ಬೆಳಗಾವಿ ಜಿಲ್ಲೆಯ ಯರಗಟ್ಟಿ, ಸವದತ್ತಿ ಹಾಗೂ ರಾಮದುರ್ಗ ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸುವ ಕುರಿತು ಎರಡು ದಿನಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂರು ತಾಲೂಕುಗಳಲ್ಲಿ ಸುಮಾರು 29 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ಹೆಸರು ಹಾಗೂ ಉದ್ದಿನ ಬೆಳೆಗಳು ಸಂಪೂರ್ಣ ಹಾನಿಗೊಳಗಾಗಿವೆ. ಈ ಹಿನ್ನೆಲೆಯಲ್ಲಿ ಹಾನಿಗೊಳಗಾದ ಬೆಳೆಗಳಿಗೆ ಮಧ್ಯಂತರ ಪರಿಹಾರ ಘೋಷಿಸಲಾಗಿದ್ದು, ಪ್ರತಿ ಎಕರೆಗೆ ₹2,500 ವಿಮೆ ಪರಿಹಾರ ರೈತರಿಗೆ ದೊರೆಯಲಿದೆ ಎಂದರು.
ಅಥಣಿ ಹಾಗೂ ಕಾಗವಾಡ ತಾಲೂಕುಗಳಲ್ಲಿಯೂ ಮಳೆ ಕೊರತೆ ಕಂಡುಬಂದಿದೆ. ಈ ಕುರಿತು ಕೂಡ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.




