ಬೆಳಗಾವಿ | ರಾಮದುರ್ಗದ ಶಿವಮೂರ್ತೇಶ್ವರ ಮಠದ ಶಾಂತವೀರ ಸ್ವಾಮೀಜಿ ಲಿಂಗೈಕ್ಯ

Date:

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ಶಿವಮೂರ್ತೇಶ್ವರ ಮಠದ ಪೀಠಾಧ್ಯಕ್ಷರಾದ ಶಾಂತವೀರ ಸ್ವಾಮೀಜಿ (74) ಭಾನುವಾರ ತೀವ್ರ ಹೃದಯಾಘಾತದಿಂದ ಲಿಂಗೈಕ್ಯರಾದರು. ಶ್ರೀಗಳ ನಿಧನದ ಸುದ್ದಿ ಭಕ್ತರು ಹಾಗೂ ಸಾರ್ವಜನಿಕರಲ್ಲಿ ತೀವ್ರ ಶೋಕವನ್ನುಂಟು ಮಾಡಿದೆ.

- Advertisement -

ಮೂಲತಃ ರಾಮದುರ್ಗ ತಾಲೂಕಿನ ಕಿನ ಅವರಾದಿ ಗ್ರಾಮದ ಸಿದ್ದಯ್ಯ ಹಾಗೂ ಬಸಮ್ಮ ಪುರಾಣಿಕಮಠ ದಂಪತಿಯ ಪುತ್ರರಾಗಿ 1954ರ ಜೂನ್ 1ರಂದು ಜನಿಸಿದ ಶ್ರೀಗಳು, ಸುರೇಬಾನದಲ್ಲಿ ಪಿಯುಸಿ ಶಿಕ್ಷಣ ಪೂರ್ಣಗೊಳಿಸಿದ್ದರು. ನಂತರ ಶಿವಯೋಗ ಮಂದಿರದಲ್ಲಿ ಸಂಸ್ಕೃತ ಶಿಕ್ಷಣ ಪಡೆದು, ಗದಗದ ಪುಟ್ಟರಾಜ ಹಬ್ಬಯ್ಯ ಮಠದಲ್ಲಿ ಸಂಗೀತ ಅಭ್ಯಾಸ ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

1993ರಲ್ಲಿ ರಾಮದುರ್ಗದ ಶಿವಮೂರ್ತೇಶ್ವರ ಮಠದ ಪೀಠಾಧ್ಯಕ್ಷರಾಗಿ ಪಟ್ಟಾಧಿಕಾರ ವಹಿಸಿಕೊಂಡಿದ್ದ ಅವರು, ಕಳೆದ ಮೂರು ದಶಕಗಳಿಂದ ಧಾರ್ಮಿಕ, ಆಧ್ಯಾತ್ಮಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ್ದರು. ಸರಳ ವ್ಯಕ್ತಿತ್ವ, ಸೌಮ್ಯ ನಡವಳಿಕೆ ಹಾಗೂ ಧರ್ಮಪ್ರಚಾರದ ಮೂಲಕ ಭಕ್ತರ ಪ್ರೀತಿಗೆ ಪಾತ್ರರಾಗಿದ್ದರು.

ಶ್ರೀಗಳ ಪಾರ್ಥಿವ ಶರೀರದ ಅಂತ್ಯಕ್ರಿಯೆಯು ಭಾನುವಾರ ಸಂಜೆ ಶಿವಮೂರ್ತೇಶ್ವರ ಮಠದ ಆವರಣದಲ್ಲಿ ನಡೆಯಲಿದ್ದು, ಅಪಾರ ಸಂಖ್ಯೆಯಲ್ಲಿ ಭಕ್ತರು ಅಂತಿಮ ದರ್ಶನ ಪಡೆಯಲು ಆಗಮಿಸುವ ನಿರೀಕ್ಷೆಯಿದೆ. ಶ್ರೀಗಳ ಅಗಲಿಕೆಗೆ ವಿವಿಧ ಮಠಾಧೀಶರು, ಗಣ್ಯರು ಹಾಗೂ ಭಕ್ತರು ತೀವ್ರ ಸಂತಾಪ ಸೂಚಿಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುದ್ದೇಬಿಹಾಳ | ದಾಸೋಹಿ ರೈತ ಉತ್ಪಾದಕ ಸಹಕಾರಿ ಸಂಘದ ಆರ್ಥಿಕ ಚಟುವಟಿಕೆ: ಗವಿಸಿದ್ದೇಶ್ವರ ಶ್ರೀಗಳಿಂದ ಚಾಲನೆ

ರೈತರೇ ಮಾಲೀಕರಾಗಿ, ರೈತರ ಆರ್ಥಿಕ ಸಬಲೀಕರಣವನ್ನೇ ಕೇಂದ್ರವಾಗಿಟ್ಟುಕೊಂಡು ಅಸ್ತಿತ್ವಕ್ಕೆ ಬಂದಿರುವ ದಾಸೋಹಿ...

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ: ವೈರಲ್ ಆಯ್ತು ರಾಹುಲ್ ಗಾಂಧಿ ‘X’ ಪೋಸ್ಟ್

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ ಎಂದು ಕಾಂಗ್ರೆಸ್ ನಾಯಕ ಹಾಗೂ...

ಗವಿಸಿದ್ದೇಶ್ವರ ಸ್ವಾಮೀಜಿ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದಾರೆಂಬ ಸುಳ್ಳುಸುದ್ದಿ: ತಪ್ಪಿತಸ್ಥನ ವಿರುದ್ಧ FIR

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಆಹ್ವಾನವನ್ನು...