ಮಲಪ್ರಭಾ ಅಣೆಕಟ್ಟಿನಿಂದ ಬೆಳಗಾವಿ ಜಿಲ್ಲೆಯ ಸವದತ್ತಿ ಭಾಗದ ಕೆರೆಗಳನ್ನು ತುಂಬಿಸಲು ಅಗತ್ಯ ಪ್ರಮಾಣದ ನೀರು ಬಿಡುಗಡೆ ಮಾಡಬೇಕು ಎಂದು ಶಾಸಕ ವಿಶ್ವಾಸ ವೈದ್ಯ ಒತ್ತಾಯಿಸಿದರು.
ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ಮಳೆ ಕೊರತೆಯಿಂದ ಸವದತ್ತಿ ಭಾಗದಲ್ಲಿ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕೆರೆಗಳನ್ನು ತುಂಬಿಸುವ ಮೂಲಕ ಮುಂದಿನ ದಿನಗಳಲ್ಲಿ ಕುಡಿಯುವ ನೀರು ಹಾಗೂ ಕೃಷಿ ಚಟುವಟಿಕೆಗಳಿಗೆ ಅನುಕೂಲ ಕಲ್ಪಿಸಬೇಕು ಎಂದರು.
ಯರಗಟ್ಟಿ ಭಾಗದಲ್ಲಿ ಕುಡಿಯುವ ನೀರಿನ ಕಾಮಗಾರಿಗಳನ್ನು ಕೈಗೊಳ್ಳಲು ಅಮೃತ್ ಯೋಜನೆಯಡಿ ಹೆಚ್ಚುವರಿ ಅನುದಾನ ಅಗತ್ಯವಿದ್ದು, ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.
ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು, ಮಲಪ್ರಭಾ ಜಲಾಶಯದಿಂದ ಗದಗ, ನವಲಗುಂದ, ಸವದತ್ತಿ ಸೇರಿದಂತೆ ವಿವಿಧ ಪ್ರದೇಶಗಳಿಗೆ ನೀರು ಬಿಡುಗಡೆ ಕುರಿತು ಸಲಹಾ ಸಮಿತಿ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.



