ಬೆಳಗಾವಿ | ಪ್ರೇಮ ವೈಷಮ್ಯಕ್ಕೆ ರಹಸ್ಯ ಕೊಲೆ: ಇಬ್ಬರು ಆರೋಪಿಗಳ ಬಂಧನ

Date:

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ರಹಸ್ಯ ಕೊಲೆ ಪ್ರಕರಣದಲ್ಲಿ ಪೊಲೀಸರು ಮಹಾರಾಷ್ಟ್ರದ ಪುಣೆಯಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

- Advertisement -

ಕೊಲ್ಲಾಪುರ ಜಿಲ್ಲೆಯ ಗಡಿಂಗ್ಲಾಜ್ ತಾಲೂಕಿನ ಹೊಳೆಹಿಟ್ಟಿ ಗ್ರಾಮದ ಮೊಹಮ್ಮದ್ ಶಂಶೇರ್ ಖಲೀಫ್ ಕೊಲೆಯಾದ ವ್ಯಕ್ತಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಯುವರಾಜ್‌ ವಿರುಪಾಕ್ಷ ಮುನ್ನೋಳಿ ಹಾಗೂ ಗಡಿಂಗ್ಲಾಜ್ ತಾಲೂಕಿನ ನಿಲಜಿ ಗ್ರಾಮದ ಸ್ವಪ್ರಿಲ್ ಶಿವಾನಂದ ರಾಂಪೂರೆ (21) ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಅಪರಿಚಿತ ಶವ ಪತ್ತೆಯಾದ ಹಿನ್ನೆಲೆಯಲ್ಲಿ ನಿಪ್ಪಾಣಿ ಗ್ರಾಮೀಣ ಠಾಣೆ ಪೊಲೀಸರು ತನಿಖೆ ಆರಂಭಿಸಿದ್ದರು. ತನಿಖಾ ತಂಡ ಪುಣೆಗೆ ತೆರಳಿ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆಯ ಹಿಂದಿನ ಕಾರಣ ಬಯಲಾಗಿದೆ.

ಪೊಲೀಸರ ಪ್ರಕಾರ, ಯುವರಾಜ್ ಮುನ್ನೋಳಿ ಮೃತ ಖಲೀಫ್ ಅವರ ಪುತ್ರಿಯನ್ನು ಕಳೆದ 2-3 ವರ್ಷಗಳಿಂದ ಪ್ರೀತಿಸುತ್ತಿದ್ದನು. ಈ ವಿಚಾರ ಕುಟುಂಬದವರಿಗೆ ತಿಳಿದ ಬಳಿಕ ಊರಿನ ಹಿರಿಯರ ಸಮ್ಮುಖದಲ್ಲಿ ಪಂಚಾಯಿತಿ ನಡೆಸಿ ಪ್ರಕರಣವನ್ನು ಮುಕ್ತಾಯಗೊಳಿಸಲಾಗಿತ್ತು. ಆದರೆ ಇದೇ ವಿಚಾರವಾಗಿ ಯುವರಾಜ್ ಮತ್ತು ಖಲೀಫ್ ನಡುವೆ ವೈಷಮ್ಯ ಬೆಳೆದಿತ್ತು ಎನ್ನಲಾಗಿದೆ.

ಇತ್ತೀಚೆಗೆ ಖಲೀಫ್ ಅವರು ಊರಿನ ಹಿರಿಯ ರಾವ್‌ಸಾಬ್ ಪಾಟೀಲ್ ಅವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದರು. ಈ ಹಿಂದೆ ರಾವ್‌ಸಾಬ್‌ ಪಾಟೀಲ್‌ ಬಳಿ ಕೆಲಸ ಮಾಡುತ್ತಿದ್ದ ಯುವರಾಜ್ ಕೆಲಸ ತೊರೆದಿದ್ದನು. ಖಲೀಫ್ ಹಾಗೂ ರಾವ್‌ಸಾಬ್ ಪಾಟೀಲ್ ಸೇರಿ ತನ್ನ ಮೇಲೆ ಹಲ್ಲೆ ಮಾಡಿಸಲು ಯಾರಿಗಾದರೂ ಸೂಚಿಸಿರಬಹುದು ಎಂಬ ಶಂಕೆ ಯುವರಾಜ್‌ಗೆ ಮೂಡಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಯುವರಾಜ್ ತನ್ನ ಸ್ನೇಹಿತ ಸ್ವಪ್ಟಿಲ್ ರಾಂಪೂರೆ ಜೊತೆಗೂಡಿ ಖಲೀಫ್ ಅವರನ್ನು ತವಂದಿ ಗುಡ್ಡ ಪ್ರದೇಶಕ್ಕೆ ಕರೆದುಕೊಂಡು ಹೋಗಿ ವಿಚಾರಿಸಿದ್ದಾನೆ. ಈ ವೇಳೆ ವಾಗ್ವಾದ ನಡೆದಿದ್ದು, ಇಬ್ಬರೂ ಸೇರಿ ಮಾರಕಾಸ್ತ್ರದಿಂದ ಇರಿದು ಹಾಗೂ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ಪರಾರಿಯಾಗಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ.

ಆರೋಪಿಗಳನ್ನು ಬಂಧಿಸಿದ ನಿಪ್ಪಾಣಿ ಗ್ರಾಮೀಣ ಠಾಣೆ ಪೊಲೀಸರ ಕಾರ್ಯಾಚರಣೆಗೆ ಹಿರಿಯ ಪೊಲೀಸ್ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ದುರ್ಗಾ ದೇವಿ ಮೆರವಣಿಗೆಯಲ್ಲಿ ಭೀಕರ ಅಪಘಾತ: ಮೂವರು ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ

ದುರ್ಗಾ ಮಾತಾ ದೌಡ ದೇವಿ ಮೆರವಣಿಗೆಯಲ್ಲಿ ಸಾಗುತ್ತಿದ್ದ ವಾಹನಕ್ಕೆ ಹಿಂಬದಿಯಿಂದ ಬಂದ...

ಬೆಳಗಾವಿ | ಪ್ರಿಡ್ಜನಲ್ಲಿ ಶಾರ್ಟ್ ಸರ್ಕ್ಯೂಟ್: ಮನೆ ಸುಟ್ಟು ಕರಕಲು, ಮಕ್ಕಳ ಚೀರಾಟ ಕೇಳಿ ಬಂದ ಮನೆ ಮಾಲಕಿ

ಬೆಳಗಾವಿ ನಗರದ ಸಹ್ಯಾದ್ರಿ ನಗರದಲ್ಲಿ ಫ್ರಿಡ್ಜ್‌ನಲ್ಲಿ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್‌ ಉಂಟಾಗಿ...

ಬೆಳಗಾವಿ | ವಿದ್ಯಾರ್ಥಿಗಳು ಬೇಂದ್ರೆ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ವಿರುಪಾಕ್ಷಪ್ಪ ಮಾಮನಿ

ವಿದ್ಯಾರ್ಥಿಗಳು ಮೊಬೈಲ್‌ನಲ್ಲಿ ಕಾಲಹರಣ ಮಾಡದೆ ಕಾವ್ಯ, ಕಾದಂಬರಿ ಹಾಗೂ ಕಥೆಗಳನ್ನು ಓದುವ...