ರೌಡಿ ಶೀಟರ್‌ಗಳು ಸಮಾಜಘಾತುಕ ಕೃತ್ಯಗಳಲ್ಲಿ ಪಾಲ್ಗೊಳ್ಳಬಾರದು. ಇಂಥ ಕೃತ್ಯಗಳಿಗೆ ಕುಮ್ಮಕ್ಕು ನೀಡಬಾರದು ಹಾಗೂ ತಪ್ಪು ಮಾಡಿದ್ದು ಕಂಡು ಬಂದರೆ ತಕ್ಕ ಶಾಸ್ತಿ ಮಾಡಲಾಗುವದು ಎಂದು ಡಿಸಿಪಿ ರೋಹನ್ ಜಗದೀಶ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಬೆಳಗಾವಿ ನಗರದ ಪೊಲೀಸ್ ಕಮಿಷನರೇಟ್‌ನ ಖಡೇಬಜಾರ್ ವಿಭಾಗದಿಂದ ಬೆಳಗಾವಿ ನಗರದಲ್ಲಿ ಗುರುವಾರ ಆಯೋಜಿಸಿದ್ದ ರೌಡಿ ಪರೇಡ್ ಸಂದರ್ಭದಲ್ಲಿ ಡಿಸಿಪಿ ರೋಹನ್ ಜಗದೀಶ ಮಾತನಾಡಿ ರೌಡಿಗಳು ಹಳೆಯ ಚಾಳಿ ಮುಂದುವರಿಸಬಾರದು. ಸಮಾಜದಲ್ಲಿ ಗೌರವಯುತ ಬದುಕು ರೂಪಿಸಿಕೊಳ್ಳಬೇಕು. ಅನಗತ್ಯ ತಂಟೆಗಳಲ್ಲಿ ಮೂಗ ತೂರಿಸಬೇಡಿ ಎಂದು ಹೇಳಿದರು
ನಿರಂತರ ಹತ್ತು ವರ್ಷ ಸಮಾಜದಲ್ಲಿ ಯಾರ ನೆಮ್ಮದಿಗೂ ಧಕ್ಕೆ ತರದಂತೆ ಜೀವನ ನಡೆಸಬೇಕು. ದೂರುಗಳೂ ಬರದಂತೆ ಇರಬೇಕು. ಹಾಗೆ ಮಾಡಿದರೆ ಮಾತ್ರ ರೌಡಿ ಶೀಟರ್‌ನಿಂದ ತೆರವು ಮಾಡುತ್ತೇವೆ”ಎಂದು ರೌಡಿ ಶೀಟರ್ ಗಳಿಗೆ ಎಚ್ಚರಿಕೆ ನೀಡಿದರು.