ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಿಡಕಲ್ ಗ್ರಾಮ ಪಂಚಾಯಿತಿಯ ಚುನಾಯಿತ ಪ್ರತಿನಿಧಿ, ಗ್ರಾಮ ಪಂಚಾಯತಿ ಸದಸ್ಯರು ಗ್ರಾಮ ಪಂಚಾಯಿತಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದ್ದಾರೆ.
ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಾದೇವ ಕುಂಬಾರ ಇವರು ಗ್ರಾಮ ಪಂಚಾಯತ್ ಮಹಿಳಾ ಸದಸ್ಯರಾದ ಗೀತಾ ಬಿಜ್ಜರಗಿ ಇವರನ್ನು ಗ್ರಾಮ ಪಂಚಾಯಿತಿಯ ಬೀಗ ತೆಗೆಯುವಂತೆ ಮನವೊಲಿಸಲು ಪ್ರಯತ್ನಿಸಿದ್ರೂ ಕೂಡ ಪಟ್ಟು ಬಿಡದ ಸದಸ್ಯೆ ನಮ್ಮ ವಾರ್ಡಿನಲ್ಲಿ ಆಗಬೇಕಾಗಿರುವ ಕಾಮಗಾರಿ ವಿಳಂಬವಾಗಿದ್ದು, ಹಣ ಸರಿಯಾಗಿ ಬಿಡುಗಡೆಯಾಗಿಲ್ಲ. ನಮ್ಮ ವಾರ್ಡ್ ಜನರಿಗೆ ಸರಿಯಾದ ಮೂಲಭೂತ ಸೌಲಭ್ಯಗಳನ್ನು ಒದಗಿಸುತ್ತಿಲ್ಲ. ಕೂಡಲೇ ಈ ಕೆಲಸಗಳನ್ನು ಮಾಡಿಕೊಡುತ್ತೇವೆ ಎಂದು ಭರವಸೆ ನೀಡುವವರೆಗೆ ಬೀಗ ತೆಗೆಯಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಸದಸ್ಯರ ಒತ್ತಾಯಕ್ಕೆ ಮಣಿದ ಪಿಡಿಓ ಮಹಾದೇವ ಕುಂಬಾರ ಸದಸ್ಯರ ಮನವೊಲಿಸಿ ಅವರ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆದಿದ್ದಾರೆ.