯತ ಮಠಾಧೀಶರ ವಿರುದ್ಧ ಅವಮಾನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಬಸವಪರ ಸಂಘಟನೆಗಳ ಕಾರ್ಯಕರ್ತರು ಬೆಳಗಾವಿ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶುಕ್ರವಾರ ತೀವ್ರ ಪ್ರತಿಭಟನೆ ನಡೆಸಿದರು.

- Advertisement -

ಪ್ರತಿಭಟನಾಕಾರರು ಸ್ವಾಮೀಜಿಯ ಹೇಳಿಕೆ ಲಿಂಗಾಯತ ಸಮಾಜದ ಭಾವನೆಗೆ ಧಕ್ಕೆ ತಂದು, ಸಮಾಜದಲ್ಲಿ ಅಶಾಂತಿ ಉಂಟುಮಾಡುವಂತದ್ದಾಗಿದೆ ಎಂದು ಆರೋಪಿಸಿದರು. “ಸ್ವಾಮೀಜಿಯವರು ಬಳಸಿದ ಪದಗಳು ಒಬ್ಬ ಧರ್ಮಗುರುನಿಗೆ ಅಯೋಗ್ಯ. ಅವರ ವಿರುದ್ಧ ತಕ್ಷಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಕರ್ನಾಟಕದ ಯಾವುದೇ ಭಾಗಕ್ಕೂ ಪ್ರವೇಶ ನಿಷೇಧಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ʻಬಳ್ಳಾರಿ ಚಲೋʼ ಕಾಂಗ್ರೆಸ್‌ ಭದ್ರಕೋಟೆಯಲ್ಲಿ ಬಿಜೆಪಿ ಪಾದಯಾತ್ರೆ; ಲಾಭ...

ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳನ್ನು ಗೆದ್ದು ಕಾಂಗ್ರೆಸ್‌ ಬಿಜೆಪಿ ಪಕ್ಷವನ್ನು ಸಂಪೂರ್ಣವಾಗಿ ಮಣಿಸಿತ್ತು. ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್‌ ತನ್ನ ಪ್ರಾಬಲ್ಯವನ್ನು ಮುಂದುವರಿಸಿತು. ಇತ್ತೀಚೆಗೆ ನಡೆದ ಸಂಡೂರು ವಿಧಾನಸಭಾ ಕ್ಷೇತ್ರದ...

ಬಾಹ್ಯಾಕಾಶದಲ್ಲಿ ಶಸ್ತ್ರಾಸ್ತ್ರ ಸಮರ: ಕಕ್ಷೆಯಲ್ಲಿ ಆಯುಧಗಳನ್ನು ಇರಿಸಿದ್ದನ್ನು ಒಪ್ಪಿಕೊಂಡ...

ಉಪಗ್ರಹವನ್ನು ಸ್ಫೋಟಿಸದಿದ್ದರೂ ಬಾಹ್ಯಾಕಾಶದಲ್ಲಿ ಜಾಮರ್‌ಗಳು ಸಹ ಅತ್ಯಂತ ಮಾರಕವಾಗಿ ಪರಿಣಮಿಸಬಹುದು. ಇಂದಿನ ದಿನಗಳಲ್ಲಿ ಸಂಪರ್ಕ, ಹವಾಮಾನ ಮುನ್ಸೂಚನೆ, ವಿಮಾನ ಮತ್ತು ಹಡಗುಗಳ ಜಿಪಿಎಸ್ (GPS), ತುರ್ತು ಸೇವೆಗಳು ಮತ್ತು ಆರ್ಥಿಕ ಜಾಲಗಳು ಸಂಪೂರ್ಣವಾಗಿ...

ಗಣೇಶೋತ್ಸವ ಕೋಮು ಸೌಹಾರ್ದದ ಸೇತುವಾಗಲಿ; ಮನುಜ ಸಂಬಂಧದ ತಂತು...

ಗಣೇಶೋತ್ಸವ ಸಂಭ್ರಮ, ಭಕ್ತಿಯಿಂದ ಜನರು ಒಂದೆಡೆ ಸೇರಿ ಆಚರಿಸುವ ಹಬ್ಬ. ಆದರೆ ಇದೇ ಹಬ್ಬದ ಸಂದರ್ಭದಲ್ಲಿ ಕೆಲವೆಡೆ ಕೋಮು ಸಂಘರ್ಷಗಳು ನಡೆಯುತ್ತಿರುವುದು ಮಾತ್ರ ವಿಷಾದನೀಯ. ಭಾರತದಂತಹ ವಿವಿಧ ಧರ್ಮ, ಭಾಷೆ, ಸಂಸ್ಕೃತಿಗಳನ್ನು ಹೊಂದಿರುವ...

ಮಹಾರಾಷ್ಟ್ರದ ಬಿಳ್ಳೂರ ಮಠದಲ್ಲಿ ನಡೆದ ಸಮಾರಂಭದಲ್ಲಿ ಕಾಡಸಿದ್ದೇಶ್ವರ ಸ್ವಾಮೀಜಿ ಬಸವ ತತ್ತ್ವವನ್ನು ಹೀನಾಯವಾಗಿ ಮಾತನಾಡಿದ್ದಾರೆ ಎಂದು ಸಂಘಟನಾ ಮುಖಂಡರು ಆರೋಪಿಸಿದರು. “ಈ ಹೇಳಿಕೆ ಬಸವಣ್ಣನವರ ಅನುಯಾಯಿಗಳಿಗೆ ನೋವುಂಟುಮಾಡಿದೆ. ಸಾಮಾಜಿಕ ಸೌಹಾರ್ದತೆಗೆ ಇದು ಅಪಾಯ” ಎಂದರು.

ಪ್ರತಿಭಟನೆಯನ್ನು ಬಸವರಾಜ ರೊಟ್ಟಿ, ಈರಣ್ಣ ದಯಣ್ಣವರ, ಲಿಂಗಾಯತ ಕ್ಷೇಮಾಭಿವೃದ್ಧಿ ಸಂಘದ ಎಸ್‌.ಜಿ. ಸಿದ್ದಾಳ, ಎಂ.ಎಂ. ಬಾಳಿ, ಜಾಗತಿಕ ಲಿಂಗಾಯತ ಮಹಾಸಭಾ ಮಹಿಳಾ ಘಟಕದ ಅಧ್ಯಕ್ಷೆ ಪ್ರೇಮಕ್ಕ ಅಂಗಡಿ, ಸಿ.ಎಂ. ಬೂದಿಹಾಳ, ಶಂಕಡ ಗುಡಸ, ರಾಷ್ಟ್ರೀಯ ಬಸವ ದಳದ ಅಧ್ಯಕ್ಷ ಅಶೋಕ ಬೆಂಡಿಗೇರಿ, ಈರಣ್ಣ ಚಿನಗುಡಿ ಮತ್ತು ಇತರರು ನೇತೃತ್ವ ವಹಿಸಿದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | 400 ಲೀಟರ್ ಗೋವಾ ಮದ್ಯ ಸಾಗಾಟ: ಇಬ್ಬರ ಬಂಧನ

ಬೆಳಗಾವಿ ಜಿಲ್ಲೆಯ ಖಾನಾಪೂರ ಕರ್ನಾಟಕ-ಗೋವಾ ಗಡಿಯ ಕಣಕುಂಬಿ ಬಳಿ ಗೂಡ್ಸ್‌ ವಾಹನದಲ್ಲಿ...

ಬೆಳಗಾವಿ | ಹಾಡಹಗಲೇ ಗ್ರಾಮದಲ್ಲಿ ಚಿರತೆ ರಾಜಾರೋಷ ಓಡಾಟ!

ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಗೋಲಿಹಳ್ಳಿ ಅರಣ್ಯ ವ್ಯಾಪ್ತಿಗೆ ಒಳಪಡುವ ಗೋಲಿಹಳ್ಳಿ...

ಬೆಳಗಾವಿ | ಇಡಿ ದಾಳಿ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ: ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ

ಲೋಕೋಪಯೋಗಿ ಇಲಾಖೆ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ...

ಬೆಳಗಾವಿ | ಸತೀಶ್ ಜಾರಕಿಹೊಳಿ ಆಪ್ತರ ಮನೆಗಳ ಮೇಲೆ ED ದಾಳಿ

ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಸುಮಾರು 18...