ಬೆಳಗಾವಿ : ಡಿಸಿಸಿ ಬ್ಯಾಂಕ್ ಚುನಾವಣೆ ಹಿನ್ನಲೆಯಲ್ಲಿ ಗಲಾಟೆ, ಕಾರ್ಯದರ್ಶಿ ಅಪಹರಣ ಯತ್ನ ಆರೋಪ

Date:

ಬೆಳಗಾವಿ ಜಿಲ್ಲೆಯ ಕೇಂದ್ರ ಸಹಕಾರಿ ಬ್ಯಾಂಕ್‌ ನಿರ್ದೇಶಕರ ಚುನಾವಣೆ ಹಿನ್ನಲೆಯಲ್ಲಿ ಶುಕ್ರವಾರ ಚನ್ನಮ್ಮನ ಕಿತ್ತೂರಿನಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ.

- Advertisement -

ಚುನಾವಣೆ ಪ್ರಕ್ರಿಯೆಗೆ ಹಾಜರಾಗಿದ್ದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿಯನ್ನು ಕಾಂಗ್ರೆಸ್ ಕಾರ್ಯಕರ್ತರು ಕಾರಿನಲ್ಲಿ ಕೊಂಡೊಯ್ಯಲು ಯತ್ನಿಸಿದರೆ, ಇದನ್ನು ತಡೆಯಲು ಬಿಜೆಪಿ ಕಾರ್ಯಕರ್ತರು ಮುಂದಾಗಿದ್ದಾರೆ. ಈ ವೇಳೆ ಎರಡೂ ಗುಂಪುಗಳ ನಡುವೆ ವಾಗ್ವಾದ ಉಗ್ರ ಸ್ವರೂಪ ಪಡೆದು ಕೈಕೈ ಮಿಲಾಯುವ ಮಟ್ಟಕ್ಕೆ ತಲುಪಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕಾರಿನ ಗಾಜು ಒಡೆದ ಘಟನೆ ಸಹ ನಡೆದಿದ್ದು, ಕಾರ್ಯದರ್ಶಿಯನ್ನು ಹಾಗೂ ಕಾಂಗ್ರೆಸ್ ಕಾರ್ಯಕರ್ತರನ್ನು ಕಾರಿನಿಂದ ಹೊರಗೆಳೆದು ಒಬ್ಬರಿಗೊಬ್ಬರು ಕಾಲರ್ ಹಿಡಿದು ಹೊಡೆದಾಡಿಕೊಂಡಿದ್ದಾರೆ. ಘಟನೆ ಪೊಲೀಸರ ಸಮ್ಮುಖದಲ್ಲಿಯೇ ನಡೆದಿದ್ದು, ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು. ಜನರು ಹೆಚ್ಚಿನ ಸಂಖ್ಯೆಯಲ್ಲಿ ಕೂಡಿಕೊಂಡ ಹಿನ್ನೆಲೆಯಲ್ಲಿ, ಪೊಲೀಸರಿಗೆ ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಹರಸಾಹಸ ಪಡಬೇಕಾಯಿತು.

ಅಕ್ಟೋಬರ್ 19ರಂದು ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆಯನ್ನು ನಿಗದಿಪಡಿಸಲಾಗಿದೆ. ಪ್ರತಿಯೊಂದು ಪಿಕೆಪಿಎಸ್‌ನಿಂದ ಒಬ್ಬ ಪ್ರತಿನಿಧಿಗೆ ಮಾತ್ರ ಮತದಾನ ಹಕ್ಕು ನೀಡಲು ಕೋರಂ ಸಭೆ ಕಡ್ಡಾಯ. ಇದರ ಅಂಗವಾಗಿ ಚನ್ನಮ್ಮನ ಕಿತ್ತೂರಿನಲ್ಲಿ ಶುಕ್ರವಾರ ಕೋರಂ ಚುನಾವಣೆಯನ್ನು ಕರೆಯಲಾಗಿತ್ತು.

“ಕಾಂಗ್ರೆಸ್ ಸದಸ್ಯರ ಸಂಖ್ಯೆ ಕಡಿಮೆ ಇದ್ದುದರಿಂದ ಚುನಾವಣೆ ಮುಂದೂಡುವ ಪ್ರಯತ್ನ ನಡೆದಿದೆ. ಕಾರ್ಯದರ್ಶಿಯನ್ನು ಕಾರಿನಲ್ಲಿ ಅಪಹರಣ ಮಾಡಲು ಯತ್ನಿಸಿದ್ದು, ಇದರಿಂದಲೇ ಗಲಾಟೆ ಉಂಟಾಗಿದೆ,” ಎಂದು ಬಿಜೆಪಿ ಕಾರ್ಯಕರ್ತರು ದೂರಿದ್ದಾರೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೋರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕಿಡಿಗೇಡಿಗಳು

ಯಾರ ತಂಟೆಗೂ ಹೋಗದೆ ತಿರುಗಾಡುತ್ತಿದ್ದ ಮೂಕ ಪ್ರಾಣಿಯೊಂದರ ಮೇಲೆ ಅಮಾನವೀಯ ಕೃತ್ಯ...

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದಲ್ಲಿ ಗಾಂಧೀಜಿ ಸ್ಮಾರಕ: ಡಿ.ಕೆ.ಶಿವಕುಮಾ‌ರ್

ಮಹಾತ್ಮ ಗಾಂಧೀಜಿ ಪಾಲ್ಗೊಂಡಿದ್ದ ಬೆಳಗಾವಿ ಕಾಂಗ್ರೆಸ್‌ ಅಧಿವೇಶನಕ್ಕೆ ನೂರು ವರ್ಷ ಪೂರ್ಣಗೊಂಡಿರುವ...

ಬೆಳಗಾವಿ | ಬಸ್‌ನಿಂದ ಇಳಿಯಲು ದಾರಿ ಬಿಡಲಿಲ್ಲವೆಂದು ಮಹಿಳೆ ಮೇಲೆ ಹಲ್ಲೆ

ಬಸ್‌ನಿಂದ ಇಳಿಯಲು ದಾರಿ ಬಿಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಮಹಿಳೆಯ...