ಬೆಳಗಾವಿ | ರಾಣಿ ಚೆನ್ನಮ್ಮ ವಿವಿ ಶುಲ್ಕ ಹೆಚ್ಚಳ: ವಿದ್ಯಾರ್ಥಿಗಳ ಮೇಲೆ ಹೆಚ್ಚಿದ ಆರ್ಥಿಕ ಹೊರೆ

Date:

ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಕಾಲೇಜು ಪ್ರವೇಶಾತಿ ಹಾಗೂ ಸೆಮಿಸ್ಟರ್ ಪರೀಕ್ಷಾ ಶುಲ್ಕ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿರುವುದು ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಅದರಲ್ಲೂ ಗ್ರಾಮೀಣ ಹಾಗೂ ಬಡ ಕುಟುಂಬಗಳಿಂದ ಬರುವ ವಿದ್ಯಾರ್ಥಿಗಳಿಗೆ ಹೆಚ್ಚುವರಿ ಶುಲ್ಕವು ಶಿಕ್ಷಣದ ಮೇಲಿನ ಆರ್ಥಿಕ ಹೊರೆಯನ್ನು ಮತ್ತಷ್ಟು ಹೆಚ್ಚಿಸಿದೆ.

- Advertisement -

ಮೊದಲ ವರ್ಷದಲ್ಲಿ ವಿದ್ಯಾರ್ಥಿಗಳು ₹3,355 ಪ್ರವೇಶಾತಿ ಶುಲ್ಕ ಪಾವತಿಸುವುದರ ಜೊತೆಗೆ, ಮೊದಲ ಸೆಮಿಸ್ಟ‌ರ್ ಪರೀಕ್ಷಾ ಶುಲ್ಕವಾಗಿ ₹1,285 ಹಾಗೂ ಎರಡನೇ ಸೆಮಿಸ್ಟ‌ರ್ ಪರೀಕ್ಷಾ ಶುಲ್ಕವಾಗಿ ಮತ್ತೆ ₹1,285 ಪಾವತಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಎರಡನೇ ವರ್ಷದಲ್ಲಿ ₹2,904 ಪ್ರವೇಶಾತಿ ಶುಲ್ಕದೊಂದಿಗೆ ಮೂರನೇ ಮತ್ತು ನಾಲ್ಕನೇ ಸೆಮಿಸ್ಟ‌ರ್ ಪರೀಕ್ಷಾ ಶುಲ್ಕವಾಗಿ ತಲಾ ₹1,390 ಪಾವತಿಸಲಾಗಿದೆ. ಮೂರನೇ ವರ್ಷದಲ್ಲಿ ₹3,215 ಪ್ರವೇಶಾತಿ ಶುಲ್ಕದೊಂದಿಗೆ ಐದನೇ ಸೆಮಿಸ್ಟರ್ ಪರೀಕ್ಷಾ ಶುಲ್ಕ ₹1,600ಕ್ಕೆ ಏರಿಕೆಯಾಗಿದೆ.

ಪ್ರವೇಶಾತಿ ಹಾಗೂ ಪರೀಕ್ಷಾ ಶುಲ್ಕದ ಜೊತೆಗೆ ಪುಸ್ತಕ, ಸಾರಿಗೆ, ವಸತಿ ಸೇರಿದಂತೆ ಇತರೆ ಶೈಕ್ಷಣಿಕ ವೆಚ್ಚಗಳನ್ನು ವಿದ್ಯಾರ್ಥಿಗಳು ಭರಿಸಬೇಕಿದೆ. ಹೀಗಾಗಿ ಪ್ರತಿಯೊಂದು ಸೆಮಿಸ್ಟರ್‌ನಲ್ಲೂ ಪರೀಕ್ಷಾ ಶುಲ್ಕ ಪಾವತಿಸುವುದು ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳಿಗೆ ಕಷ್ಟಕರವಾಗುತ್ತಿದೆ.

ಶುಲ್ಕದ ಮೊತ್ತ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೆಲ ವಿದ್ಯಾರ್ಥಿಗಳು ಶಿಕ್ಷಣ ಮುಂದುವರಿಸುವುದಕ್ಕೂ ಆರ್ಥಿಕ ಸಮಸ್ಯೆ ಎದುರಿಸುವ ಪರಿಸ್ಥಿತಿ ನಿರ್ಮಾಣವಾಗಬಹುದು ಎಂಬ ಆತಂಕ ವ್ಯಕ್ತವಾಗಿದೆ. ಉನ್ನತ ಶಿಕ್ಷಣ ಎಲ್ಲ ವರ್ಗದ ವಿದ್ಯಾರ್ಥಿಗಳಿಗೂ ಕೈಗೆಟುಕುವಂತಿರಬೇಕು ಎಂಬುದು ವಿದ್ಯಾರ್ಥಿಗಳು ಹಾಗೂ ಪೋಷಕರ ಆಶಯವಾಗಿದೆ.

ಈ ಹಿನ್ನೆಲೆಯಲ್ಲಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯವು ವಿದ್ಯಾರ್ಥಿಗಳ ಆರ್ಥಿಕ ಪರಿಸ್ಥಿತಿಯನ್ನು ಪರಿಗಣಿಸಿ ಶುಲ್ಕ ಹೆಚ್ಚಳದ ಕುರಿತು ಮರುಪರಿಶೀಲನೆ ನಡೆಸಬೇಕು. ಬಡ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಶುಲ್ಕದಲ್ಲಿ ರಿಯಾಯಿತಿ ಅಥವಾ ಇತರ ಅನುಕೂಲಕರ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದು ವಿದ್ಯಾರ್ಥಿಗಳ ಬೇಡಿಕೆಯಾಗಿದೆ.

ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಕ್ಷಣವೇ ಕುಟುಂಬಗಳಿಗೆ ಹೆಚ್ಚುವರಿ ಆರ್ಥಿಕ ಹೊರೆಯಾಗಬಾರದು. ಪ್ರವೇಶಾತಿ ಹಾಗೂ ಪರೀಕ್ಷಾ ಶುಲ್ಕ ನಿರಂತರವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬಡ ಮತ್ತು ಗ್ರಾಮೀಣ ಕುಟುಂಬಗಳ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕುವಂತಾಗಬಾರದು. ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯವು ವಿದ್ಯಾರ್ಥಿಗಳ ಆರ್ಥಿಕ ಪರಿಸ್ಥಿತಿಯನ್ನು ಪರಿಗಣಿಸಿ ಶುಲ್ಕ ಹೆಚ್ಚಳವನ್ನು ಮರುಪರಿಶೀಲಿಸಿ, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ರಿಯಾಯಿತಿ ಅಥವಾ ಸೂಕ್ತ ನೆರವು ನೀಡುವ ಮೂಲಕ ಶಿಕ್ಷಣ ಎಲ್ಲರಿಗೂ ಕೈಗೆಟುಕುವಂತೆ ಮಾಡಬೇಕಿದೆ.

1002439636

ವರದಿ: ರೇಣುಕಾ ಹಿರಗನ್ನವರ (ಬಿ.ಎ. ಪದವಿ ವಿದ್ಯಾರ್ಥಿನಿ)

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಜೂನ್‌ವರೆಗೆ ಕುಡಿಯುವ ನೀರಿಗೆ ಕೊರತೆಯಾಗದಂತೆ ಕ್ರಮ: ಸಚಿವ ಸತೀಶ ಜಾರಕಿಹೊಳಿ

ಮುಂದಿನ ಜೂನ್‌ವರೆಗೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ...

ಮಳೆ ಕೊರತೆ: ಬೆಳಗಾವಿ ಜಿಲ್ಲೆಯ ಬಹುತೇಕ ತಾಲೂಕುಗಳು ಬರಪೀಡಿತ ಪಟ್ಟಿಗೆ?

ಮಳೆ ಕೊರತೆ ಮುಂದುವರಿದರೆ ಬೆಳಗಾವಿ ಜಿಲ್ಲೆಯ ಎರಡುಮೂರುರ ತಾಲೂಕುಗಳನ್ನು ಹೊರತುಪಡಿಸಿ ಬಹುತೇಕ...

ಬೆಳಗಾವಿ | ಜಾನಪದ ಸಂಸ್ಕೃತಿ ಉಳಿಸಲು ಮಹಿಳೆಯರ ಒಗ್ಗಟ್ಟು ಅಗತ್ಯ: ಸಿದ್ದು ಹಂಪಿಹೋಳಿ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸಾಲಾಪೂರ ಗ್ರಾಮದಲ್ಲಿ ಗುರ್ಜಿ ಟೀಮ್ ಹಾಗೂ...

ಬೆಳಗಾವಿ | ಆಸ್ತಿ ವಿವಾದ: ಪಂಚಾಯಿತಿ ಕಚೇರಿಯಲ್ಲೇ ತಂದೆ ಮಗಳ ಕೊಲೆ

ಆಸ್ತಿ ಹಂಚಿಕೆ ವಿಚಾರದ ವಿವಾದ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ...