ಬೆಳಗಾವಿ | ರಾಮದುರ್ಗ, ಸವದತ್ತಿ, ಕಾಗವಾಡ, ಗೋಕಾಕ ತಾಲೂಕುಗಳು ಬರ ಪಟ್ಟಿಯಲ್ಲಿ ಸೆರ್ಪಡೆ: ಭರವಸೆ ಈಡೇರಿಸಿದ ಶಾಸಕ ಅಶೋಕ ಪಟ್ಟಣ

Date:

ಬೆಳಗಾವಿ ಜಿಲ್ಲೆಯ ಬರಪೀಡಿತ ತಾಲೂಕುಗಳ ನಾಲ್ಕನೆಯ ಪಟ್ಟಿಯಲ್ಲಿ ರಾಮದುರ್ಗ, ಸವದತ್ತಿ, ಗೋಕಾಕ ಹಾಗೂ ಕಾಗವಾಡ ತಾಲೂಕುಗಳನ್ನು ಮಧ್ಯಮ ಬರಪೀಡಿತ ತಾಲೂಕುಗಳು ಎಂದು ಸರ್ಕಾರ ಘೋಷಿಸಿದೆ. ಇದರಿಂದ ಜಿಲ್ಲೆಯ ಒಟ್ಟು 13 ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರಿದಂತಾಗಿದೆ.

- Advertisement -

ಎರಡನೇ ಪಟ್ಟಿಯಲ್ಲಿ ಬೆಳಗಾವಿ ಜಿಲ್ಲೆಯ 9 ತಾಲೂಕುಗಳು ಬರಪೀಡಿತ ಪಟ್ಟಿಯಲ್ಲಿದ್ದರೂ, ರಾಮದುರ್ಗ, ಸವದತ್ತಿ ಹಾಗೂ ಗೋಕಾಕ ತಾಲೂಕುಗಳು ಸೇರ್ಪಡೆಯಾಗಿರಲಿಲ್ಲ. ಇದರಿಂದ ಆಕ್ರೋಶಗೊಂಡ ರಾಮದುರ್ಗ ಕ್ಷೇತ್ರದ ರೈತರು ಪ್ರತಿಭಟನೆ ನಡೆಸಿ, ತಾಲೂಕನ್ನು ಬರಪೀಡಿತ ಎಂದು ಘೋಷಿಸುವಂತೆ ಶಾಸಕ ಅಶೋಕ ಪಟ್ಟಣ ಅವರಿಗೆ ಆಗ್ರಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೆ.23 ‘ಭೀಮ ಸಂಕಲ್ಪ ದಿನ’: ಡಾ ಬಿ ಆರ್...

1917ರ ಸೆಪ್ಟೆಂಬರ್ 23ರಂದು ವಡೋದರದ ಆಲದ ಮರದ ಕೆಳಗೆ ಕುಳಿತಿದ್ದ ಯುವ ಅಂಬೇಡ್ಕರ್ ಅವರ ಬಳಿ ಅಧಿಕಾರವಿರಲಿಲ್ಲ, ದೊಡ್ಡ ಸಂಘಟನೆಯಿರಲಿಲ್ಲ. ಆದರೆ ಅನ್ಯಾಯವನ್ನು ಒಪ್ಪಿಕೊಳ್ಳದ ಮನಸ್ಸು ಮತ್ತು ಸಮಾಜವನ್ನು ಬದಲಿಸಬೇಕೆಂಬ ದೃಢ ಸಂಕಲ್ಪವಿತ್ತು....

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ...

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ ನಾಶ ಮಾಡಿ ಅಪರಾಧಿಗಳ ರಕ್ಷಣೆಗೆ ನಿಂತರೇ ಎಂಬ ಅನುಮಾನ ಸಾಮಾನ್ಯ ಜನರಿಗೂ ಬರುತ್ತಿರುವಾಗ ಕರ್ನಾಟಕದ ಬಹುತೇಕ ಸುದ್ದಿ ಮಾಧ್ಯಮಗಳು ಈ...

ಉತ್ತರ ಪ್ರದೇಶ | ಅಖಿಲೇಶ್ ‘ಧರ್ಮ ರಕ್ಷಣೆ’ಯ ಯುದ್ಧ...

ಉತ್ತರ ಪ್ರದೇಶದ ಯುವಜನತೆಯ (Gen Z) ಅಸಮಾಧಾನ, ನಿರುದ್ಯೋಗ ಸಮಸ್ಯೆ ಮತ್ತು ಬದಲಾಗುತ್ತಿರುವ ಜಾತಿ ಸಮೀಕರಣಗಳು ತಮಗೆ ಪೂರಕವಾಗಿವೆ ಎಂಬುದನ್ನು ಅಖಿಲೇಶ್ ಯಾದವ್ ಅರಿತಿದ್ದಾರೆ. ತಮ್ಮ ಪಕ್ಷ ಕೇವಲ "ಮುಸ್ಲಿಂ ಮತ್ತು ಯಾದವರ...

ಈ ಸಂದರ್ಭದಲ್ಲಿ ಶಾಸಕ ಅಶೋಕ ಪಟ್ಟಣ ಅವರು 10 ದಿನಗಳಲ್ಲಿ ರಾಮದುರ್ಗ ತಾಲೂಕನ್ನು ಬರಪೀಡಿತ ಎಂದು ಘೋಷಣೆ ಮಾಡಿಸುವುದಾಗಿ ಭರವಸೆ ನೀಡಿದ್ದರು. ಈ ಕುರಿತು ಈ ದಿನ.ಕಾಮ್ ಪ್ರಶ್ನಿಸಿದಾಗಲೂ, ರಾಮದುರ್ಗವನ್ನು ಬರಪೀಡಿತ ಎಂದು ಘೋಷಿಸದಿದ್ದರೆ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಶಾಸಕರು ತಿಳಿಸಿದ್ದರು.

ಇದೀಗ ಸರ್ಕಾರದ ಮೂರನೇ ಪಟ್ಟಿಯಲ್ಲಿ ರಾಮದುರ್ಗ ತಾಲೂಕು ಸೇರ್ಪಡೆಯಾಗಿದ್ದು, ಶಾಸಕರ ಭರವಸೆಯಂತೆ ಬರ ಘೋಷಣೆಯಾಗಿರುವುದು ರೈತರಲ್ಲಿ ಸಂತಸ ಮೂಡಿಸಿದೆ.

Advertisements

ಅದೇ ರೀತಿ ಸವದತ್ತಿ, ಗೋಕಾಕ ಹಾಗೂ ಕಾಗವಾಡ ತಾಲೂಕುಗಳ ರೈತರೂ ಬರ ಘೋಷಣೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು. ಇದೀಗ ಈ ಮೂರು ತಾಲೂಕುಗಳನ್ನೂ ಬರಪೀಡಿತ ಪಟ್ಟಿಗೆ ಸೇರಿಸಲಾಗಿದೆ.

ಎರಡನೇ ಪಟ್ಟಿಯ 9 ತಾಲೂಕುಗಳ ಜೊತೆಗೆ ಮೂರನೇ ಪಟ್ಟಿಯಲ್ಲಿ 4 ತಾಲೂಕುಗಳು ಸೇರ್ಪಡೆಯಾಗಿರುವುದರಿಂದ ಬೆಳಗಾವಿ ಜಿಲ್ಲೆಯ ಒಟ್ಟು 13 ತಾಲೂಕುಗಳು ಬರಪೀಡಿತ ತಾಲೂಕುಗಳಾಗಿವೆ.

ಬರದಿಂದ ಸಂಕಷ್ಟಕ್ಕೊಳಗಾಗಿರುವ ರೈತರಿಗೆ ಸರ್ಕಾರದ ಪರಿಹಾರ ಹಾಗೂ ಇತರೆ ಸೌಲಭ್ಯಗಳು ಶೀಘ್ರವಾಗಿ ದೊರೆಯಬೇಕು ಎಂಬುದು ರೈತರ ಆಶಯವಾಗಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ ಹಾಕಿದ ಮಾಧ್ಯಮಗಳು

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ...

ಕಲಬುರಗಿಯಲ್ಲಿ ಸೆ.27ರಂದು ಬಸವಾದಿ ಶರಣರ ಹಿಂದೂ ಸಮಾವೇಶ : ಕನೇರಿ ಸ್ವಾಮೀಜಿಗೆ ಅನುಮತಿ ಬೇಡ

ಕಲಬುರಗಿಯಲ್ಲಿ ಸೆ. 27ರಂದು ಹಮ್ಮಿಕೊಳ್ಳಲಾಗಿರುವ ಕನೇರಿ ಮಠದ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಎಸ್‌ಐಟಿ ಚಾರ್ಜ್‌ಶೀಟ್ ಸಲ್ಲಿಕೆ, ಪಟ್ಟಿಯಲ್ಲಿಲ್ಲ ಚಂಪತ್ ರಾಯ್ ಹೆಸರು

ಅಯೋಧ್ಯೆಯ ಶ್ರೀ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ದೇಣಿಗೆ ಹಣ ಹಾಗೂ ಕಾಣಿಕೆಗಳ...