ಎಪ್ರಿಲ್ ತಿಂಗಳ ಗೃಹ ಲಕ್ಷ್ಮೀ ಹಣ ಬಿಡುಗಡೆಗೆ ಕ್ರಮ ವಹಿಸುವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾಹಿತಿ ನೀಡಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಪ್ರಿಲ್ ತಿಂಗಳ ಗೃಹಲಕ್ಷ್ಮಿ ಹಣದ ಬಿಲ್ಲಿಂಗ್ ಆಗ್ತಿದೆ. ತಕ್ಷಣವೇ ಹಣ ಬಿಡುಗಡೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಮಾರ್ಚ್ ತಿಂಗಳ ಗೃಹ ಲಕ್ಷ್ಮಿ ಹಣದ ಸಮಸ್ಯೆ ಇದೆ. ಈ ಬಗ್ಗೆ ಚರ್ಚಿಸಿ, ಸಮಸ್ಯೆ ಬಗೆಹರಿಸುತ್ತೇವೆ ಎಂದರು.