ಬೆಳಗಾವಿ | ಜಿಲ್ಲೆಯಲ್ಲಿ ಜುಲೈ 5ರ ವರೆಗೆ ಮಳೆಯಾಗುವ ಸಾಧ್ಯತೆ

Date:

ಬೆಳಗಾವಿ ನಗರದಲ್ಲಿ ಗುರುವಾರ ದಿನವಿಡೀ ಮಳೆ ಸುರಿದ ಪರಿಣಾಮ ವಾತಾವರಣ ತಂಪಾಗಿದ್ದು, ಜನಜೀವನದಲ್ಲಿ ಚಟುವಟಿಕೆಗಳು ಮಂದಗತಿಯಲ್ಲಿ ಸಾಗಿದವು. ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣದ ನಡುವೆ ಸುರಿದ ಮಳೆಯಿಂದ ನಗರದ ಪ್ರಮುಖ ರಸ್ತೆಗಳು ಒದ್ದೆಯಾಗಿದ್ದರೆ, ಜನರು ಕೊಡೆ ಹಿಡಿದು ಸಂಚರಿಸುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು.

- Advertisement -

ಮಳೆಯ ಪರಿಣಾಮ ನಗರದ ಪ್ರಮುಖ ಮಾರುಕಟ್ಟೆ ಪ್ರದೇಶಗಳಲ್ಲಿ ವ್ಯಾಪಾರ ವಹಿವಾಟು ಕೂಡ ನಿಧಾನಗತಿಯಲ್ಲಿ ನಡೆಯಿತು. ಮಳೆ ಬಿಡುವಿನ ವೇಳೆಯಲ್ಲಿ ಮಾತ್ರ ಜನರು ಅಗತ್ಯ ವಸ್ತುಗಳ ಖರೀದಿಗೆ ಮುಂದಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ಮರಣೆ | ʼಗಾಂಧಿ ನೀ ನಮ್ಮೆಲ್ಲರೊಳಗೂ ಇರುವೆʼ

ನಿನ್ನ ಚಾಳೀಸಿನೊಳಗೆ ತೂರಿಕೊಂಡ ಸ್ವಚ್ಚ ಭಾರತವಿನ್ನೂ ಚರಂಡಿಯಲ್ಲಿ ಹೊರಳಾಡುತ್ತಿದೆ. ಕಪ್ಪು ಹಣದ ಕತ್ತಲೆ ಗಾಢವಾಗಿ, ಸೂತ್ರಧಾರಿಗಳು ಉಳ್ಳವರಾಗಿ ಕೈಲಾಸದಲ್ಲಿನ ಭವ್ಯ ಶಿವಾಲಯದಲ್ಲಿದ್ದಾರೆ. ಊರ ಹೊರಗಣ ಕೇರಿಯವರಿಗೆ ಕೊಳಕು ಬಳಿಯುವ ಕಾಯಕ ಮತ್ತು ಕೊಳಗೇರಿ...

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜೂನ್‌ ತಿಂಗಳಲ್ಲಿ ಜಿಲ್ಲೆಗೆ ವಾಡಿಕೆಯಂತೆ 146 ಮಿ.ಮೀ. ಮಳೆಯಾಗಬೇಕಿದ್ದರೂ, ಕೇವಲ 104 ಮಿ.ಮೀ. (ಶೇ 68) ಮಳೆಯಷ್ಟೇ ದಾಖಲಾಗಿತ್ತು. ಬೆಳಗಾವಿ, ಖಾನಾಪುರ, ಕಾಗವಾಡ, ನಿಪ್ಪಾಣಿ, ಬೈಲಹೊಂಗಲ ಹಾಗೂ ಚನ್ನಮ್ಮ ಕಿತ್ತೂರು ತಾಲ್ಲೂಕುಗಳಲ್ಲಿ ಮಳೆಯ ಕೊರತೆಯಿಂದ ರೈತರು ಆತಂಕಕ್ಕೆ ಒಳಗಾಗಿದ್ದರು.

ಆದರೆ ಜುಲೈ ಆರಂಭದಲ್ಲೇ ಮಳೆ ಚುರುಕುಗೊಂಡಿರುವುದು ರೈತರಲ್ಲಿ ಹೊಸ ಭರವಸೆ ಮೂಡಿಸಿದೆ. ಸವದತ್ತಿ, ಹುಕ್ಕೇರಿ ಹಾಗೂ ಚಿಕ್ಕೋಡಿ ಭಾಗಗಳಲ್ಲೂ ತುಂತುರು ಮಳೆಯಾಗಿದ್ದು, ಪಶ್ಚಿಮ ಘಟ್ಟದ ಸೆರಗಿನಲ್ಲಿರುವ ಖಾನಾಪುರ ತಾಲ್ಲೂಕಿನಲ್ಲಿ ಉತ್ತಮ ಮಳೆ ದಾಖಲಾಗಿದೆ.

ಈ ಸುದ್ದಿ ಓದಿದ್ದಿರಾ ? ಬೆಳಗಾವಿ | ಖಾನಾಪೂರ ಪಶ್ಚಿಮ ಘಟ್ಟದಲ್ಲಿ ಭಾರಿ ಮಳೆ: ಜಲಪಾತಗಳ ವೀಕ್ಷಣೆಗೆ ನಿಷೇದ

ಭಾರತೀಯ ಹವಾಮಾನ ಇಲಾಖೆ ಜುಲೈ 1ರಿಂದ 5ರವರೆಗೆ ಬೆಳಗಾವಿ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದ್ದು, ಕೃಷಿ ಚಟುವಟಿಕೆಗಳಿಗೆ ಇದು ಅನುಕೂಲವಾಗುವ ನಿರೀಕ್ಷೆ ವ್ಯಕ್ತವಾಗಿದೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...

ಬೆಳಗಾವಿ | ಮತಕಳ್ಳತನ ಆರೋಪಕ್ಕೆ ಸಾಕ್ಷ್ಯವಿದ್ದರೆ ನ್ಯಾಯಾಲಯಕ್ಕೆ ಹೋಗಲಿ: ಜಗದೀಶ್ ಶೆಟ್ಟರ್

ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು...

ಉತ್ತರ ಪ್ರದೇಶ: ಪ್ರಜಾಪ್ರಭುತ್ವ ಹೋರಾಟಗಾರರಿಗೆ ಅಖಿಲೇಶ್ ಮಾಸಿಕ ₹51,000 ಪಿಂಚಣಿ ಭರವಸೆ

ಉತ್ತರ ಪ್ರದೇಶದಲ್ಲಿ 2027ರಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಸರ್ಕಾರ ರಚಿಸಿದರೆ, 1975ರ...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....