ಬೆಳಗಾವಿ | ದಟ್ಟ ಅರಣ್ಯದಲ್ಲಿ ಕಾಣೆಯಾಗಿದ್ದ ವೃದ್ಧನ ರಕ್ಷಣೆ

Date:

ಬೆಳಗಾವಿ ಜಿಲ್ಲೆಯ ಖಾನಾಪುರ ಅರಣ್ಯ ಇಲಾಖೆ ಹಾಗೂ ಹೆಮ್ಮಡಗ ಗ್ರಾಮಸ್ಥರು ರಾತ್ರಿಯಿಡೀ ನಡೆಸಿದ ಸಂಘಟಿತ ಶೋಧ ಕಾರ್ಯಾಚರಣೆಯಲ್ಲಿ, ಭೀಮಗಢ ವನ್ಯಜೀವಿ ಅಭಯಾರಣ್ಯದ ದಟ್ಟ ಅರಣ್ಯದಲ್ಲಿ ಕಾಣೆಯಾಗಿದ್ದ 65 ವರ್ಷದ ವೃದ್ಧನನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ.

- Advertisement -

ಖಾನಾಪುರ ತಾಲೂಕಿನ ಹೆಮ್ಮಡಗ ಗ್ರಾಮದ ನಿವಾಸಿ ಹೆಮ್ಮಣ್ಣ ಮದಾರ್‌ ಅವರು ಜೂನ್ 10ರಂದು ತಮ್ಮ ದನಗಳನ್ನು ಮೇಯಿಸಲು ಕಾಡಿಗೆ ತೆರಳಿದ್ದರು. ಸಂಜೆ ವೇಳೆಗೆ ದನಗಳು ಮನೆಗೆ ಮರಳಿದರೂ ಹೆಮ್ಮಣ್ಣ ಮದಾ‌ರ್ ಮನೆಗೆ ಹಿಂದಿರುಗದ ಕಾರಣ ಕುಟುಂಬ ಸದಸ್ಯರು ಹಾಗೂ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಹುಲಿಗಳು, ಚಿರತೆಗಳು, ಕರಡಿಗಳು ಸೇರಿದಂತೆ ವಿವಿಧ ಕಾಡು ಪ್ರಾಣಿಗಳ ವಾಸಸ್ಥಳವಾಗಿರುವ ಭೀಮಗಢ ವನ್ಯಜೀವಿ ಅಭಯಾರಣ್ಯದಲ್ಲಿ ವ್ಯಕ್ತಿಯೊಬ್ಬರು ನಾಪತ್ತೆಯಾಗಿದ್ದರಿಂದ ಪರಿಸ್ಥಿತಿ ಗಂಭೀರವಾಗಿತ್ತು. ಮಾಹಿತಿ ಪಡೆದ ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಗ್ರಾಮಸ್ಥರ ಸಹಕಾರದೊಂದಿಗೆ ವ್ಯಾಪಕ ಶೋಧ ಕಾರ್ಯಾಚರಣೆ ಕೈಗೊಂಡರು.

ರಾತ್ರಿಯಿಡೀ ನಡೆದ ಶೋಧ ಕಾರ್ಯಾಚರಣೆಯ ವೇಳೆ ಗ್ರಾಮಕ್ಕೆ ಮರಳುವಾಗ ದಾರಿ ತಪ್ಪಿದ್ದ ಹೆಮ್ಮಣ್ಣ ಮದಾರ್‌ ಅವರು ಡೊಂಗರ್ಗಾಂವ್ ರಸ್ತೆಯ ಸಮೀಪದ ಮಲ್ಕಿ ಫಾರ್ಮ್ ಬಳಿಯ ದೊಡ್ಡ ಬಂಡೆಯ ಕೆಳಗೆ ಆಶ್ರಯ ಪಡೆದಿರುವುದು ಪತ್ತೆಯಾಯಿತು. ಬಳಿಕ ಅವರನ್ನು ಸುರಕ್ಷಿತವಾಗಿ ಗ್ರಾಮಕ್ಕೆ ಕರೆತಂದು ಕುಟುಂಬಸ್ಥರಿಗೆ ಒಪ್ಪಿಸಲಾಯಿತು.

ಅರಣ್ಯ ಇಲಾಖೆ ಹಾಗೂ ಗ್ರಾಮಸ್ಥರ ಸಮಯೋಚಿತ ಕಾರ್ಯಾಚರಣೆಯಿಂದ ಸಂಭವನೀಯ ಅನಾಹುತ ತಪ್ಪಿದ್ದು, ವೃದ್ಧ ಸುರಕ್ಷಿತವಾಗಿ ಮನೆ ಸೇರಿದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಮತ್ತು ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಡಚಿ ರೈಲು ಮಾರ್ಗ ಕಾಮಗಾರಿಗೆ ವೇಗ ನೀಡಿ; ರೈಲ್ವೆ ಹೋರಾಟಕ್ಕೆ ರೈತರೂ ಕೈಜೋಡಿಸಿ: ಕುತ್ಬುದ್ದೀನ್ ಖಾಜಿ

ದಶಕಗಳಿಂದ ಕುಂಟುತ್ತ ಸಾಗುತ್ತಿರುವ ಕುಡಚಿ ರೈಲು ಮಾರ್ಗದ ಕಾಮಗಾರಿಯನ್ನು ತ್ವರಿತಗೊಳಿಸಿ, ಯೋಜನೆಯನ್ನು...

ಬೆಳಗಾವಿ | ಸರ್ಕಾರದಲ್ಲಿ ಹಣ ಇಲ್ಲ, ಸಿಎಂ ಮಾತಿಗೆ ಒಪ್ಪದ ರೈತರು, ಸಾಲ ಮಾಡಿಯಾದರೂ ಕಬ್ಬಿಗೆ ಬೆಲೆ ನೀಡಿ: ಚೂನಪ್ಪ ಪೂಜೇರಿ

ಕಬ್ಬು ಬೆಳೆಗಾರರ ಬೇಡಿಕೆಗಳ ಕುರಿತು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ಮುಖ್ಯಮಂತ್ರಿ...

ವಾಯವ್ಯ ಕರ್ನಾಟಕ‌ ಸಾರಿಗೆಗೆ ‘ಚೆನ್ನಮ್ಮ’ ಹೆಸರು ಮರುನಾಮಕರಣ: ಸಿಎಂ ಡಿ‌ಕೆ ಶಿವಕುಮಾರ್

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ (NWKRTC) ವೀರರಾಣಿ ಕಿತ್ತೂರು ಚೆನ್ನಮ್ಮ...