ಬೆಳಗಾವಿ : ರೈಲು ಯೋಜನೆಗಳ ಪರಿಶೀಲನೆ: ಸಂಸದ ಶೆಟ್ಟರ್ ಅಧಿಕಾರಿಗಳೊಂದಿಗೆ ಚರ್ಚೆ

Date:

ನೈರುತ್ಯ ರೈಲ್ವೆ ವಲಯದ ಮಹಾ ಪ್ರಬಂಧಕರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಅವರು ಸೋಮವಾರ ಸಭೆ ನಡೆಸಿ, ತಮ್ಮ ಕ್ಷೇತ್ರದ ವಿವಿಧ ರೈಲ್ವೆ ಯೋಜನೆಗಳ ಪ್ರಗತಿ ಕುರಿತು ವಿವರವಾಗಿ ಮಾಹಿತಿ ಪಡೆದರು.

- Advertisement -

ಪ್ರಸ್ತಾಪಿತ ಬೆಳಗಾವಿ- ಕಿತ್ತೂರು -ಧಾರವಾಡ ನೂತನ ರೈಲು ಮಾರ್ಗದ ಕುರಿತು ಅಧಿಕಾರಿಗಳು, ಧಾರವಾಡ ಸಮೀಪ 16 ಎಕರೆ ಜಮೀನು ಹೊರತುಪಡಿಸಿ ಅಗತ್ಯವಿರುವ ಭೂ ಸಮೀಕ್ಷೆ ಪೂರ್ಣಗೊಂಡಿದೆ. ರಾಜ್ಯ ಸರ್ಕಾರದಿಂದ ಭೂಮಿ ಹಸ್ತಾಂತರವಾದ ತಕ್ಷಣ ಟೆಂಡರ್ ಪ್ರಕ್ರಿಯೆ ಆರಂಭಿಸಲಾಗುತ್ತದೆ, ಎಂದು ತಿಳಿಸಿದ್ದಾರೆ. ಭೂಮಿ ಹಸ್ತಾಂತರದ ವಿಷಯದಲ್ಲಿ ರಾಜ್ಯ ಸರ್ಕಾರದೊಂದಿಗೆ ಚರ್ಚಿಸುವುದಾಗಿ ಸಂಸದರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ಲೋಕಾಪುರ–ರಾಮದುರ್ಗ–ಸವದತ್ತಿ–ಧಾರವಾಡ ನೂತನ ರೈಲು ಮಾರ್ಗದ ಪೂರ್ವ ಸಮೀಕ್ಷೆ ಅನುಮೋದನೆಗಾಗಿ ರೈಲ್ವೆ ಮಂಡಳಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕೆಂದು ಶೆಟ್ಟರ್ ಅಧಿಕಾರಿಗಳಿಗೆ ಸೂಚಿಸಿದರು.

ಬೆಳಗಾವಿ ನಗರದಲ್ಲಿನ ಲೆವಲ್ ಕ್ರಾಸಿಂಗ್ 381 ಬಳಿ ಎರಡನೇ ಲೈನ್ ಕಾಮಗಾರಿ ಗತಿ ತುಂಬ ನಿಧಾನವಾಗಿದೆ ಎಂದು ಅವರು ಗಮನ ಸೆಳೆದರು. ವಾಹನ ಸಂಚಾರ ಮಾರ್ಗ ಬದಲಾವಣೆಗಾಗಿ ಅಗತ್ಯ ಪರವಾನಗಿಗಳನ್ನು ಪೊಲೀಸರಿಂದ ಪಡೆಯಲು ಸೂಚಿಸಿದ ಅವರು, ಸ್ಥಳನ್ನು ಭೇಟಿ ಮಾಡಿ ಕಾಮಗಾರಿ ಶೀಘ್ರ ಪೂರ್ಣಗೊಳಿಸುವಂತೆ ರೈಲ್ವೆ ಮಹಾಪ್ರಬಂಧಕ ಮುಕುಲ್ ಸರನ್ ಮಾಥರ್ ಅವರಿಗೆ ತಿಳಿಸಿದರು.

ಅಮೃತ ಸ್ಟೇಶನ್ ಯೋಜನೆ ಅಡಿಯಲ್ಲಿ ಬೆಳಗಾವಿ ರೈಲು ನಿಲ್ದಾಣದ ಅಭಿವೃದ್ಧಿ ಆಮೆಗಳ ಹೆಜ್ಜೆಯಲ್ಲಿ ಸಾಗುತ್ತಿರುವುದನ್ನು ಸಂಸದರು ತೀವ್ರವಾಗಿ ಎತ್ತಿಹಿಡಿದರು. ಲಿಫ್ಟ್, ಎಲಿವೇಟರ್, ಫುಟ್ ಓವರ್ ಬ್ರಿಡ್ಜ್ ಸೇರಿದಂತೆ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲು ಸೂಚಿಸಿದರು. ಘಟಪ್ರಭಾ ನಿಲ್ದಾಣದ ಫುಟ್ ಓವರ್ ಬ್ರಿಡ್ಜ್ ಕಾಮಗಾರಿಯನ್ನೂ ವೇಗಗೊಳಿಸುವಂತೆ ಒತ್ತಾಯಿಸಿದರು.

ಇದೇ ವೇಳೆ ಬೆಳಗಾವಿ–ಮಣಗೂರ, ಬೆಳಗಾವಿ–ಮಡಗಾಂವ್–ಉಡುಪಿ–ಮಂಗಳೂರು, ಬೆಳಗಾವಿ–ಚೆನ್ನೈ (ತಿರುಪತಿ ಮಾರ್ಗವಾಗಿ) ಹೊಸ ರೈಲುಗಳ ಪ್ರಾರಂಭಕ್ಕೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.
ಬೆಳಗಾವಿ–ಬೆಂಗಳೂರು ವಂದೇ ಭಾರತ ರೈಲು ಬೆಳಿಗ್ಗೆ 6 ಗಂಟೆಗೆ ಬೆಳಗಾವಿಯಿಂದಲೇ ಆರಂಭವಾಗುವಂತೆ ಹಾಗೂ ಹುಬ್ಬಳ್ಳಿ–ಬೆಳಗಾವಿ–ಪುಣೆ ವಂದೇ ಭಾರತ ರೈಲು ವಾರದ ಎಲ್ಲ ದಿನ ಸಂಚರಿಸುವಂತೆ ವ್ಯವಸ್ಥೆ ಮಾಡುವಂತೆ ಸಂಸದರು ಅಧಿಕಾರಿಗಳನ್ನು ಸೂಚಿಸಿದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ರೈತರ ಬೇಡಿಕೆ ಈಡೇರದಿದ್ದರೆ ಹೋರಾಟದ ಸ್ವರೂಪ ಬದಲು: ಚೂನಪ್ಪ ಪೂಜಾರಿ

ಕಬ್ಬಿಗೆ ಸೂಕ್ತ ದರ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ...

ಬೆಳಗಾವಿ | ರೈತರ ಹೋರಾಟಕ್ಕೆ ಎರಡು ಮೂರು ದಿನಗಳಲ್ಲಿ ಶುಭಸುದ್ದಿ: ಜಿಲ್ಲಾಧಿಕಾರಿ ಭರವಸೆ

ಕಬ್ಬಿಗೆ ಸೂಕ್ತ ದರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಾದಯಾತ್ರೆ...

ಬೆಳಗಾವಿ | ಕೇಂದ್ರ ಸರ್ಕಾರ ಸ್ಪಂದಿಸದಿದ್ದರೆ ಅ.17ರಿಂದ ಗುರ್ಲಾಪುರ ಕ್ರಾಸ್ ಬಂದ್ ಎಚ್ಚರಿಕೆ: ಶಶಿಕಾಂತ ಗುರೂಜಿ

ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಗುರ್ಲಾಪುರ ಕ್ರಾಸ್‌ನಲ್ಲಿ ರೈತರು ನಡೆಸುತ್ತಿರುವ...