ಬೆಳಗಾವಿ । ಏತ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುವಂತೆ ಸಚಿವರಿಗೆ ಮನವಿ

Date:

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ರೈತರು ಹಲವು ವರ್ಷಗಳಿಂದ ಎದುರಿಸುತ್ತಿರುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ನೆನೆಗುದಿಗೆ ಬಿದ್ದಿರುವ ಮೂರು ಏತ ನೀರಾವರಿ ಯೋಜನೆಗಳ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಹಾಗೂ ರಾಮದುರ್ಗ ತಾಲೂಕನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸುವಂತೆ ಆಗ್ರಹಿಸಿ ರಾಜ್ಯ ರೈತರ ಸಂಘಟನೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿಯವರಿಗೆ, ಮನವಿ ಸಲ್ಲಿಸಿದರು.

- Advertisement -

ರಾಮದುರ್ಗ ತಾಲೂಕಿನ ವೀರಭದ್ರೇಶ್ವರ ಏತ ನೀರಾವರಿ, ಸಾಲಾಪುರ ಬಸವೇಶ್ವರ ಏತ ನೀರಾವರಿ ಹಾಗೂ ಸತ್ತಿಗೇರಿ ಏತ ನೀರಾವರಿ ಯೋಜನೆಗಳು ಹಲವು ವರ್ಷಗಳಿಂದ ಪೂರ್ಣಗೊಳ್ಳದೆ ಬಾಕಿ ಉಳಿದಿವೆ. ಇದರಿಂದ ಸಾವಿರಾರು ಎಕರೆ ಕೃಷಿ ಭೂಮಿ ನೀರಿನ ಕೊರತೆಯಿಂದ ಬಳಲುತ್ತಿದ್ದು, ರೈತರು ಮಳೆಯನ್ನೇ ಅವಲಂಬಿಸಿ ಕೃಷಿ ಮಾಡುವಂತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಸಮರ್ಪಕ ನೀರಾವರಿ ಸೌಲಭ್ಯವಿಲ್ಲದೆ ಪದೇಪದೇ ಬೆಳೆಹಾನಿ ಸಂಭವಿಸುತ್ತಿದ್ದು, ರೈತರು ಸಾಲಬಾಧೆ ಮತ್ತು ಆರ್ಥಿಕ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಉದ್ಯೋಗದ ಕೊರತೆಯಿಂದ ರೈತರ ಮಕ್ಕಳು ಬೇರೆ ರಾಜ್ಯಗಳಿಗೆ ವಲಸೆ ಹೋಗುವ ಪರಿಸ್ಥಿತಿಯೂ ನಿರ್ಮಾಣವಾಗಿದೆ ಎಂದು ರೈತರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ರೈತ ಸಂಘನೆಯ ಪದಾಧಿಕಾರಿಗಳಾದ ಮಲ್ಲಿಕಾರ್ಜುನ ರಾಮದುರ್ಗ, ಮಹಾದೇವ ತ್ಯಾವಟಗಿ, ಸುರೇಶ ಗುಂಜೇರಿ, ಮಂಜುನಾಥ ದೇಸಾಯಿ, ಈರಣ್ಣ ರಾಜನಾಳ, ಕರೆಪ್ಪ ಬಸರಗಿ, ನಿಂಗಪ್ಪ ಜೋಗಿ, ನಾಗಪ್ಪ ಮಾಯನ್ನವರ, ಸಿದ್ದಪ್ಪ ಜಾಲಿಮರದ, ಬೀರಪ್ಪ ಮಾಯನ್ನವರ, ಬಸವರಾಜ,ದ್ಯಾಮಣ್ಣ ಪೊತ್ತೆನ್ನವರ ಹಾಗೂ ಇತರರು ಉಪಸ್ಥಿತರಿದ್ದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ ನಗರದಲ್ಲಿ ನಾಳೆ ಸಕ್ಕರೆ ಕಾರ್ಖಾನೆ ಕಾರ್ಮಿಕರ ರಾಜ್ಯಮಟ್ಟದ ಬೃಹತ್‌ ಸಮಾವೇಶ

ಸಕ್ಕರೆ ಕಾರ್ಖಾನೆ ಕಾರ್ಮಿಕರ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಕರ್ನಾಟಕ ಯುನೈಟೆಡ್...

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...